ವಾಂತಿ-ಭೇದಿಗೆ ತತ್ತರಿಸಿದ ಮಕ್ಕಳು


Team Udayavani, Oct 30, 2017, 10:47 AM IST

gul-1.jpg

ವಾಡಿ: ಪಟ್ಟಣ ಸಮೀಪದ ಕಡಬೂರ ಗ್ರಾಪಂ ವ್ಯಾಪ್ತಿಯ ಚಾಮನೂರ ಗ್ರಾಮದಲ್ಲಿ ಕಳೆದ ಐದಾರು ದಿನಗಳಿಂದ ಕಾಣಿಸಿಕೊಂಡಿರುವ ವಾಂತಿ ಭೇದಿ  ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಲ್ಲಿನ ವಿವಿಧ ಆಸ್ಪತ್ರೆಗಳಲ್ಲಿ ರೋಗಿಗಳ ನರಳಾಟ ಮುಂದುವರಿದಿದೆ. ಭೀಮಾ ನದಿ ದಡದಲ್ಲಿರುವ ಚಾಮನೂರ ಗ್ರಾಮಸ್ಥರಿಗೆ ಕುಡಿಯಲು ಕಲುಷಿತ ನೀರು ಸರಬರಾಜು ಮಾಡಿದ್ದೇ ಗ್ರಾಮದಲ್ಲಿ ವಾಂತಿ ಭೇದಿ ಪ್ರಕರಣ ಹೆಚ್ಚಲು ಕಾರಣ ಎನ್ನುವುದು ಗ್ರಾಮಸ್ಥರ ಆರೋಪವಾಗಿದೆ.

ಆರಂಭದಲ್ಲಿ ಹಿರಿಯರಲ್ಲಿ ಕಾಣಿಸಿಕೊಂಡಿದ್ದ ಈ ಸಾಂಕ್ರಾಮಿಕ ರೋಗ ಮಕ್ಕಳಿಗೂ ವ್ಯಾಪಿಸಿದೆ. ಪಟ್ಟಣದ ಸರಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೂಕ್ತ ಚಿಕಿತ್ಸೆ ಲಭ್ಯವಾಗದ ಕಾರಣ ಪೋಷಕರು, ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಮಕ್ಕಳಿಗೆ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಜೀವ ಹಿಂಡುವ ವಾಂತಿ ಭೇದಿ ರೋಗಕ್ಕೆ ತುತ್ತಾದ ಜನರು, ಸಂಬಂಧಿಕರು ಆರೋಗ್ಯ ಇಲಾಖೆ, ಗ್ರಾಪಂ ಆಡಳಿತ ಹಾಗೂ ಚುನಾಯಿತ ಜನಪ್ರತಿನಿಧಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

ತಾಲೂಕು ಆಸ್ಪತ್ರೆಯಲ್ಲೂ ದಾಖಲಾಗಿ ಚಾಮನೂರಿನ ಸುಮಾರು ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ಸಂಜೆ ಮತ್ತು ರವಿವಾರ ಬೆಳಗ್ಗೆ ಪಟ್ಟಣದ ಹೆಲ್ತ್‌ ಕೇರ್‌ ಖಾಸಗಿ ಆಸ್ಪತ್ರೆಗೆ ದಾಖಲಾದ 15ಕ್ಕೂ ಹೆಚ್ಚು ಮಕ್ಕಳು ಹೆತ್ತವರ ಮಡಿಲಲ್ಲಿ ನರಳಾಡುತ್ತಿದ್ದಾರೆ. ಆಸ್ಪತ್ರೆಯ ಪ್ರತಿಯೊಂದು ಬೆಡ್‌ಗಳ ಮೇಲೆ ಐದಾರು ವರ್ಷದೊಳಗಿನ ಮಕ್ಕಳೇ ಹೆಚ್ಚಾಗಿ ಚಿಕಿತ್ಸೆಗೆ ದಾಖಲಾಗಿದ್ದು, ಪೋಷಕರ ಸಂಕಟ ಹೇಳತೀರದಾಗಿದೆ.

ಪ್ರಕರಣಕ್ಕೆ ಏನು ಕಾರಣ: ಭೀಮಾ ನದಿಯಿಂದ ಗ್ರಾಮಕ್ಕೆ ಸರಬರಾಜು ಮಾಡುವ ಕುಡಿಯುವ ನೀರಿನ ಜಾಕ್‌ವೆಲ್‌ನಲ್ಲಿ ಕಲುಷಿತ ನೀರು ಸಂಗ್ರಹವಾಗಿತ್ತು ಎನ್ನಲಾಗಿದ್ದು, ನೀರು ಶುದ್ಧೀಕರಿಸದೆ ನೇರವಾಗಿ ನಳಗಳಿಗೆ ಸರಬರಾಜು ಮಾಡಲಾಗಿದೆ. ಮಣ್ಣು ಮಿಶ್ರಿತ ಕಲುಷಿತ ನೀರು ಕುಡಿದು ಜನರು ವಾಂತಿ ಭೇದಿಗೆ ತುತ್ತಾಗಿದ್ದಾರೆ. ಗ್ರಾಪಂ ಆಡಳಿತದ ಬೇಜವಾಬ್ದಾರಿ ಎದ್ದು ಕಂಡಿದೆ. ಅಧಿಕಾರಿಗಳ ನಿಷ್ಕಾಳಜಿಗೆ ಊರಿನ ಜನ ರೋಗಿಗಳಾಗಿ ಆಸ್ಪತ್ರೆಗಳಲ್ಲಿ ಸಂಕಟ ಅನುಭವಿಸುತ್ತಿದ್ದಾರೆ.

ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯವಾಗಿದ್ದರೆ ಉಚಿತವಾಗಿ ಚಿಕಿತ್ಸೆ ಪಡೆಯಬಹುದಿತ್ತು. ಖಾಸಗಿ ಆಸ್ಪತ್ರೆಗಳಿಗೆ ನೂರಾರು ಜನರು ಹೋಗಿ ಹಣ ಸುರಿಯುತ್ತಿದ್ದಾರೆ. ಇಷ್ಟಾದರೂ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿಲ್ಲ. ಈ ಕುರಿತು ದೂರು ನೀಡಬೇಕು ಎಂದರೆ ತಾಲೂಕು ವೈದ್ಯಾಧಿಕಾರಿ ಸುರೇಶ ಮೇಕಿನ್‌ ಅವರ ಮೊಬೈಲ್‌ ಯಾವಾಗಲು ಸ್ವಿಚ್‌ಆಫ್‌ ಆಗಿರುತ್ತದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಗ್ರಾಮದಲ್ಲಿ ಆರೋಗ್ಯ ಶಿಬಿರ ಆರಂಭಿಸಬೇಕು. ಗ್ರಾಮಕ್ಕೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಬೇಕು. ತಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

Kalaburagi: ರೌಡಿ ಶೀಟರ್ ಬರ್ಬರ ಹತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

4

Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.