ಆರ್‌ಟಿಇ ಸೀಟು ರದ್ದುಪಡಿಸಿ, ಸರ್ಕಾರಿ ಶಾಲೆ ಉದ್ಧರಿಸಿ
Team Udayavani, Oct 31, 2017, 12:09 PM IST
ಬೆಂಗಳೂರು: ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ(ಆರ್‌ಇಟಿ) ಅಡಿಯಲ್ಲಿ ಖಾಸಗಿ ಶಾಲೆಗೆ ಸರ್ಕಾರದಿಂದಲೇ ಹಣ ನೀಡಿ, ಮಕ್ಕಳ ಪ್ರವೇಶ ಮಾಡಿಸುವ ಪ್ರವೃತ್ತಿಯನ್ನು ನಿಲ್ಲಿಸಿ. ಆ ಹಣದಿಂದ ಸರ್ಕಾರಿ ಶಾಲೆಯ ಅಭಿವೃದ್ಧಿ ಮಾಡಿ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಎಸ್.ಜಿ.ಸಿದ್ದರಾಮಯ್ಯ ಆಗ್ರಹಿಸಿದರು.
ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯಿಂದ ಸೋಮವಾರ ನಗರದ ಶಿಕ್ಷಕರ ಸದನದಲ್ಲಿ ಆಯೋಜಿಸಿರುವ ಎರಡು ದಿನಗಳ ರಾಜ್ಯಮಟ್ಟದ ಸಮುದಾಯ ಶೈಕ್ಷಣಿಕ ಸಮಾವೇಶದಲ್ಲಿ ಮಾತನಾಡಿದರು.
ಆರ್‌ಟಿಇ ಅಡಿಯಲ್ಲಿ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುವುದರಿಂದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಆರ್‌ಟಿಇ ಅನುದಾನ ಮೂಲಕ ಸರ್ಕಾರವೇ ಖಾಸಗಿ ಶಾಲೆಯನ್ನು ಪೋಷಿಸುತ್ತಿದೆ ಎಂದು ಆರೋಪಿಸಿದರು.
ರಾಜ್ಯದ ಸಿಬಿಎಸ್‌ಇ ಶಾಲಾಡಳಿತ ಮಂಡಳಿಗೆ ಸೇರಿದ ಖಾಸಗಿ ಶಾಲೆಗಳಲ್ಲಿ ಕನ್ನಡ ವಿಷಯವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಅನುಷ್ಠಾನ ಮಾಡಿರುವ ಬಗ್ಗೆ ಅಂಕಿ ಅಂಶ ಸಮೇತವಾಗಿ ಮೂರು ತಿಂಗಳ ಒಳಗೆ ವರದಿ ಸಲ್ಲಿಸುವಂತೆ ಶಿಕ್ಷಣ ಇಲಾಖೆಗೆ ನಿರ್ದೇಶಿಸಿದರು.
ಸಿಬಿಎಸ್‌ಇ, ಐಸಿಎಸ್‌ಇ ಶಾಲೆಗಳಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸುವಂತೆ 2015ರಲ್ಲಿಯೇ ಸರ್ಕಾರ ಕಾನೂನು ಜಾರಿ ಮಾಡಿದೆ. ಇದು ಕಾರ್ಯರೂಪಕ್ಕೆ ಬಂದಿಲ್ಲ. ರಾಜ್ಯದ ಸಿಬಿಎಸ್‌ಇ, ಐಸಿಎಸ್‌ಇ ಶಾಲೆಗಳು ಕನ್ನಡವನ್ನು ಒಂದು ಭಾಷೆಯನ್ನಾಗಿ ಕಲಿಸಬೇಕು. ನಿಯಮ ಪಾಲಿಸದ ಖಾಸಗಿ ಶಾಲೆಗಳ ಪರವಾನಗಿ ರದ್ದು ಮಾಡಬೇಕು ಎಂದರು.
ಸರ್ಕಾರಿ ಶಾಲೆ ಮುಚ್ಚುವುದಿಲ್ಲ: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಮಾತನಾಡಿ, ರಾಜ್ಯದ ಒಂದೇ ಒಂದು ಸರ್ಕಾರಿ ಶಾಲೆಯನ್ನು ಮುಚ್ಚುವುದಿಲ್ಲ. ಬದಲಾಗಿ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಎರಡು ಸಾವಿರ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ಚಿಂತನೆ ನಡೆಯುತ್ತಿದೆ ಎಂದರು.
ಚಿಕ್ಕ ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೂರ್ವಶಾಲಾ (ಫ್ರಿ-ಸ್ಕೂಲ್ ) ಹಾಗೂ ಪ್ಲೇಹೋಂಗಳನ್ನು ಶಿಕ್ಷಣದ ಕಾನೂನಿನ ವ್ಯಾಪ್ತಿಗೆ ಒಳಪಡಿಸಲು ಚಿಂತನೆ ನಡೆಸುತ್ತಿದ್ದೇವೆ. ಸರ್ಕಾರವೇ ಪೂರ್ವ ಪ್ರಾಥಮಿಕ ಶಾಲೆ ಆರಂಭಿಸುವ ಯೋಜನೆಯಲ್ಲಿದೆ. ಕನ್ನಡ ಅಥವಾ ಇಂಗ್ಲಿಷ್‌ನಲ್ಲಿ ಪ್ರಾರಂಭಿಸಬೇಕೇ ಎಂಬ ಗೊಂದಲ ಉಂಟಾಗಿದೆ. ಹೀಗಾಗಿ ಮತ್ತೂಮ್ಮೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಸುಪ್ರೀಂಕೋರ್ಟ್ ನಿವೃತ್ತ ನ್ಯಾ.ಎಸ್.ರಾಜೇಂದ್ರ ಬಾಬು, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್, ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ ಗುರಿಕಾರ್, ಶಿಕ್ಷಣ ತಜ್ಞ ಡಾ.ವಿ.ಪಿ.ನಿರಂಜನಾರಾಧ್ಯ ಇತರರು ಇದ್ದರು.
ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಈಗಾಗಲೇ ಎಸ್‌ಡಿಎಂಸಿ ಮೂಲಕ ಒಂದು ಜೊತೆ ಸಮವಸ್ತ್ರ ಒದಗಿಸುತ್ತಿದೆ. ಎರಡನೇ ಜೊತೆ ಸಮವಸ್ತ್ರಕ್ಕಾಗಿ 200 ರೂ.ನೀಡುತ್ತಿದೆ. ಮುಂದಿನ ವರ್ಷದಿಂದ ಎರಡನೇ ಜೊತೆ ಸಮವಸ್ತ್ರಕ್ಕೆ 300 ರೂ. ನೀಡಲಿದ್ದೇವೆ.
-ತನ್ವೀರ್ ಸೇಠ್, ಶಿಕ್ಷಣ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
Manipur: ಸಿಎಂ ಬಿರೇನ್ ಸಿಂಗ್ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.