35ಎ ವಿಧಿಯ ಸಾಂವಿಧಾನಿಕ ಸಿಂಧುತ್ವ: ಇಂದು ಸುಪ್ರೀಂ ನಿರ್ಧಾರ
Team Udayavani, Oct 30, 2017, 11:02 AM IST
ಹೊಸದಿಲ್ಲಿ : ಜಮ್ಮು ಕಾಶ್ಮೀರ ನಿವಾಸಿಗಳಿಗೆ ವಿಶೇಷ ಹಕ್ಕುಗಳು ಮತ್ತು ಸೌಕರ್ಯಗಳನ್ನು ನೀಡುವ ಸಂವಿಧಾನದ 35ಎ ವಿಧಿಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿರುವ ಅರ್ಜಿಗಳ ಒಂದು ಸಮೂಹದ ವಿಚಾರಣೆಯನ್ನು ಇಂದು ಸೋಮವಾರ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ಕೈಗೆತ್ತಿಕೊಳ್ಳಲಿದೆ.
35ಎ ವಿಧಿಯನ್ನು 1954ರಲ್ಲಿ ರಾಷ್ಟ್ರಪತಿಗಳ ಆದೇಶದ ಮೇರೆಗೆ ಸಂವಿಧಾನಕ್ಕೆ ಸೇರಿಸಲಾಗಿತ್ತು. ಈ ವಿಧಿಯು ಜಮ್ಮು ಕಾಶ್ಮೀರ ವಿಧಾನಸಭೆಗೆ, ಸಂವಿಧಾನದ ಸಿಂಧುತ್ವವನ್ನು ಪ್ರಶ್ನಿಸಲಾಗದ ಶಾಸನಗಳನ್ನು ಜಾರಿ ಮಾಡುವ ಅಧಿಕಾರವನ್ನು ನೀಡುತ್ತದೆ.ಇಂತಹ ಶಾಸನಗಳು ಸಂವಿಧಾನದಡಿ ತಮಗಿರುವ ಸಮಾನತೆಯ ಅಥವಾ ಬೇರಾವುದೇ ಬಗೆಯ ಹಕ್ಕುಗಳ ಉಲ್ಲಂಘನೆಯಾಗುವಂತಿದೆ ಎಂದು ದೇಶದ ಇತರ ಯಾವುದೇ ರಾಜ್ಯಗಳ ಜನರು ಕೋರ್ಟಿನಲ್ಲಿ ಪ್ರಶ್ನಿಸುವಂತಿಲ್ಲ
35-ಎ ವಿಧಿಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ದಿಲ್ಲಿಯಲ್ಲಿನ “ವೀ ದ ಸಿಟಿಜನ್ಸ್’ ಎಂಬ ಎನ್ಜಿಓ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದೆ. ರಾಜ್ಯಕ್ಕೆ ನಿರ್ದಿಷ್ಟವಾದ ಕಾನೂನನ್ನು ಅನೂರ್ಜಿತಗೊಳಿಸಬೇಕು ಎಂದು ಈ ಎನ್ಜಿಓ ಒತ್ತಾಯಿಸಿದೆ.
ಸುಪ್ರೀಂ ಕೋರ್ಟ್ ಒಂದೊಮ್ಮೆ ಅರ್ಜಿದಾರರ ಪರವಾಗಿ ತೀರ್ಪಿತ್ತರೆ ವ್ಯಾಪಕ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ಕಾಶ್ಮೀರೀ ಪ್ರತ್ಯೇಕತಾವಾದಿಗಳು ಈ ನಡುವೆ ಎಚ್ಚರಿಕೆ ನೀಡಿದ್ದಾರೆ.
35-ಎ ವಿಧಿಯಲ್ಲಿ ಹಸ್ತಕ್ಷೇಪ ನಡೆಸುವ ಯಾವುದೇ ಯತ್ನಗಳು ಜಮ್ಮು ಕಾಶ್ಮೀರಕ್ಕೆ ಬಗೆಯುವ ದ್ರೋಹ ಎಂದು ಪ್ರತ್ಯೇಕತಾವಾದಿಗಳು ಎಚ್ಚರಿಕೆ ನೀಡಿದ್ದಾರೆ.
ಕಾಶ್ಮೀರಿಗಳ ಹಿತಾಸಕ್ತಿ ಮತ್ತು ಆಶೋತ್ತರಗಳ ವಿರುದ್ಧ ಸುಪ್ರೀಂ ಕೋರ್ಟ್ ತೀರ್ಪು ನೀಡಿದಲ್ಲಿ ರಾಜ್ಯಾದ್ಯಂತ ವ್ಯಾಪಕ ಪ್ರತಿಭಟನೆ ನಡೆಸುವಂತೆ ಪ್ರತ್ಯೇಕವಾದಿ ನಾಯಕರಾಗಿರುವ ಸಯ್ಯದ್ ಅಲಿ ಷಾ ಗೀಲಾನಿ, ಮೀರ್ವೆàಜ್ ಉಮರ್ ಫಾರೂಕ್ ಮತ್ತು ಮೊಹಮ್ಮದ್ ಯಾಸಿನ್ ಮಲಿಕ್ ಅವರನ್ನು ಜನರನ್ನು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
MUST WATCH
ಹೊಸ ಸೇರ್ಪಡೆ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.