ನೀರಿನ ಸಂಪ್ಗೆ ಬಿದ್ದು ತಾಯಿ, ಮಗಳು ಆತ್ಮಹತ್ಯೆ
Team Udayavani, Oct 30, 2017, 11:40 AM IST
ಬೆಂಗಳೂರು: ಮನೆ ಮುಂದಿನ ನೀರಿನ ಸಂಪ್ಗೆ ಬಿದ್ದು ವೃದ್ಧ ತಾಯಿ, ಹಾಗೂ ವಿಕಲಚೇತನ ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಂಚಶೀಲನಗರದ ಪಾರ್ವತಮ್ಮ (56) ಆಶಾ (32) ಮೃತರು.
ಭಾನುವಾರ ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದಿದ್ದ ವೇಳೆ ತಾಯಿ,ಮಗಳು ಡೆತ್ನೋಟ್ ಬರೆದಿಟ್ಟು ನೀರಿನ ಸಂಪ್ಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಗೆ ಬಂದ ಪಾರ್ವತಮ್ಮ ಪತಿ ಹಾಗೂ ಮಗ ಹುಡುಕಾಡಿ, ಕೊನೆಗೆ ಸಂಪ್ಬಳಿ ತೆರಳಿ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದರು.
ಮೃತರು ಸಾಯುವ ಮುನ್ನ ಡೆತ್ನೋಟ್ ಬರೆದಿಟ್ಟಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ. ನಿವೃತ್ತ ಸರ್ಕಾರಿ ನೌಕರರ ಪತ್ನಿಯಾದ ಪಾರ್ವತಮ್ಮ, ವಿಶೇಷ ಚೇತನೆಯಾಗಿರುವ ಅವಿವಾಹಿತ ಮಗಳು ಆಶಾ, ಮತ್ತೂಬ್ಬ ಮಗ ಮನೆಯಲ್ಲಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ. ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor Darshan: 6 ತಿಂಗಳ ಬಳಿಕ ದರ್ಶನ್ ಭೇಟಿ: ಪವಿತ್ರಾ ಭಾವುಕ
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
MUST WATCH
ಹೊಸ ಸೇರ್ಪಡೆ
Actor Darshan: 6 ತಿಂಗಳ ಬಳಿಕ ದರ್ಶನ್ ಭೇಟಿ: ಪವಿತ್ರಾ ಭಾವುಕ
Nimma Vasthugalige Neeve Javaabdaararu review: ಜವಾಬ್ದಾರಿಯಿಂದ ಸಿನಿಮಾ ನೋಡಿ
Bangladesh: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ತಮೀಮ್ ಇಕ್ಬಾಲ್
Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?
Mudhol: ರೈತರ ಜಮೀನಿನಲ್ಲಿ ಮೊಸಳೆ ಪ್ರತ್ಯಕ್ಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.