ಪ್ರಾದೇಶಿಕ ಭಾಷೆಯಲ್ಲೇ ತೀರ್ಪಿನ ಪ್ರತಿ ಸಿಗಲಿ: ರಾಷ್ಟ್ರಪತಿ
Team Udayavani, Oct 29, 2017, 6:00 AM IST
ಕೊಚ್ಚಿ: ಕನ್ನಡ ಸಹಿತ ಆಯಾ ಪ್ರಾದೇಶಿಕ ಭಾಷೆಯಲ್ಲಿ ನ್ಯಾಯಾಂಗದ ತೀರ್ಪು ಸಿಗುವಂತಾಗಬೇಕು ಎನ್ನುವುದು ಬಹಳ ಕಾಲದಿಂದ ಇರುವ ಒತ್ತಾಯ. ಈಗ ಅದಕ್ಕೆ ಪೂರಕವಾಗಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಕೂಡ ಮಾತನಾಡಿದ್ದಾರೆ. ಎಲ್ಲ ಕೋರ್ಟ್ ತೀರ್ಪುಗಳು ಅರ್ಜಿದಾರರಿಗೆ ಅರ್ಥವಾಗುವ ಭಾಷೆಯಲ್ಲಿದ್ದು, ಇದಕ್ಕಾಗಿ ಪ್ರತ್ಯೇಕ ವ್ಯವಸ್ಥೆ ಆರಂಭಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ. ಹೀಗಾಗಿ ಕನ್ನಡ ಸಹಿತ ಪ್ರಾದೇಶಿಕ ಭಾಷೆಗಳ ಲ್ಲಿಯೇ ತೀರ್ಪು ನೀಡಬೇಕು ಎಂಬ ಒತ್ತಾಸೆಗೆ ಮತ್ತಷ್ಟು ಬಲ ಬಂದಂತಾಗಿದೆ.
ಕೇರಳ ಹೈಕೋರ್ಟ್‌ನ ವಜ್ರ ಮಹೋತ್ಸವ ಕಾರ್ಯ ಕ್ರಮದ ಸಮಾರೋಪ ಸಮಾ ರಂಭದಲ್ಲಿ ಮಾತನಾಡಿದ ರಾಷ್ಟ್ರಪತಿ ಕೋವಿಂದ್, “ಹೈಕೋರ್ಟ್‌ಗಳು ಆಂಗ್ಲ ಭಾಷೆಯಲ್ಲಿ ತೀರ್ಪು ನೀಡುತ್ತವೆ. ಆದರೆ ನಮ್ಮದು ವೈವಿಧ್ಯಮಯ ಭಾಷೆಗಳುಳ್ಳ ದೇಶ. ಅರ್ಜಿದಾರರಿಗೆ ಇಂಗ್ಲಿಷ್‌ನಲ್ಲಿ ನೀಡಿದ ತೀರ್ಪು ಏನೆಂದು ಗೊತ್ತಾಗದೆ ಸಮಸ್ಯೆ ಉಂಟಾಗುವ ಸಾಧ್ಯತೆಯೂ ಇರುತ್ತದೆ. ಹಾಗಾಗಿ ಇದನ್ನು ತಪ್ಪಿಸಲು, ಅರ್ಜಿದಾರರ ಭಾಷೆಗೆ ತೀರ್ಪನ್ನು ಭಾಷಾಂತರ ಮಾಡಿ ಅದರ ಪ್ರಮಾಣೀಕೃತ ಪ್ರತಿ ಯನ್ನು ನೀಡುವ ವ್ಯವಸ್ಥೆ ಜಾರಿಯಾಗಬೇಕು. ಕೇರಳದಲ್ಲಿ ಮಲಯಾಳ, ಪಟ್ನಾದಲ್ಲಿ ಹಿಂದಿ, ಕರ್ನಾಟಕದಲ್ಲಿ ಕನ್ನಡ ಹೀಗೆ ಪ್ರಾದೇಶಿಕ ಭಾಷೆಯಲ್ಲಿ ತೀರ್ಪಿನ ಪ್ರತಿ ಸಿಗುವಂತಾಗಬೇಕು’ ಎಂದಿದ್ದಾರೆ.
ಇದರ ಜತೆಗೆ ವಿಳಂಬ ನ್ಯಾಯದಾನವನ್ನು ತಪ್ಪಿಸ ಬೇಕು ಎಂದೂ ಅಭಿಪ್ರಾಯಪಟ್ಟಿದ್ದಾರೆ. ನ್ಯಾಯ ದಾನ ಪ್ರಕ್ರಿಯೆ ವಿಳಂಬವಾದರೆ ಬಡವರ್ಗದವರು ಮತ್ತು ತುಳಿತಕ್ಕೆ ಒಳಗಾದವರಿಗೆ ನ್ಯಾಯ ದೊರಕಿ ದಂತಾಗುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.