ಮೈದಾನದ ಹೆಸರು ಬದಲಿಸಲು ಒತ್ತಾಯ
Team Udayavani, Oct 31, 2017, 12:07 PM IST
ಬೆಂಗಳೂರು: ನಗರದ ಸೆಂಟ್ರಲ್ ಕಾಲೇಜು ಮೈದಾನಕ್ಕೆ “ಕರ್ನಾಟಕ ಏಕೀಕರಣ ಮೈದಾನ’ ಎಂದು ಮರು ನಾಮಕರಣ ಮಾಡುವಂತೆ ಕನ್ನಡ ಒಕ್ಕೂಟ ಅಧ್ಯಕ್ಷ ವಾಟಾಳ್ ನಾಗರಾಜ್ ಒತ್ತಾಯಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ಏಕೀಕರಣವಾಗಿ 61 ವರ್ಷಗಳು ಕಳೆದಿವೆ.
ಆದರೆ, ಏಕೀಕರಣದ ನಡೆದ ನಗರದ ಸೆಂಟ್ರಲ್ ಕಾಲೇಜು ಮೈದಾನ ಅಭಿವೃದ್ಧಿ ಕಂಡಿಲ್ಲ. ಇಂಥ ಸ್ಥಳವನ್ನು ಅಭಿವೃದ್ಧಿಪಡಿಸಿ, ಕರ್ನಾಟಕ ಏಕೀಕರಣ ಮೈದಾನವೆಂದು ನಾಮಕರಣ ಮಾಡಬೇಕು ಎಂದು ಒತ್ತಾಯಿಸಿದರು. ಏಕೀಕರಣ ಸ್ಥಳದ ಬಗ್ಗೆ ಅರಿವಿಲ್ಲದ ಮಂತ್ರಿಗಳು, ಶಾಸಕರು, ಮೈದಾನದ ಭೂಮಿಯ ಖಾಸಗೀಕರಣಕ್ಕೆ ಪಿತೂರಿ ನಡೆಸಿದ್ದು, ಅದಕ್ಕೆ ಅವಕಾಶ ನೀಡುವುದಿಲ್ಲ.
ಇದು ಕನ್ನಡಿಗರ ಶಕ್ತಿ ಕೇಂದ್ರವಾಗಬೇಕು. ಬೆಂಗಳೂರು ವಿವಿ ಆಡಳಿತದಿಂದ ಬೇರೆಯವರಿಗೆ ವರ್ಗಾಯಿಸಬಾರದು. ಮೈದಾನ ಅಭಿವೃದ್ಧಿಯಾಗಬೇಕು. ಇಲ್ಲದಿದ್ದರೆ ಕರ್ನಾಟಕ ಬಂದ್ ಮಾಡಲಾಗುವುದು ಎಂದು ಎಚ್ಚರಿಸಿದರು.
ಅಂದಿನ ಏಕೀಕರಣವನ್ನು ಉದ್ಘಾಟಿಸಿದ ಮಹನೀಯರಾದ ಮೈಸೂರು ಅರಸ ಜಯಚಾಮರಾಜ ಒಡೆಯರ್, ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ, ಕೆಂಗಲ್ ಹನುಮಂತಯ್ಯ, ಅಂದಿನ ರಾಷ್ಟ್ರಪತಿ ಡಾ.ರಾಜೇಂದ್ರಪ್ರಸಾದ್ ಪ್ರತಿಮೆಗಳನ್ನು ಮೈದಾನದಲ್ಲಿ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Malpe: ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.