ವರುಣಾದಿಂದ ಸಿಂಧ್ಯಾಕಣಕ್ಕಿಳಿಯುವ ಸಾಧ್ಯತೆ
Team Udayavani, Oct 30, 2017, 10:45 AM IST
ಬೆಂಗಳೂರು: ಜನತಾ ಪರಿವಾರದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಮತ್ತೆ ಜೆಡಿಎಸ್ ಸೇರ್ಪಡೆ ಖಚಿತವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸ್ವಕ್ಷೇತ್ರ ವರುಣಾದಿಂದ ಅವರನ್ನು ಕಣಕ್ಕಿಳಿಸುವ ಬಗ್ಗೆ ಚಿಂತನೆ ನಡೆದಿದೆ. ಈ ಸಂಬಂಧ ಸಿಂಧ್ಯಾ ಅವರು ಭಾನುವಾರ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರನ್ನು ಅವರ ಪದ್ಮನಾಭನಗರದ ನಿವಾಸದಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಈ ಸಂದರ್ಭ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ
ಕೂಡ ಇದ್ದರು. ಸೋಮವಾರ ಜೆಪಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮ ದಲ್ಲಿ ಸಿಂಧ್ಯಾ ಅಧಿಕೃತವಾಗಿ ಪಕ್ಷ ಸೇರಲಿದ್ದಾರೆಂದು ಮೂಲಗಳು ತಿಳಿಸಿವೆ.
ಮಾತುಕತೆ ವೇಳೆ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ದೇವೇಗೌಡರು ಮಾಡಿಕೊಂಡ ಮನವಿಗೆ ಸಿಂಧ್ಯಾ ಸಕರಾತ್ಮಕವಾಗಿ ಸ್ಪಂದಿಸಿದರು. ಜನತಾಪರಿವಾರವನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಸ್ವತಃ ದೇವೇಗೌಡರೇ ಸಿಂಧ್ಯಾ ಅವರನ್ನು ಮತ್ತೆ ಪಕ್ಷಕ್ಕೆ ಕರೆತರುತ್ತಿದ್ದಾರೆ. ಈಗಾಗಲೇ ಹುಣಸೂರು ಕ್ಷೇತ್ರದಿಂದ ಎಚ್.ವಿಶ್ವನಾಥ್ ಕಣಕ್ಕಿಯುವುದು ಸ್ಪಷ್ಟವಾಗಿದೆ. ಅದೇ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸ್ವಕ್ಷೇತ್ರ ವರುಣಾದಿಂದ ಸಿಂಧ್ಯಾರನ್ನು ಕಣಕ್ಕಿಳಿಸಲು ಚಿಂತನೆ ನಡೆದಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Hyderabad: ಗಂಟಲಿಗೆ ಪೂರಿ ಸಿಲುಕಿ ವಿದ್ಯಾರ್ಥಿ ಸಾವು
Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ
US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್!
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.