ಶಾಲೆಗಳಲ್ಲಿ ಕನ್ನಡ ಕಡ್ಡಾಯ: ಟ್ವೀಟ್ನಲ್ಲಿ ಸಿಎಂ ಸಮರ್ಥನೆ
Team Udayavani, Oct 29, 2017, 7:40 AM IST
ಬೆಂಗಳೂರು: ರಾಜ್ಯದ ಸಿಬಿಎಸ್ಇ ಹಾಗೂ ಐಸಿಎಸ್ಇ ಶಾಲೆಗಳಲ್ಲಿ ಒಂದು ಅಥವಾ ಎರಡನೇ ವಿಷಯವಾಗಿ ಕನ್ನಡವನ್ನು ಕಡ್ಡಾಯ ಬೋಧನೆ ಮಾಡಬೇಕು ಎಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ತೀವ್ರ ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರದ ನಿರ್ಧಾರವನ್ನು ಟ್ವೀಟ್ ಮೂಲಕ
ಸಮರ್ಥಿಸಿಕೊಂಡಿದ್ದಾರೆ.
ಸಿದ್ದರಾಮಯ್ಯ ಅವರು ಶನಿವಾರ ಟ್ವೀಟ್ ಮಾಡಿ, ಮಕ್ಕಳ ಪರಿಣಾಮಕಾರಿ ಬೌದ್ಧಿಕ ವಿಕಾಸಕ್ಕೆ ಮಾತೃಭಾಷಾ ಕಲಿಕೆ ಮಹತ್ವದ್ದು ಎಂಬುದನ್ನು ಅರಿತ ರಾಜ್ಯ ಸರ್ಕಾರ ಪ್ರಾಥಮಿಕ ಶಾಲೆಗಳಲ್ಲಿ ಕನ್ನಡ ಭಾಷಾ ಬೋಧನೆ ಕಡ್ಡಾಯಗೊಳಿಸಿದೆ ಎಂದಿದ್ದಾರೆ. ರಾಜ್ಯ ಸರ್ಕಾರ ನಾಡು ನುಡಿಯ ರಕ್ಷಣೆಗೆ ಬದ್ಧ ಎಂದಿರುವ ಅವರು, ಮಕ್ಕಳ ಪರಿಣಾಮಕಾರಿ ಬೌದಿಟಛಿಕ ವಿಕಾಸಕ್ಕೆ ಮಾತೃಭಾಷಾ ಕಲಿಕೆ ಮಹತ್ವದ್ದು. ಹೀಗಾಗಿ ಎಲ್ಲಾ ಶಾಲೆಗಳಲ್ಲೂ ಒಂದನೇ ತರಗತಿಯಿಂದ ಕನ್ನಡ ಕಲಿಕೆ ಕಡ್ಡಾಯ ಮಾಡಿದ್ದೇವೆ ಎಂದಿದ್ದಾರೆ.
ಪ್ರಸಕ್ತ ವರ್ಷದಿಂದಲೇ ಸಿಬಿಎಸ್ಇ ಹಾಗೂ ಐಸಿಎಸ್ಇ ಬೋರ್ಡ್ನ ಶಾಲೆಗಳು ಸೇರಿ ರಾಜ್ಯದ ಎಲ್ಲಾ ಶಾಲೆಗಳಲ್ಲೂ ಕನ್ನಡವನ್ನು ಒಂದು ವಿಷಯವಾಗಿ 1ನೇ ತರಗತಿಯಿಂದಲೇ ಬೋಧಿಸುವುದು ಕಡ್ಡಾಯ ಮಾಡಿ ಅ.24ರಂದು ಅಧಿಸೂಚನೆ ಹೊರಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.