ಪಾರ್ಶ್ವವಾಯು ಅರಿವಿಗೆ ವಾಕಥಾನ್
Team Udayavani, Oct 29, 2017, 11:57 AM IST
ಬೆಂಗಳೂರು: ಪಾರ್ಶ್ವವಾಯು ರೋಗದ ಕುರಿತು ಅರಿವು ಮತ್ತು ಜಾಗೃತಿ ಮೂಡಿಸಲು ಸಾಗರ್ ಆಸ್ಪತ್ರೆಯಿಂದ ಶನಿವಾರ ಹಮ್ಮಿಕೊಂಡಿದ್ದ ವಾಕಥಾನ್ನಲ್ಲಿ ಪಾರ್ಶ್ವವಾಯು ರೋಗದಿಂದ ಮುಕ್ತರಾದ ನೂರಾರು ಮಂದಿ ಭಾಗವಹಿಸಿದ್ದರು.
ಇದೇ ವೇಳೆ ಪಾರ್ಶ್ವವಾಯು ನಿಯಂತ್ರಣ ಮತ್ತು ಜೀವನ ಶೈಲಿಯ ಬಗ್ಗೆ ವೈದ್ಯರು ಮಾಹಿತಿ ನೀಡಿದರು. ವೈದ್ಯ ಡಾ.ಮದನ್ ಗಾಯಕ್ವಾಡ್ ಮಾತನಾಡಿ, ಸಕಾಲಿಕ ಪರೀಕ್ಷೆಯಿಂದ ಪಾರ್ಶ್ವವಾಯು ಬರುವುದನ್ನು ತಡೆಯಬಹುದು. ಈ ರೋಗದ ಮೊದಲ ಲಕ್ಷಣವೇ ಮುಖ ದಿಢೀರನೇ ಸೊಟ್ಟಗಾಗಿ, ಮಾತಿನಲ್ಲಿ ನಡುಕ, ಕೈ ಕಾಲು ಸಾಮರ್ಥ್ಯ ಕಳೆದುಕೊಳ್ಳುವುದು.
ಆರಂಭದಲ್ಲೇ ಗುರುತಿಸಿ ಚಿಕಿತ್ಸೆ ನೀಡಿದರೆ ಸರಿಪಡಿಸಿಕೊಳ್ಳಬಹುದು ಎಂಬ ಸಲಹೆ ನೀಡಿದರು. ಮಾಜಿ ಮಿಸ್ಟ್ರೆಸ್ ಇಂಡಿಯಾ ಪ್ರತಿಭಾ ಸೌನ್ಷಿಮಠ, ಫಿಟ್ನೆಸ್ ತಜ್ಞೆ ವನಿತಾ ಅಶೋಕ್, ಆರ್.ಜೆ.ರಾಜೇಶ್ ಮೊದಲಾದವರು ಉಪಸ್ಥಿತರಿದ್ದರು. ವಾಕಥಾನ್ನಂತರ ಬನಶಂಕರಿಯ ಸಾಗರ್ ಆಸ್ಪತ್ರೆಯಲ್ಲಿ ಉಚಿತ ಪಾರ್ಶ್ವವಾಯು ಪರೀಕ್ಷಾ ಶಿಬಿರ ಆಯೋಜಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.