ರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ನಿರ್ಧಾರ
Team Udayavani, Oct 30, 2017, 12:01 PM IST
ಶಹಾಬಾದ: ನಗರದಲ್ಲಿ ನವೆಂಬರ್ 1ರಂದು ಕನ್ನಡರಾಜ್ಯೋತ್ಸವ ಸಮಾರಂಭವನ್ನು ಅರ್ಥಪೂರ್ಣವಾಗಿ ಆಚರಿಸಲು ಉಪತಹಶೀಲ್ದಾರ ಮಲ್ಲಿಕಾರ್ಜುನ ಶಿವಪುರೆ ಅಧ್ಯಕ್ಷತೆಯಲ್ಲಿ ಕನ್ನಡ ಭವನದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.
ಅಂದು ಬೆಳಗ್ಗೆ 8:30ಕ್ಕೆ ನಗರದ ಎಲ್ಲ ಸರ್ಕಾರಿ ಅಧಿಕಾರಿಗಳು ಹಾಗೂ ಶಾಲಾ-ಕಾಲೇಜಿನ ಮುಖ್ಯಶಿಕ್ಷಕರು, ಶಿಕ್ಷಕರು ಹಾಗೂ ಮಕ್ಕಳು ನಗರದ ಸರ್ಕಾರಿ ಬಾಲಕರ ಪೌಢಶಾಲೆ ಆವರಣದಲ್ಲಿ ಸೇರಬೇಕು. ನಂತರ ಕನ್ನಡಾಂಬೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ನಗರದ ಮುಖ್ಯ ಬೀದಿಗಳಲ್ಲಿ ಸಾಂಸ್ಕೃತಿಕ ಕಲಾ ತಂಡಗಳ ಜತೆಗೆ ಮೆರವಣಿಗೆ ನಗರದ ಸರ್ಕಾರಿ ಬಾಲಕರ ಪ್ರೌಢಶಾಲೆ ವರೆಗೆ ನಡೆಯುವುದು.
ನಂತರ ವಿಶೇಷ ಉಪನ್ಯಾಸ ಸಮಾರಂಭ ನಡೆಸಲಾಗುವುದು ಎಂದರು. ನಗರದ ಎಲ್ಲ ಶಾಲೆ-ಕಾಲೇಜಿನ ಮುಖ್ಯಸ್ಥರು ಶಾಲೆಗಳಲ್ಲಿ ರಾಜ್ಯೋತ್ಸವ ಬೇಗನೆ ಆಚರಿಸಿ, ನಗರದಲ್ಲಿ ಸರ್ಕಾರದಿಂದ ನಡೆಯುವ ಕನ್ನಡರಾಜ್ಯೋತ್ಸವ ಕಾರ್ಯಕ್ರಮಗಳಲ್ಲಿ ಮಕ್ಕಳೊಂದಿಗೆ ಕಡ್ಡಾಯವಾಗಿ ಹಾಜರಾಗಲು ಸೂಚಿಸಲಾಗುವುದು. ವಿವಿಧ ಇಲಾಖೆಯ ಅಧಿಕಾರಿಗಳು ರಾಜ್ಯೋತ್ಸವ ಸಮಾರಂಭಕ್ಕೆ ಸಹಕಾರ ನೀಡಬೇಕೆಂದು ತಿಳಿಸಿದರು.
ಕಸಾಪ ಕಲಬುರಗಿ ಗ್ರಾಮೀಣ ಅಧ್ಯಕ್ಷ ಶರಣೌಡ ಪಾಟೀಲ, ಕಸಾಪ ನಗರ ಅಧ್ಯಕ್ಷ ಮಲ್ಲಿಕಾರ್ಜುನ ಪಟ್ಟಣಕರ್,
ಗ್ರಂಥಪಾಲಕರಾದ ವಿಜಯಕುಮಾರ ಬಾಬನಕರ್, ಡಾ| ಪಿ.ಎಸ್. ಕೊಕಟನೂರ್, ಶಿವಯೋಗಿ ಕಟ್ಟಿ, ಪಶು
ಆಸ್ಪತ್ರೆಸಪತ್ರೆಯ ಡಾ| ನೀಲಪ್ಪ ಪಾಟೀಲ, ಜ್ಯೋತಿ.ಎಸ್.ಜೋಷಿ, ಪ್ರಮೋದ ವಂಟಿ, ಅಲ್ಲಮಪ್ರಭು ಮಸ್ಕಿ, ನಗರಸಭೆ ಆರೋಗ್ಯ ನಿರೀಕ್ಷಕ ಶಿವರಾಜಕುಮಾರ, ಏಮನಾಥ ರಾಠೊಡ, ರವಿ ಬೆಳಮಗಿ,ಅಮೃತಪ್ಪ, ಸಿದ್ದಲಿಂಗ ಬುಳ್ಳಾ, ಬಸವರಾಜ ಕೊಳಕೂರ,ರಾಜಶೇಖರ ದೇವರಮನಿ, ಶಕುಂತಲಾಬಾಯಿ, ಸಿದ್ದಲಿಂಗಮ್ಮ, ಇಮಿಯಾಜ ಹಾಗೂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.