ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ ಮುಹೂರ್ತ ನಿಗದಿ 


Team Udayavani, Oct 28, 2017, 4:16 PM IST

bbmp3.jpg

ಬೆಂಗಳೂರು: ಬಿಬಿಎಂಪಿ ಸ್ಥಾಯಿ ಸಮಿತಿ ಸದಸ್ಯರ ಆಯ್ಕೆ ಕುರಿತು ಮಿತ್ರ ಪಕ್ಷಗಳ ಸದಸ್ಯರಲ್ಲಿ ಗೊಂದಲ ಮುಂದುವರಿದ ಹಿನ್ನೆಲೆಯಲ್ಲಿ ಶುಕ್ರವಾರ ಮತ್ತೆ ಸ್ಥಾಯಿ ಸಮಿತಿ ಸದಸ್ಯರ ಆಯ್ಕೆ ಚುನಾವಣೆ ಮುಂದೂಡಲ್ಪಟ್ಟಿದೆ.

ಸ್ಥಾಯಿ ಸಮಿತಿ ಸದಸ್ಯರ ಆಯ್ಕೆಗೆ ಬೆಳಗ್ಗೆ 8ಕ್ಕೆ ಚುನಾವಣೆ ನಡೆಯಬೇಕಿತ್ತು. ಆದರೆ ಕಾಂಗ್ರೆಸ್‌, ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳ ಯಾವೊಬ್ಬ ಸದಸ್ಯರೂ ನಾಮಪತ್ರ ಸಲ್ಲಿಸಲಿಲ್ಲ ಹಾಗೂ ಕೋರಂ ಕೂಡ ಇರಲಿಲ್ಲ. ಹೀಗಾಗಿ, ಚುನಾವಣಾಧಿಕಾರಿ ಜಯಂತಿ ಅವರು ನವೆಂಬರ್‌ 10ಕ್ಕೆ ಚುನಾವಣೆ ಮುಂದೂಡಿದರು. ಈ ಮೂಲಕ ಸತತ ಎರಡನೇ ಬಾರಿ ಚುನಾವಣೆ ಮುಂದೂಡಿದಂತಾಯಿತು.  

ಚುನಾವಣೆ ವೇಳಾಪಟ್ಟಿಯಂತೆ ಶುಕ್ರವಾರ ಪ್ರಾದೇಶಿಕ ಆಯುಕ್ತರು ಚುನಾವಣೆ ಪ್ರಕ್ರಿಯೆಗೆ ಚಾಲನೆ ನೀಡಿದರು. ಆದರೆ, ಬೆಳಗ್ಗೆ 8ರಿಂದ 9.30ರವರೆಗೆ ನಾಮಪತ್ರ ಸಲ್ಲಿಕೆ ಆಗಬೇಕಾಗಿತ್ತು. ಒಂದೇ ಒಂದು ನಾಮಪತ್ರ ಸಲ್ಲಿಕೆಯಾಗಲಿಲ್ಲ. ಅಷ್ಟೇ ಅಲ್ಲ, ಬೆಳಗ್ಗೆ 11.30ಕ್ಕೆ ಸ್ಥಾಯಿ ಸಮಿತಿ ಸದಸ್ಯರ ಆಯ್ಕೆ ಪ್ರಕ್ರಿಯೆಗೆ ಹಾಜರಾತಿ ಪಡೆಯಲಾಯಿತು.

ಈ ಮಧ್ಯೆ ಸದಸ್ಯರು ಸಭೆಗೆ ಹಾಜರಾಗಬಹುದು ಎಂದು 5 ನಿಮಿಷ ಕಾಲಾವಕಾಶ ನೀಡಿದರು. ಆದರೆ ಯಾರೊಬ್ಬರೂ ಹಾಜರಾಗಲಿಲ್ಲ. ಈ ಹಿನ್ನೆಲೆಯಲ್ಲಿ ಚುನಾವಣೆಯನ್ನು ನವೆಂಬರ್‌ 10ಕ್ಕೆ ನಡೆಸಲಾಗುವುದು ಎಂದು ಘೋಷಿಸಿ ಜಯಂತಿ ಸಭೆ ಮುಂದೂಡಿದರು.

9ಕ್ಕೆ ನಾಮಪತ್ರ ಸಲ್ಲಿಕೆ
ನವೆಂಬರ್‌ 10ಕ್ಕೆ ನಡೆಯಲಿರುವ ಚುನಾವಣೆಗೆ ನ. 9ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ. ಸ್ಥಾಯಿ ಸಮಿತಿ ಸದಸ್ಯರಾಗಿ ಆಯ್ಕೆ ಬಯಸುವರು ನ. 9ರ ಬೆಳಗ್ಗೆ 10ರಿಂದ ಸಂಜೆ 5.30ರವರೆಗೆ ಕೌನ್ಸಿಲ್‌ ಕಾರ್ಯದರ್ಶಿ ಬಳಿ ನಾಮಪತ್ರ ಸಲ್ಲಿಸಲು ತಿಳಿಸಲಾಗಿದೆ.

ಬಿಜೆಪಿ ಸದಸ್ಯರು ನ. 2ರಂದು ಬಿಜೆಪಿ ರ್ಯಾಲಿ ಇದೆ. ಆದ್ದರಿಂದ ಸ್ಥಾಯಿ ಸಮಿತಿಯ ಸದಸ್ಯರ ಆಯ್ಕೆಯ ಚುನಾವಣೆ ಮುಂದೂಡಲು ಸಹಕರಿಸಿ ಎಂದು ಕೋರಿದ್ದರು. ಅದರಂತೆ ನಾವ್ಯಾರೂ ನಾಮಪತ್ರ ಸಲ್ಲಿಸಿಲ್ಲ. ಉಳಿದಂತೆ ಕಾಂಗ್ರೆಸ್‌ನಲ್ಲಿ ಯಾವುದೇ ಗೊಂದಲವಿಲ್ಲ ಎಂದು ಆಡಳಿತ ಪಕ್ಷದ ನಾಯಕ ಮಹಮದ್‌ ರಿಜ್ವಾನ್‌ ಸ್ಪಷ್ಟಪಡಿಸಿದರು.  

ಈ ನಡುವೆ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಗಳ ಹಂಚಿಕೆ ಬಗ್ಗೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಡುವೆ ಗೊಂದಲ ಮುಂದುವರಿದಿದೆ. ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿಯನ್ನು ಜೆಡಿಎಸ್‌ಗೆ ಬಿಟ್ಟು ಕೊಡಲು ಹಿರಿಯ ಕಾಂಗ್ರೆಸ್‌ ಸದಸ್ಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಟಾಪ್ ನ್ಯೂಸ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

15-ccb

Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್‌ ಸಾಧ್ಯತೆ

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

6

Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್‌ ನಿಲ್ದಾಣವೇ ಇಲ್ಲ !

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

5

Puttur: ಗ್ರಾಮ ಚಾವಡಿಗೆ 150 ವರ್ಷ ಹಳೆಯ ಕಟ್ಟಡವೇ ಗತಿ!

4

Sullia: ಉಪಟಳ ಮಾಡುವ ಕೋತಿಗಳಿಗೆ ಶಾಕ್‌ ಟ್ರೀಟ್‌ಮೆಂಟ್‌!

3(1

Sullia: ಬಸ್‌ ತಂಗುದಾಣ ನಿರ್ವಹಣೆಗೆ ನಿರಾಸಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.