ಹಣ ದೋಖಾ: ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಅಕ್ರಮ ಬಯಲು


Team Udayavani, Oct 31, 2017, 6:10 AM IST

money.jpg

ಬೆಂಗಳೂರು: ಗ್ರಾಮೀಣಾಭಿವೃದಿಟಛಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ವ್ಯಾಪ್ತಿಗೆ ಬರುವ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದಿಟಛಿ ನಿಗಮದ 55 ಕೋಟಿ ರೂ. ಹಣವನ್ನು ಮಂಗಳೂರಿನ ನಕಲಿ ಖಾತೆಗೆ ವರ್ಗ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಬ್ಯಾಂಕ್‌ನ ಇಬ್ಬರು ಹಿರಿಯ ಅಧಿಕಾರಿಗಳ ವಿರುದಟಛಿ ಪೊಲೀಸರು ಎಫ್ಐಆರ್‌ ದಾಖಲಿಸಿ ಕೊಂಡಿದ್ದಾರೆ.

ಈ ಪ್ರಕರಣದ ಕುರಿತು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೋಮವಾರ ಬೆಳಗ್ಗೆ ಪತ್ರಿಕಾಗೋಷ್ಠಿ ಕರೆದು ಆರೋಪಿಸಿದ ಬೆನ್ನಲ್ಲೇ, ಸರ್ಕಾರಿ ಇಲಾಖೆಯ ಹಣ ನಕಲಿ ಖಾತೆಗೆ ವರ್ಗಾವಣೆ ಆಗಿರುವುದನ್ನು ಗ್ರಾಮೀಣಾಭಿವೃದಿಟಛಿ ಸಚಿವ ಎಚ್‌.ಕೆ.ಪಾಟೀಲ್‌ ಒಪ್ಪಿಕೊಂಡಿದ್ದಾರೆ. “”ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಪ್ರಾಥಮಿಕ ತನಿಖಾ ವರದಿಯನ್ನು ಸೋಮವಾರ ಸಂಜೆ ಸಲ್ಲಿಸಿದ್ದು, ಅದರಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು.

ಇಬ್ಬರು ಹಿರಿಯ ಅಧಿಕಾರಿಗಳ ವಿರುದಟಛಿ ಕ್ರಮಕ್ಕೆ ಸೂಚಿಸಲಾಗಿದೆ,” ಎಂದು ತಿಳಿಸಿದ್ದಾರೆ. ಸಂಸ್ಥೆಗೆ ಸೇರಿದ 20 ಮತ್ತು 35 ಕೋಟಿ ಸೇರಿ ಒಟ್ಟು 55 ಕೋಟಿ ರೂ.ಗಳನ್ನು ಮಂಗಳೂರಿನ ಗೋಕುಲ ನಗರದ ನವನಿಧಿ ಕಾಂಪ್ಲೆಕ್ಸ್‌ನಲ್ಲಿರುವ ಕುಳಾಯಿ ಮಂಗಳೂರು ಶಾಖೆಯ ಇಂಡಿಯನ್‌ ಓವರ್‌ಸೀಸ್‌ ಬ್ಯಾಂಕಿನಲ್ಲಿ ಆಗಸ್ಟ್‌ 24 ಮತ್ತು 30ರಂದು ಠೇವಣಿ ಇಡಲಾಗಿದ್ದು, ಈ ಹಣ ದುರುಪಯೋಗವಾಗಿದೆ. ಇದೇ ಬ್ಯಾಂಕಿನಲ್ಲಿ ಕೆಆರ್‌ಐಡಿಎಲ್‌ನ ನಕಲಿ
ಖಾತೆ ಸೃಷ್ಟಿ ಮಾಡಲಾಗಿದ್ದು, ಈ ಖಾತೆ ಮೂಲಕ ಬೇರೆ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ. ಈ ಪೈಕಿ ಬೆಂಗಳೂರಿನ ವಿಜಯಾ ಬ್ಯಾಂಕಿನ ಕೋರ ಮಂಗಲ ಶಾಖೆಯ ಷಾ ಎಕ್ಸ್‌ಪೋರ್ಟ್‌ ಎಂಬ ಖಾತೆಗೆ 50 ಲಕ್ಷ ರೂ ವರ್ಗಾವಣೆ ಮಾಡಲಾಗಿದೆ. ಈ ಮಧ್ಯೆ ಈ ಖಾತೆಯು 2 ವರ್ಷಗಳಿಂದ ಶೂನ್ಯ ವ್ಯವಹಾರದ ಖಾತೆಯಾಗಿದ್ದು, ಇದರಲ್ಲಿ ಇಷ್ಟೊಂದು ದೊಡ್ಡ ಮೊತ್ತದ ಹಣ ಹೇಗೆ ಬರಲು ಸಾಧ್ಯ ಎಂದು ವಿಜಯಾ ಬ್ಯಾಂಕಿನಿಂದ ಮಾಹಿತಿ ಬಂದ ಹಿನ್ನೆಲೆ ಯಲ್ಲಿ ಈ ಸಂಬಂಧ ತನಿಖೆ ನಡೆಸಿ ಅ.28ರೊಳಗೆ ವರದಿ ನೀಡುವಂತೆ ಪ್ರಧಾನ ಕಾರ್ಯದರ್ಶಿಗೆ
ಸೂಚಿಸಲಾಗಿತ್ತು. ಅದರಂತೆ ವರದಿ ಬಂದಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಪತ್ರಿಕಾ ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದಿಟಛಿ ನಿಯಮಿತ ಸಂಸ್ಥೆಯ ಮುಖ್ಯ ಹಣಕಾಸು ಅಧಿಕಾರಿ ಹಾಗೂ ಉಪ ಹಣಕಾಸು ಅಧಿಕಾರಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ನಡುವೆ ಇಲಾಖೆ ಅಧಿಕಾರಿಗಳು ನೀಡಿದ ದೂರಿನ ಅನ್ವಯ ಇಂಡಿಯನ್‌ ಓವರ್‌ಸೀಸ್‌ ಬ್ಯಾಂಕ್‌ನ ಪ್ರಾದೇಶಿಕ ವ್ಯವಸ್ಥಾಪಕರು ಹಾಗೂ ಶಾಖಾ ವ್ಯವಸ್ಥಾಪಕರ ವಿರುದಟಛಿ ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ.

ಕುಮಾರ ಸ್ವಾಮಿ ಬಹಿರಂಗ: ಇದೇ ರೀತಿ ಹಲವಾರು ಇಲಾಖೆಗಳ ನೂರಾರು ಕೋಟಿ ರೂ.ಅನ್ನು ಅಕ್ರಮವಾಗಿ
ವರ್ಗಾವಣೆ ಮಾಡಲಾಗುತ್ತಿದ್ದು, ಚುನಾವಣೆಗಾಗಿ “ವೈಟ್‌ ಮನಿ’ಯನ್ನೇ ಬಳಕೆ ಮಾಡಲಾಗುತ್ತಿದೆ. ಇದು ಸಿದ್ದರಾಮಯ್ಯ ಸರ್ಕಾರದ ಪಾರದರ್ಶಕ ಆಡಳಿತಕ್ಕೆ ಸಾಕ್ಷಿ ಎಂದು ಈ ಅವ್ಯವಹಾರದ ಕುರಿತು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಿಎಂ ಎಚ್‌.ಡಿ. ಕುಮಾರ ಸ್ವಾಮಿ ಲೇವಡಿ ಮಾಡಿದರು.

ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಇದೇ ಇಲಾಖೆ ುಲ್ಲಿ ಸಾವಿರಾರು ಕೋಟಿ ರೂ. ಅಕ್ರಮವಾಗಿ ಬೇರೆ ಬೇರೆ ಕಡೆ ಠೇವಣಿ ಇಡಲಾಗಿತ್ತು. ಈ ಬಗ್ಗೆ ಪ್ರಸ್ತಾಪಿಸಿದಾಗ ಕುಮಾರಸ್ವಾಮಿ ಸುಳ್ಳು ಹೇಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದರು. ಆ ನಂತರ ಎಚ್‌.ಕೆ.ಪಾಟೀಲರೇ ಅಕ್ರಮ ಒಪ್ಪಿಕೊಂಡಿದ್ದರು. ಆದರೆ, ಅಕ್ರಮದಲ್ಲಿ ಭಾಗಿಯಾದವರ ವಿರುದಟಛಿ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು. ಎಚ್‌.ಕೆ.ಪಾಟೀಲರ ಬಗ್ಗೆ ನಮಗೆ
ಗೌರವವಿದೆ. ಆದರೆ, ಈ ರೀತಿ ಸರ್ಕಾರದ ಹಣ ಬೇರೆ ಬೇರೆ ಕಡೆ ಠೇವಣಿ ಇಟ್ಟು ಅಕ್ರಮವಾಗಿ ವರ್ಗ
ಮಾಡುವುದು ಸರಿಯೇ ಎಂದು ಪ್ರಶ್ನಿಸಿದರು.

ಹಿಂದೆ ರಾಮನಗರ-ಚನ್ನಪಟ್ಟಣ ಅಭಿವೃದಿಟಛಿ ಪ್ರಾಧಿಕಾರ ಅವ್ಯವಹಾರ, ಮಂಡ್ಯ ಅಭಿವೃದಿಟಛಿ ಪ್ರಾಧಿಕಾರದಲ್ಲಿ ನಡೆದ ಅವ್ಯವಹಾರದಲ್ಲೂ ನಾಲ್ಕು ವರ್ಷ ಕಳೆದರೂ ಒಬ್ಬರ ಮೇಲೂ ಕ್ರಮ ಕೈಗೊಂಡಿಲ್ಲ ಎಂದು ದೂರಿದರು. ರಾಜ್ಯದಲ್ಲಿ ರೈತರ ಸಾಲ ಮನ್ನಾ ಮಾಡಲು ಸರ್ಕಾರದ ಬಳಿ ಹಣ ಇಲ್ಲ ಎಂದು ಹೇಳಲಾಗುತ್ತಿದೆ. ಆದರೆ, ಬೇರೆ ಬೇರೆ ಇಲಾಖೆಗಳ ಹಣ ಈ ರೀತಿ ಅಕ್ರಮವಾಗಿ ವರ್ಗಾವಣೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಈ ಹಗರಣದ ಬಗ್ಗೆ ಸಿಎಂ ಸಿದ್ದರಾಮಯ್ಯ, ಸಚಿವ ಎಚ್‌.ಕೆ.ಪಾಟೀಲ್‌ ರಾಜ್ಯದ ಜನತೆಗೆ ಉತ್ತರಿಸಬೇಕು. ಹಿಂದೆ ಆಗಿದ್ದ ಹಗರಣದ ತಪ್ಪಿತಸ್ಥರ ವಿರುದಟಛಿ ಕೈಗೊಂಡ ಕ್ರಮದ ಬಗ್ಗೆಯೂ ತಿಳಿಸಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.