ಮಕ್ಕಳು ಬಿಡಿ…… ನೀವೂ ಚಾಕೋಲೇಟ್‌ ತಿಂದೀರಿ, ಜೋಕೆ!


Team Udayavani, Oct 30, 2017, 12:07 PM IST

30-18.jpg

ಕೊ ಕೋ ಬೆಣ್ಣೆಯನ್ನು ಅತಿ ಹೆಚ್ಚಿನ ಪ್ರಮಾಣದಲ್ಲಿ, ಹಾಲಿನ ಕೆನೆ ಮತ್ತು ಸಕ್ಕರೆಯನ್ನು ಅತ್ಯಲ್ಪ ಪ್ರಮಾಣದಲ್ಲೂ ಬಳಸಿ ಚಾಕೋಲೇಟ್‌ ತಯಾರಿಸಬೇಕು ಎನ್ನುತ್ತದೆ ಕಾನೂನು.  ಆದರೆ ಈ ಕಾನೂನಿನ ಪಾಲನೆಯೇ ಆಗುತ್ತಿಲ್ಲ…

ಇದು ನಿಮ್ಮ ಆರೋಗ್ಯದ ಬಗ್ಗೆ ಮುಂಜಾಗ್ರತೆ ಕ್ರಮಗಳನ್ನು ಸೂಚಿಸಲು ತಯಾರಿಸಿದ ಲೇಖನವಲ್ಲ. ಆದರೆ ಮಾರುಕಟ್ಟೆಯಲ್ಲಿ ಸಿಗುವ ವಿವಿಧ ಮಾದರಿಯ ಚಾಕೋಲೇಟ್‌ಗಳನ್ನು ಪ್ರಯೋಗಾಲಯದಲ್ಲಿ ಕೆಲ ವರ್ಷಗಳ ಹಿಂದೆ ಪರೀಕ್ಷಿಸಿದ ನವದೆಹಲಿಯ ಕನ್ಸೂಮರ್‌ ವಾಯ್ಸನ ವರದಿಯ ಮಾಹಿತಿ ಓದಿದವರು ಹೇಳಲೇಬೇಕಾಗುತ್ತದೆ. ಚಾಕೋಲೇಟ್‌ ತಿಂದೀರಿ, ಜೋಕೆ!

ಭಾರತದಲ್ಲಿ ಚಾಕೋಲೇಟ್‌ ಬಳಕೆ ರುಚಿಗೆ, ಮಜಕ್ಕೆ. ಅದೇ ಅಮೇರಿಕದಲ್ಲಿ, ಒಂದರ್ಥದಲ್ಲಿ ಇದು ಆಹಾರ ಪದಾರ್ಥ. ಅಲ್ಲಿನ ಎಫ್ಡಿಎ ಕಾನೂನು ಶೇ. 100ರಷ್ಟು ಪ್ರಮಾಣದಲ್ಲಿ ಕೊಕೋ ಬೆಣ್ಣೆಯನ್ನು ಬಳಸುವುದನ್ನು ಕಡ್ಡಾಯಗೊಳಿಸಿದೆ. ಉಳಿದಂತೆ ಹಾಲಿನ ಕೆನೆ ಬಳಸಬಹುದಷ್ಟೆ. ಖಾದ್ಯ ತೈಲ ಬಳಸುವಂತಿಲ್ಲ. ಕಡಿಮೆ ಸಕ್ಕರೆ, ಬರೀ ಕೊಕೋ ಬೆಣ್ಣೆಯ ಮೃದು ತಯಾರಿಗಳು ಅಲ್ಲಿ ಆಹಾರ ಪದಾರ್ಥವಾಗಿ ಪರಿಗಣನೆಯಾದುದರಲ್ಲಿ ಅಚ್ಚರಿ ಇಲ್ಲ. ಅಲ್ಲೂ ಖಾದ್ಯ ತೈಲ ಬಳಸಿ ಸೃಷ್ಟಿಸಿದವುಗಳಿವೆ. ಅವುಗಳನ್ನು ಚಾಕೋಲೇಟ್‌ ಎನ್ನುವಂತಿಲ್ಲ! ಚಾಕೋಲೇಟ್‌ಗೆ ಪೂರಕ ಎನ್ನುತ್ತಾರಷ್ಟೆ. ಈ ಮಾಹಿತಿಗಳು ಲೇಬಲ್‌ನಲ್ಲಿ ಸ್ಪಷ್ಟವಾಗಿರುವುದರಿಂದ ಅಮೆರಿಕದ ಗ್ರಾಹಕರು ಪಿಗ್ಗಿ ಬೀಳುವುದಿಲ್ಲ.

ಅಲ್ಲಿ ಆಹಾರ, ಇಲ್ಲಿ ವ್ಯವಹಾರ!
ಅತ್ತ ಬೆಲ್ಜಿಯಂನಲ್ಲಿ ವರ್ಷಕ್ಕೆ 172 ಮಿಲಿಯನ್‌ ಟನ್‌ ಚಾಕೋಲೇಟ್‌ ತಯಾರಾಗುತ್ತದೆ! ನೆನಪಿರಲಿ, ಇದೂ ಹಳೆ ಲೆಕ್ಕ. ವರ್ಷವೊಂದಕ್ಕೆ ಅಲ್ಲಿನ ವ್ಯಕ್ತಿ ಸರಾಸರಿ 9 ಕೆ.ಜಿ. ಚಾಕೋಲೇಟ್‌ತಿನ್ನುತ್ತಾನೆ. ಅಲ್ಲಿ ಚಾಕೋಲೇಟ್‌ಗೆà ಮೀಸಲಾದ ಮ್ಯೂಸಿಯಂಗಳಿವೆ. ಅಷ್ಟಕ್ಕೂ ಬೆಲ್ಜಿಯಂ ಚಾಕೋಲೇಟ್‌ಗಳು ವಿಶ್ವದಲ್ಲಿಯೇ ಶ್ರೇಷ್ಠವೆಂಬ ಖ್ಯಾತಿ ಪಡೆದಿವೆ. ಈಗಲೂ ಅಲ್ಲಿ ಚಾಕೋಲೇಟ್‌ಗಳು ಹಳೆಯ ತಾಂತ್ರಿಕತೆಯಲ್ಲಿ ತಯಾರಾಗುತ್ತಿವೆ. 

2000ದಲ್ಲಿ ಯುರೋಪಿಯನ್‌ ಒಕ್ಕೂಟ ಚಾಕೋಲೇಟ್‌ಗಳಲ್ಲಿ ಶೇ. 5ರ ಖಾದ್ಯತೈಲ ಬಳಕೆಯನ್ನು ಒಪ್ಪಿ ನಿಯಮ ರೂಪಿಸಿತು. ಬೆಲ್ಜಿಯಂನಲ್ಲಿ ಸಮಾಜ ಈ ಹೊಸ ಬದಲಾವಣೆ ಕುರಿತು ತೀಕ್ಷ ¡ವಾಗಿ ಪ್ರತಿಕ್ರಿಯಿಸಿತು. ಜನಾಂದೋಲನವಾಯಿತು. ಅಲ್ಲಿನ ಸಚಿವಾಲಯ ಪೂರ್ಣ ಕೊಕೋ ಬಳಕೆಯ ಚಾಕೋಲೇಟನ್ನೇ ಸಮರ್ಥಿಸಿ ವಿಶೇಷ ನಿಯಮ, ಎಎಂಬಿಎಓವನ್ನು ಜಾರಿಗೊಳಿಸಬೇಕಾಯಿತು. 

ಇಂತಹ ರಾಷ್ಟ್ರಗಳ ಉದಾಹರಣೆಗಳ ಹಿನ್ನೆಲೆಯಲ್ಲಿ ಭಾರತದೆಡೆಗೆ ನೋಡಿದರೆ ನಿರಾಶೆಯಾಗುತ್ತದೆ. ಕೆಲವು ಜನಪ್ರಿಯ ಬ್ರಾಂಡ್‌ಗಳಲ್ಲಿ ಕೂಡ ಖಾದ್ಯ ತೈಲ ಬಳಕೆಯಾಗಿದ್ದು ಕಂಡು ಬಂದಿದ್ದಿದೆ. ಆರೋಗ್ಯ ಸಚಿವಾಲಯದ ಆಹಾರ ಕಲಬೆರಕೆ ತಡೆ ಕಾಯ್ದೆ ಪಿಎಫ್ಎ ಪ್ರಕಾರ ಚಾಕೋಲೇಟ್‌ಗಳಲ್ಲಿ ಖಾದ್ಯ ತೈಲ ಉಪಯೋಗ ಸಂಪೂರ್ಣ ನಿಷಿದ್ಧ. ಭಾರತದ ಕೆಲವು ಚಾಕೋಲೇಟ್‌ಗಳಲ್ಲಂತೂ ಅತ್ಯಂತ ಕೆಟ್ಟ ಪರಿಣಾಮದ ಹೈಡ್ರೋಜನರೇಟೆಡ್‌ ಖಾದ್ಯತೈಲ ಕಂಡುಬಂದಿದೆ. ತಾವು ಖಾದ್ಯ ತೈಲ ಬಳಸಿರುವುದನ್ನಾಗಲೀ, ಯಾವ ಪ್ರಮಾಣದಲ್ಲಿ ಕೊಕೋ ಸೇರಿಸಿದ್ದೇವೆನ್ನುವುದನ್ನಾಗಲೀ ಭಾರತೀಯ ತಯಾರಿಕೆಗಳು ಲೇಬಲ್‌ನಲ್ಲಿ ನಮೂದಿಸುವುದು ಕಡಿಮೆ. ಭಾರತೀಯ ಚಾಕೋಲೇಟ್‌ ತಯಾರಿಕೆಗಳಿಗೆ ಹಿಂಬಾಗಿಲ ಹಾದಿಗೆ ರಾಜಮಾರ್ಗವೇ ತೆರೆದಿದೆ. ಚಾಕೋಲೇಟ್‌ಗಳಲ್ಲಿನ ಕೊಕೋ ಪರಿಮಾಣವನ್ನು ಪತ್ತೆ ಹಚ್ಚಲು ತಾಂತ್ರಿಕತೆಯ ಕೊರತೆ ಇದೆ. ಕನ್ಸೂ$Âಮರ್‌ ವಾಯ್ಸ ಸಂಸ್ಥೆಯು ಬ್ಯೂರೋ ಆಫ್ ಇಂಡಿಯನ್‌ ಸ್ಟಾಂಡರ್ಡ್ಸ್‌ (ಬಿಐಎಸ್‌), ಮೈಸೂರಿನ ಕೇಂದ್ರ ಆಹಾರ ತಾಂತ್ರಿಕ ಸಂಶೋಧನಾಲಯ (ಸಿಎಫ್ಟಿಆರ್‌ಐ) ಹಾಗೂ ಚೆನ್ನೈನ ನ್ಯಾಷನಲ್‌ ಇನ್ಸಿಟ್ಯೂಟ್‌ ಆಫ್ ನ್ಯೂಟ್ರಿಷನ್‌ಅನ್ನು ಸಂಪರ್ಕಿಸಿದರೂ ಅದಕ್ಕೆ ಅಗತ್ಯ ತಾಂತ್ರಿಕತೆ ಪಡೆಯಲು ಸಾಧ್ಯವಾಗದ್ದು ಇದಕ್ಕೆ ಸಾಕ್ಷಿ. 

ಇದು ಬಿಐಎಸ್‌ಗೂ ಗೊತ್ತಿದೆ, ಹಾಗಾಗಿ ನಿಯಮ ಐಎಸ್‌ 1163:1992 ಮೂಲಕ ತಯಾರಿಕೆ ವೇಳೆಯಲ್ಲಿ ಬೆರೆಸುವ ಕೊಕೋ ದ್ರವ್ಯ ಪ್ರಮಾಣವನ್ನು ದಾಖಲಿಸಬೇಕೆಂಬ ಸಲಹೆ ನೀಡುತ್ತದೆ. ಇದೊಂದು ತರಹ ಹಾವೂ ಸಾಯದ, ಕೋಲೂ ಮುರಿಯದ ಸ್ಥಿತಿ. ಚಾಕೋಲೇಟ್‌ನಲ್ಲಿರಬೇಕಾದ ಕನಿಷ್ಠ ಕೊಕೋ ಬಗ್ಗೆ ಯಾವುದೇ ಮಾನದಂಡ ಇಲ್ಲದಿರುವಾಗ ಲೇಬಲ್‌ನಲ್ಲಿ ಆ ಮಾಹಿತಿ ಕೊಡಬೇಕಾದ ಅಗತ್ಯವೇನು ಎಂದೇ ವಿಶ್ವ ಮಾರುಕಟ್ಟೆ ಹೊಂದಿರುವ ಕ್ಯಾಡ್‌ಬರಿ “ಭಾರತದಲ್ಲಿ’ ವಾದಿಸುತ್ತದೆ!

ಚಾಕೋಲೇಟ್‌ಗಳಲ್ಲಿ ಬಳಸುವ ಕೊಕೋ ಬೆಣ್ಣೆ ಸಸ್ಯಜನ್ಯವಾದುದು. ನಮ್ಮಲ್ಲಿನ ತೋಟ, ಗುಡ್ಡಗಳಲ್ಲಿ ಬೆಳೆಸುವ ಕೊಕೋ ಗಿಡಗಳ ಕಾಯೊಳಗೆ ಕೊಕೋ ಬೀಜಗಳಿರುತ್ತವೆ. ಕಾಯಿ ಹಣ್ಣಾದಂತೆ ಈ ಬೀಜಗಳನ್ನು ಬೇರ್ಪಡಿಸಿ, ನಿರ್ದಿಷ್ಟ ಉಷ್ಣತೆಯಲ್ಲಿ ಒಣಗಿಸಲಾಗುತ್ತದೆ. ಕರ್ನಾಟಕದಲ್ಲಿ ಕ್ಯಾಂಪ್ಕೋ ಸಹಕಾರಿ ಸಂಸ್ಥೆ ಕೊಕೋ ಬೀಜಗಳನ್ನು ಖರೀದಿಸಿ, ಸಂಸ್ಕರಿಸುತ್ತದೆ. ಆಫ್ರಿಕನ್‌ ದೇಶಗಳಲ್ಲಿ ರೈತರೇ ಸ್ವತಃ ಬೀಜ ಒಣಗಿಸುವ ಸಂಪ್ರದಾಯವಿದೆ. 

ಆದರೆ ಕೊಕೋ ಬೀಜದೊಳಗಿನಿಂದ ಬೆಣ್ಣೆಯನ್ನು ಯಾಂತ್ರಿಕ ಸಹಾಯದಿಂದ ತೆಗೆಯಲಾಗುತ್ತದೆ. ಇದೇ ಚಾಕೋಲೇಟ್‌ನ ಮುಖ್ಯ ಕಚ್ಚಾ ಪದಾರ್ಥ. ಈ ಕೊಕೋ ಬೆಣ್ಣೆಯ ಕೊಬ್ಬಿನ ಅಂಶ ಆರೋಗ್ಯಕ್ಕೆ ಏನೇನೂ ಹಾನಿಕರವಲ್ಲ ಎಂಬುದು ಯುನೈಟೆಡ್‌ ಸ್ಟೇಟ್ಸ್‌ ಫ‌ುಡ್‌ ಎಂಡ್‌ ಡ್ರಗ್ಸ್‌ ಅಡ್ಮಿನಿಸ್ಟೇಷನ್‌ನ ಸಂಶೋಧನೆಯಿಂದ ಖಚಿತವಾಗಿದೆ.  ಹಾಗಾಗಿಯೇ ಅದು ಅಮೆರಿಕದಲ್ಲಿ ಶೇ. 100ರ ಕೊಕೋ ಬೆಣ್ಣೆಯನ್ನೇ ಬಳಸಬೇಕೆಂಬ ಕಟ್ಟುನಿಟ್ಟಿನ ಮಾನದಂಡವನ್ನು ನಿಗದಿಪಡಿಸಿದೆ.

ಚಾಕೋಲೇಟ್‌ನಲ್ಲಿ ಬಾಯಲ್ಲಿ ಕರಗುವ ಬೆಣ್ಣೆಯ ಅಂಶವಂತೂ ಬೇಕು. ಕೊಕೋ ಬೆಣ್ಣೆಯಲ್ಲವಾದರೆ ಇನ್ನಾವುದೇ ಖಾದ್ಯ ತೈಲವನ್ನಾದರೂ ಬಳಸಲೇಬೇಕು. ತಾಳೆ, ಶೇಂಗಾ, ಸೂರ್ಯಕಾಂತಿ ಎಣ್ಣೆಗಳನ್ನು ಮತ್ತು ಅವುಗಳ ಪರಿಷ್ಕರಿಸಿದ ರೂಪದಲ್ಲಿ ಬಳಸಬಹುದು. ಇವುಗಳ ಕೊಬ್ಬಿನ ಅಂಶ ನಮ್ಮ ಜೀರ್ಣಾಂಗದಲ್ಲಿ ಸುಲಭದಲ್ಲಿ ಕರಗುವಂತದಲ್ಲ. ಅದರಲ್ಲೂ ಚಿಕ್ಕ ಮಕ್ಕಳೇ ಚಾಕೋಲೇಟ್‌ಗಳನ್ನು ಹೆಚ್ಚಾಗಿ ತಿನ್ನುವ ಭಾರತೀಯ ಸನ್ನಿವೇಶದಲ್ಲಿ ಖಾದ್ಯ ತೈಲದ ಪರೀತ ಉಪಯೋಗದ ಅಪಾಯ ಅರ್ಥವಾಗುವಂತದು. ಭಾರತೀಯ ಚಾಕಲೇಟ್‌ ತಯಾರಕರು ಖಾದ್ಯ ತೈಲ ಸೇರಿಸಿಯೂ ಮುಗುಂ ಆಗಿರುವುದು ಕಾಣುತ್ತಲೇ ಇದ್ದೇವೆ.

ಮಕ್ಕಳಿಗೆ ಖುದ್ದು ವಿಷ ಇಕ್ಕುತ್ತಿದ್ದೇವೆ!
ಭಾರತೀಯ ಮಾರುಕಟ್ಟೆಯಲ್ಲಿ ಅನಧಿಕೃತ, ಬೇನಾಮಿ ಚಾಕೋಲೇಟ್‌ಗಳು ಹೇರಳ.  ತಿನ್ನುವ ನಾವೂ ಅಧಿಕೃತತೆಯ ಪರೀಕ್ಷೆಗೆ ಹೋಗುವುದಿಲ್ಲ. “ಮಂಚ್‌’ ಇಲ್ಲದಿದ್ದರೆ, ಅದೇ ರೂಪದ ನಕಲಿ “ಪಂಚ್‌’ ಆದರೂ ಆದೀತು. ನಮ್ಮ ಅಜಾnನ, ಅಲಕ್ಷ್ಯ ಚಾಕೋಲೇಟ್‌ ತಯಾರಕರಿಗಂತೂ ವರದಾನವಾಗಿದೆ. ನಾವು ನಿರೀಕ್ಷಿಸುವುದು ಸಿ ಬಿಐಎಸ್‌ ಚಾಕೋಲೇಟ್‌ಗಳಲ್ಲಿ ಗರಿಷ್ಠ ಶೇ. 55 ಸಕ್ಕರೆ ಅಂಶ ಇರಬಹುದು ಎಂದಿದೆ. ವಾಸ್ತವದಲ್ಲಿ, ಕಡಿಮೆ ಸಕ್ಕರೆ ಇದ್ದಲ್ಲಿ ಹೆಚ್ಚಿನ ಕೊಕೋ ಪ್ರಮಾಣಕ್ಕೆ ಅವಕಾಶ. 

ಭಾರತೀಯರು ಹೆಚ್ಚಾಗಿ ಮಿಲ್ಕಿàಬಾರ್‌ ಮಾದರಿಯ ಚಾಕೋಲೇಟ್‌ಗಳಿಗೆ ಮುಗಿಬೀಳುವುದು ಕಂಡುಬರುತ್ತದೆ. ಹಾಲಿನಿಂದ ತಯಾರಿಸಲ್ಪಡುವ ಚಾಕೋಲೇಟ್‌ ಇದ್ದುದರಲ್ಲಿ ಒಳ್ಳೆಯದು ಎಂಬ ಕಲ್ಪನೆ ಇದೆ. ನಿಜ, ಹಾಲಿನ ಪ್ರಮಾಣ ಹೆಚ್ಚಿದ್ದರೆ ಒಳ್ಳೆಯದೇ. ಅಸಲಿಗೆ ಹೆಚ್ಚಿನಂಶದ ಹಾಲಿನ ಪ್ರಮಾಣ ಚಾಕೋಲೇಟ್‌ನಲ್ಲಿ ನಿಜಕ್ಕೂ ಇದೆಯಾ? ಎಂಬುದು ಸಂಶಯ! “ವಾಯ್ಸ’ ಸಂಸ್ಥೆ ಎನ್‌ಎಬಿಎಲ್‌ ಪ್ರಯೋಗಾಲಯದಲ್ಲಿ 6 ತಿಂಗಳ ಕಾಲ ಚಾಕೋಲೇಟ್‌ಗಳ ನಾನಾತರದ ಪರೀಕ್ಷೆ ಮಾಡಿದಾಗ ಕೆಲವು ಬ್ರಾಂಡ್‌ನ‌ಲ್ಲಿ ಇರುವ ಹಾಲಿನ ಪ್ರಮಾಣ ಎಷ್ಟು ಕಡಿಮೆ ಇತ್ತು ಎಂದರೆ ಲ್ಯಾಬ್‌ ಟೆಸ್ಟ್‌ನಲ್ಲಿ ಅದು ಪತ್ತೆಯಾಗಲೇ ಇಲ್ಲ! ಯೋಚಿಸಬೇಕಾದವರು ನಾವು. ಶೇ. 50 ಸಕ್ಕರೆ, ಶೇ. 5 ಹಾಲು ಎಂದರೆ ಉಳಿದ ಶೇ. 45 ಭಾಗದಲ್ಲಿ ಪ್ರಿಜರ್‌ವೆಟಿವ್‌, ಬಣ್ಣ, ಸ್ವಾದವಿರದ ರಾಸಾಯನಿಕಗಳು. ಮಕ್ಕಳನ್ನೇ ಹೆಚ್ಚಾಗಿ ಆಕರ್ಷಿಸುವ ಚಾಕಲೇಟ್‌ಗಳನ್ನು ಹಟಕ್ಕೆ ಬಿದ್ದವರಂತೆ ತಿನ್ನಿಸುವ ನಾವು ಅಕ್ಷರಶಃ ಮಾಡುತ್ತಿರುವುದೇನು? 

ಚಾಕೋಲೇಟ್‌ ಖರೀದಿಸುವವರು. ಅದರೊಳಗೆ ಅಳವಡಿಸಿರುವ ಅಂಶಗಳನ್ನು ಲೇಬಲ್‌ನಲ್ಲಿ ಓದಿದ ನಂತರವೇ ಕೊಳ್ಳುವುದು ಕ್ಷೇಮ. ಆದರೆ ಲೇಬಲ್‌ನಲ್ಲಿ ಮಾಹಿತಿ ಇರುವುದಿಲ್ಲ, ಮುದ್ರಿಸಿರುವುದಿಲ್ಲ ಎಂಬುದೇ ದೊಡ್ಡ ದೂರು. ಆಗಲೂ ಒಳ್ಳೆಯ ಚಾಕೋಲೇಟ್‌ನ ಪರೀಕ್ಷೆಗೆ ಒಂದು ಸರಳ ಕ್ರಮವಿದೆ. ಆ ಚಾಕೋಲೇಟ್‌ನಲ್ಲಿ ಕೆಲಕಾಲ ಕೈಯಲ್ಲಿ ಭದ್ರವಾಗಿ ಹಿಡಿದುಕೊಳ್ಳಬೇಕು. ಅದೆಷ್ಟು ಬೇಗ ಮೆದುವಾಗುತ್ತದೋ ಅಷ್ಟು ಯೋಗ್ಯ. ಕೊಕೋ ಪ್ರಮಾಣ ಹೆಚ್ಚಿದೆ ಎಂದುಕೊಳ್ಳಬಹುದು.

ಕೊಳ್ಳುವಾಗ ಲೇಬಲ್‌ನಲ್ಲಿ ಅದನ್ನು ಚಾಕೋಲೇಟ್‌ ಎಂದು ನಮೂದಿಸಿರುವುದನ್ನು ಖಚಿತಪಡಿಸಿಕೊಳ್ಳಿ. ಚಾಕೋಬೈಟ್‌, ಚಾಕೋಲೇಯರ್‌ಗಳ ಹೆಸರಿನಲ್ಲಿ ಕಾನೂನಿನ ಕಣ್ತಪ್ಪಿಸಿ ಮಕ್ಕಳಿಗೆ ಸಿ ಸ್ವರೂಪದ ವಿಷ ಉಣ್ಣಿಸುವ ಪ್ರಯತ್ನ ಎಂಬುದು ತುಸು ಕಟು ಮಾತಾದರೂ ಸತ್ಯವೇ! 

ಸಿಹಿ ಹಿಂದಿದೆ ರಕ್ತ ಕಣ್ಣೀರು!
ಚಾಕೋಲೇಟ್‌ನ ಸವಿಯನ್ನು ಮೆಂದು ಮೈ ಮರೆತಿರುವವರಿಗೆ ಹಿಂದಿನ ಕರಾಳ ವ್ಯವಸ್ಥೆಯೊಂದರ ಅರಿವು ಇರಲಿಕ್ಕೆ ಸಾಧ್ಯಲ್ಲ. ಚಾಕೋಲೇಟ್‌ನ ಮುಖ್ಯ ಪದಾರ್ಥ ಕೊಕೋನ ಬಹುಪಾಲು ಆಮದುಗೊಳ್ಳುವುದು ಬಡ ಆಫ್ರಿಕನ್‌ ದೇಶಗಳಿಂದ. ಘಾನಾ ದೇಶ ತನ್ನ ರಫ್ತಿನಿಂದ ಗಳಿಸುವ ಆದಾಯದಲ್ಲಿ ಶೇ. 46 ಕೊಕೋ ಬಾಬತ್ತಿನದು-ಅದೇ ಐವರಿ ಕೋಸ್ಟಾ ಶ್ವ ಮಾರುಕಟ್ಟೆಯ ಶೇ. 43 ಭಾಗವನ್ನು ತಾನೇ ಪೂರೈಸುತ್ತದೆ. ಅತ್ಯಂತ ಕಡಿಮೆ ಬೆಲೆಗೆ ಕೊಕೋವನ್ನು ರಫ್ತು ಮಾಡಲು ಪಶ್ಚಿಮ ಆಫ್ರಿಕಾ ದೇಶಗಳಿಗೆ ಸಾಧ್ಯವಾಗುವುದು ಬಾಲ ಕಾರ್ಮಿಕರಿಂದ! ಒಂದು ಅಂದಾಜಿನ ಪ್ರಕಾರ, 2.84 ಲಕ್ಷ ಮಕ್ಕಳು ಅಹರ್ನಿಶಿ ಜುಜುಬಿ ಸಂಬಳಕ್ಕೆ ದುಡಿಯುತ್ತಿದ್ದಾರೆ. 2000ದಲ್ಲೊಮ್ಮೆ ಅಮೆರಿಕದ ಕಾರ್ಮಿಕ ಇಲಾಖೆ ತನಿಖೆ ನಡೆಸಿ ಕಂಡುಡಿದಿತ್ತು. ಆ ವರ್ಷ ಘಾನಾದಲ್ಲಿ 9ರಿಂದ 12ರ ಮಧ್ಯದ 15 ಸಾರ ಮಕ್ಕಳು ಹತ್ತಿ, ಕಾಫಿ, ಕೊಕೋ ಪ್ಲಾಂಟೇಷನ್‌ಗೆ ಮಾರಲ್ಪಟ್ಟಿದ್ದರು. ಇವರೆಲ್ಲ ಕಳ್ಳ ಸಾಗಾಣಿಕೆಯಾದ ಮಕ್ಕಳು! ಅಲ್ಲಿನ ಕಾರ್ಮಿಕರ, ಅವರ ಕುಟುಂಬಗಳ ಸ್ಥಿತಿ ಹೀನಾಯ. ಒಂದು ಪೌಂಡ್‌ ಚಾಕೋಲೇಟ್‌ಗೆ 400 ಕೊಕೋ ಬೀಜ ಹೆಕ್ಕುವ ಆಫ್ರಿಕನ್‌ ಬಾಲಕ ಮಾತ್ರ ತನ್ನ ಜೀವಮಾನದಲ್ಲಿ ಹೊಳೆಯುವ ಪ್ಯಾಕ್‌ನಲ್ಲಿರುವ ಚಾಕೋಲೇಟ್‌ ರುಚಿ ನೋಡುವುದೇ ಇಲ್ಲ!

ಮಾ.ವೆಂ.ಸ.ಪ್ರಸಾದ್‌, ದತ್ತಿ ನಿರ್ದೇಶಕರು, ಬಳಕೆದಾರರ ವೇದಿಕೆ, ಸಾಗರ

ಟಾಪ್ ನ್ಯೂಸ್

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.