ಭಾರತ ಮಾಲಾ ಯೋಜನೆಯಲ್ಲಿ ಉ.ಕ.ಕ್ಕೆ ಅನ್ಯಾಯ
Team Udayavani, Oct 29, 2017, 12:37 PM IST
ಹುಬ್ಬಳ್ಳಿ: ಕೇಂದ್ರ ಸರಕಾರವು ಭಾರತ ಮಾಲಾ ಯೋಜನೆಯಡಿ ದೇಶಾದ್ಯಂತ ಬೈಪಾಸ್ ರಸ್ತೆ, ರಿಂಗ್ ರಸ್ತೆ ನಿರ್ಮಿಸಲು ಮುಂದಾಗಿದೆ. ಆದರೆ, ಹು-ಧಾ ಅವಳಿ ನಗರ ಸೇರಿದಂತೆ ಉತ್ತರ ಕರ್ನಾಟಕದ ಜಿಲ್ಲಾ, ರಾಜ್ಯ ರಸ್ತೆಗಳು ಹಾಗೂ ರಾಷ್ಟ್ರೀಯ ಹೆದ್ದಾರಿಗಳನ್ನು ಯೋಜನೆಯಡಿ ಘೋಷಿಸದೆ ಅನ್ಯಾಯವೆಸಗಿದೆ ಎಂದು ಶಾಸಕ ಎನ್.ಎಚ್. ಕೋನರಡ್ಡಿ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಭಾರತ ಮಾಲಾ ಯೋಜನೆಯಡಿ ಉತ್ತರ ಕರ್ನಾಟಕದ ರಸ್ತೆಗಳ ಅಭಿವೃದ್ಧಿಗಾಗಿ ಪ್ರಸ್ತಾವನೆ ಸಲ್ಲಿಸುವಂತೆ ರಾಜ್ಯ ಸರಕಾರವನ್ನು ಒತ್ತಾಯಿಸಲಾಗುವುದು. ಆ ನಿಟ್ಟಿನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಚರ್ಚಿಸಲು ಅವಕಾಶ ಕೋರಲಾಗುವುದು.
ಯೋಜನೆ ಬಗ್ಗೆ ಈ ಭಾಗದ ಸಂಸದರಿಗೆ ಹಾಗೂ ರಾಜ್ಯ ಸರಕಾರಕ್ಕೆ ಮಾಹಿತಿ ಇದೆಯೋ, ಇಲ್ಲವೋ ಗೊತ್ತಾಗುತ್ತಿಲ್ಲವೆಂದು ಕುಟುಕಿದರು. ಇನ್ನಾದರೂ ಈ ಭಾಗದ ಸಂಸದರು ಹಾಗೂ ರಾಜ್ಯ ಸರಕಾರವು ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕಿ ಭಾರತ ಮಾಲಾ ಯೋಜನೆಯಡಿ ಉತ್ತರ ಕರ್ನಾಟಕದ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತರಲು ಪ್ರಯತ್ನಿಸಬೇಕು.
ವಿಶೇಷ ಆರ್ಥಿಕ ವಲಯದಲ್ಲಿ ಬರುವ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯ ಕುಸುಗಲ್ಲ-ಬ್ಯಾಹಟ್ಟಿ- ತಿರ್ಲಾಪುರ-ಅಳಗವಾಡಿ-ನರಗುಂದ ವರೆಗೆ ಹಾಗೂ ನವಲಗುಂದ-ನಲವಡಿ ಎರಡು ರಾಷ್ಟ್ರೀಯ ಹೆದ್ದಾರಿಗೆ ಸೇರುವ ರಸ್ತೆಯಾಗಿದೆ.
ಧಾರವಾಡದಿಂದ ರಾಮನಗರ-ಗೋವಾ ವರೆಗೆ, ನವಲಗುಂದದಿಂದ ಸವದತ್ತಿ-ಬೈಲಹೊಂಗಲ- ಬೆಳಗಾವಿವರೆಗೆ, ನರಗುಂದ-ಶಲವಡಿ-ಗದಗ, ಗದಗ-ಬಂಕಾಪುರ-ಶಿರಸಿ, ಹುಬ್ಬಳ್ಳಿ-ಲಕ್ಷ್ಮೇಶ್ವರ, ನವಲಗುಂದ-ರೋಣ-ರಾಯಚೂರು ವರೆಗೆ ರಾಷ್ಟ್ರೀಯ ಹೆದ್ದಾರಿಗಳನ್ನಾಗಿ ಪರಿವರ್ತಿಸಬೇಕು ಎಂದು ಒತ್ತಾಯಿಸಿದರು.
ನಗರದ ಹೊರವಲಯದಲ್ಲಿ ಕಾರವಾರ-ಹುಬ್ಬಳ್ಳಿ ರಸ್ತೆ, ಪುನಾ-ಬೆಂಗಳೂರು ರಸ್ತೆ ಮತ್ತು ಗದಗ ರಸ್ತೆ, ಹುಬ್ಬಳ್ಳಿ-ವಿಜಯಪುರ ರಸ್ತೆಯಿಂದ ಸುಳ್ಳ ಮಾರ್ಗವಾಗಿ ಧಾರವಾಡ-ನರೇಂದ್ರ ರಾಷ್ಟ್ರೀಯ ಹೆದ್ದಾರಿವರೆಗೆ ಬೈಪಾಸ್ ನಿರ್ಮಾಣ ಬಾಕಿಯಿದೆ.
ತಡಸ, ಕಲಘಟಗಿ, ಧಾರವಾಡ, ಹೆಬಸೂರ, ನವಲಗುಂದ, ಅಣ್ಣಿಗೇರಿ ವರೆಗಿನ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯೆಂದು ಘೋಷಣೆಯಾಗಿದೆ. ಆದರೆ ಈವರೆಗೆ ಅದರ ಡಿಪಿಆರ್ ಸಿದ್ಧಪಡಿಸುವ ಕಾರ್ಯ ಪೂರ್ಣಗೊಂಡಿಲ್ಲ. ನವಲಗುಂದ, ನರಗುಂದ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಡಿಪಿಆರ್ ತಯಾರಿಸಿ ಎರಡು ವರ್ಷಗಳು ಕಳೆದರೂ ಇದುವರೆಗೆ ಕಾಮಗಾರಿ ಆರಂಭಗೊಂಡಿಲ್ಲವೆಂದರು.
ಧಾರವಾಡ ಜಿಲ್ಲೆಗೆ 429 ಕೋಟಿ ರೂ. ಸಿಆರ್ ಎಫ್ ಅನುದಾನ ಮಂಜೂರಾಗಿದ್ದರೂ ಎಲ್ಲ ತಾಲೂಕುಗಳಿಗೆ ಸಮನಾಗಿ ಹಂಚಿಕೆ ಮಾಡಿಲ್ಲ. ನವಲಗುಂದ ತಾಲೂಕಿಗೆ ಕೇವಲ 20 ಕೋಟಿ ರೂ. ನೀಡಲಾಗಿದೆ. ಎಲ್ಲ ತಾಲೂಕುಗಳಿಗೆ ಕನಿಷ್ಠ 50 ಕೋಟಿ ರೂ. ಕೊಡಬೇಕು ಎಂದು ಆಗ್ರಹಿಸಿದರು. ಬಿ.ಬಿ. ಗಂಗಾಧರಮಠ, ಶಿವಣ್ಣ ಹುಬ್ಬಳ್ಳಿ, ವಿಕಾಸ ಸೊಪ್ಪಿನ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.