ಪತ್ನಿಯ ಗರ್ಭಪಾತಕ್ಕೆ ಪತಿಯ ಅನುಮತಿ ಬೇಡ: ಸುಪ್ರೀಂ
Team Udayavani, Oct 29, 2017, 7:05 AM IST
ಹೊಸದಿಲ್ಲಿ: ಪರಿತ್ಯಕ್ತ ಪತ್ನಿ ಗರ್ಭಿಣಿಯಾಗಿದ್ದಲ್ಲಿ, ಗರ್ಭಪಾತ ಮಾಡಿಸಲು ಪತಿಯ ಅನುಮತಿ ಬೇಕಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ವಯಸ್ಕ ಮಹಿಳೆಗೆ ಮಗುವನ್ನು ಪಡೆಯುವ ಅಥವಾ ಗರ್ಭವನ್ನು ತೆಗೆದು ಹಾಕುವ ನಿಟ್ಟಿನಲ್ಲಿ ಪ್ರಶ್ನಾತೀತ ಹಕ್ಕುಗಳು ಇವೆ ಎಂದು ಮುಖ್ಯ ನ್ಯಾಯ ಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠ ಅಭಿಪ್ರಾ ಯಪಟ್ಟಿದೆ. ಚಂಡೀಗಢದ ದಂಪತಿಯ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಪರಿತ್ಯಕ್ತ ಪತ್ನಿಯು ತನ್ನ ಅನುಮತಿ ಪಡೆಯದೇ ಗರ್ಭಪಾತ ಮಾಡಿಸಿಕೊಂಡಿದ್ದು, ತನಗೆ ಪರಿಹಾರ ನೀಡಬೇಕು ಎಂದು ಕೋರಿ ಆಕೆಯ ಪತಿ ಕೋರ್ಟ್ ಮೆಟ್ಟಿಲೇರಿದ್ದ. ಆದರೆ, ಗರ್ಭಪಾತ ಮಾಡಿಸುವುದು ಆಕೆಯ ಹಕ್ಕು ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ತೀರ್ಪು ನೀಡಿತ್ತು. ಅದನ್ನು ಪ್ರಶ್ನಿಸಿ ಆತ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದ.
ಪತಿ-ಪತ್ನಿ ನಡುವೆ ಸಂಬಂಧ ಮುರಿದು ಬಿದ್ದಿರುವುದರಿಂದ ಗರ್ಭಪಾತ ಮಾಡಿಸಲು ಪತಿಯ ಅನುಮತಿ ಪಡೆಯಬೇಕಿಲ್ಲ ಎಂದು ಸುಪ್ರೀಂ ಕೋರ್ಟ್ ನ್ಯಾಯಪೀಠ ಪ್ರತಿಪಾದಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.