ಡಾಂಬರೀಕರಣದಲ್ಲಿ ಪ್ಲಾಸ್ಟಿಕ್ ಬಳಕೆ
Team Udayavani, Oct 29, 2017, 11:57 AM IST
ಬೆಂಗಳೂರು: ಇನುಮುಂದೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೊಳ್ಳುವ ರಸ್ತೆ ಡಾಂಬರೀಕರಣದಲ್ಲಿ ಕಚ್ಚಾ ವಸ್ತುವಾಗಿ ಪ್ಲಾಸ್ಟಿಕ್ ಬಳಸಲು ನಿರ್ಧರಿಸಲಾಗಿದೆ. ಗೃಹ ಕಚೇರಿ “ಕೃಷ್ಣಾ’ದಲ್ಲಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಬಿಬಿಎಂಪಿ ಮತ್ತು ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.
ನಗರದಲ್ಲಿ ಪ್ಲಾಸ್ಟಿಕ್ ನಿಷೇಧಿಸಲಾಗಿದೆ. ಆದರೂ ಪ್ಲಾಸ್ಟಿಕ್ ಹಾವಳಿ ಮಾತ್ರ ತಗ್ಗಿಲ್ಲ. ಇದು ಕಸ ವಿಲೇವಾರಿಗೂ ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ರಸ್ತೆ ಡಾಂಬರೀಕರಣಕ್ಕೆ ಬಳಸಿಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಆಯಕ್ತ ಎನ್. ಮಂಜುನಾಥ ಪ್ರಸಾದ್, ನಗರದಲ್ಲಿ ಈವರೆಗೆ ಒಂದು ಲಕ್ಷ ಕೆಜಿ ಪ್ಲಾಸ್ಟಿಕ್ ವಶಪಡಿಸಿಕೊಂಡು 1.67 ಕೋಟಿ ರೂ. ದಂಡ ವಿಧಿಸಲಾಗಿದೆ. ಆದರೆ, ಕೇಸು ದಾಖಲು ಮಾಡುವ ಅಧಿಕಾರ ನಮಗೆ ಇಲ್ಲ.
ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಡಾಂಬರೀಕರಣಕ್ಕೆ ಪ್ಲಾಸ್ಟಿಕ್ ಬಳಸಿಕೊಳ್ಳಲು ನಿರ್ಣಯಿಸಲಾಗಿದೆ. ಈ ಸಂಬಂಧ ಸೋಮವಾರ ಈ ಸಂಬಂಧ ಅಧಿಸೂಚನೆ ಹೊರಬೀಳಲಿದೆ ಎಂದು ತಿಳಿಸಿದರು.
ಇದರಲ್ಲಿ “ವಿಜಿ-10′ ಮತ್ತು “ವಿಜಿ-30′ ಎಂಬ ಎರಡು ಮಾದರಿಗಳಿವೆ. ವಿಜಿ-30ರಲ್ಲಿ ಹೈಗ್ರೇಡ್ ವಿಟಮಿನ್ ಇರುತ್ತದೆ. ಇದನ್ನು ಎಸ್ಆರ್ ದರದಲ್ಲಿ ಸೇರಿಸಲಾಗಿದೆ. ಡಾಂಬರೀಕರಣದಲ್ಲಿ ಪ್ಲಾಸ್ಟಿಕ್ ಬಳಸುವುದರಿಂದ ಹೆಚ್ಚು ಬಾಳಿಕೆ ಬರುತ್ತದೆ ಎಂದೂ ಹೇಳಿದರು.
ಟನ್ ವಿಟಮಿನ್ಗೆ 32 ಸಾವಿರ ರೂ. ಆಗುತ್ತದೆ. ಶೇ. 8ರಷ್ಟು ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ವಿಟಮಿನ್ಗೆ 2,100 ರೂ. ಹೆಚ್ಚುವರಿ ವೆಚ್ಚವಾಗುತ್ತದೆ. ಆದರೂ ರಸ್ತೆಗಳು ಹೆಚ್ಚು ಬಾಳಿಕೆ ಬರುವುದರ ಜತೆಗೆ ವಾಹನಗಳ ಸಂಚಾರ ಸುಗಮವಾಗಿರುತ್ತದೆ. ಮತ್ತೂಂದೆಡೆ ನಗರದಲ್ಲಿ ಪ್ಲಾಸ್ಟಿಕ್ ಹೆಚ್ಚು ಸಂಗ್ರಹವಾಗುವುದರಿಂದ ಅನುಕೂಲವಾಗುತ್ತದೆ ಎಂದರು.
ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್, ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಜೈನ್, ಬಿಬಿಎಂಪಿ ಮೇಯರ್ ಸಂಪತ್ರಾಜ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಕ್ ಸಭೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.