ಮೇಯರ್ ರಾಜೀನಾಮೆ ನೀಡಲಿ: ಮಹಿಳಾ ಮೋರ್ಚಾ
Team Udayavani, Oct 29, 2017, 1:52 PM IST
ಮಂಗಳೂರು, ಅ. 28: ಮಹಾನಗರ ಪಾಲಿಕೆ ಮೇಯರ್ ಕವಿತಾ ಸನಿಲ್ ಅವರು ವಾಸವಿದ್ದ ಅಪಾರ್ಟ್ ಮೆಂಟ್ ಕಾವಲುಗಾರ ಪುಂಡಲೀಕ ಅವರ ಪತ್ನಿ ಕಮಲಾ ಹಾಗೂ ಮಕ್ಕಳಿಗೆ ಹಲ್ಲೆ ನಡೆಸಿರುವುದು ಖಂಡನೀಯ. ಈ ಹಿನ್ನೆಲೆಯಲ್ಲಿ ಮೇಯರ್ ಅವರು ಕೂಡಲೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ಆಗ್ರಹಿಸಿದೆ.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೋರ್ಚಾದ ಅಧ್ಯಕ್ಷೆ ಪೂಜಾ ಪೈ, ನಾನು ಹಾಗೂ ಕಾರ್ಪೊರೇಟರ್ ರೂಪಾ ಡಿ. ಬಂಗೇರ ಅವರು ಅನ್ಯಾಯಕ್ಕೊಳಗಾದ ಮಹಿಳೆಗೆ ನ್ಯಾಯ ಒದಗಿಸಬೇಕೆಂಬ ನಿಟ್ಟಿನಲ್ಲಿ ಕಾವಲುಗಾರನ ಮನೆಗೆ ಭೇಟಿ ನೀಡಿ ಹಲ್ಲೆಗೊಳಗಾದ ಆತನ ಪತ್ನಿಯಿಂದ ಮಾಹಿತಿ ಸಂಗ್ರಹಿಸಿದ್ದೇವೆಯೇ ಹೊರತು ಬೇರೆ ಯಾವುದೇ ಉದ್ದೇಶವಿಲ್ಲ ಎಂದರು.
ಮನಪಾ ಸದಸ್ಯೆ ರೂಪಾ ಡಿ. ಬಂಗೇರಾ ಮಾತನಾಡಿ, ಮೇಯರ್ ರವರಿಗೆ ಧೈರ್ಯ ಇದ್ದಲ್ಲಿ ಅಪಾರ್ಟ್ಮೆಂಟ್ನಲ್ಲಿ ನಡೆದ ಘಟನೆಯ ಸಂಪೂರ್ಣ ಸಿಸಿಟಿವಿ ವೀಡಿಯೋ ಬಿಡುಗಡೆ ಮಾಡಲಿ. ಮೇಯರ್ ರಾಜೀನಾಮೆ ನೀಡುವಂತೆ ಕಾಂಗ್ರೆಸ್ ಮುಖಂಡರು ಮುಂದಾಗಬೇಕು. ಇಲ್ಲದಿದ್ದರೆ, ಮನಪಾದ ಎಲ್ಲ ಕಾಂಗ್ರೆಸ್ ಸದಸ್ಯರ ರಾಜೀನಾಮೆಗೆ ಮಹಿಳಾ ಮೋರ್ಚಾದವರು ಪ್ರತಿಭಟಿಸುವುದಾಗಿ ಅವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮೋರ್ಚಾದ ನಾಯಕಿ ಮಂಜುಳಾ ರಾವ್, ನಮಿತಾ ಶ್ಯಾಂ, ಸಂಧ್ಯಾ ವೆಂಕಟೇಶ್, ಪೂರ್ಣಿಮಾ ರಾವ್, ಬಬಿತಾ ರವೀಂದ್ರ, ಪೂರ್ಣಿಮಾ, ಸುಮಿತ್ರ ಕರಿಯಾ, ಮೀರಾ ಕರ್ಕೇರಾ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.