ಬಿಜೆಪಿಯಿಂದ ಸ್ಪರ್ಧೆಗೆ ಮುಸ್ಲಿಮರ ಒಲವು


Team Udayavani, Nov 1, 2017, 6:25 AM IST

olavu.jpg

ಹೊಸದಿಲ್ಲಿ/ಅಹಮದಾಬಾದ್‌:  ಮುಸ್ಲಿಮರು ಬಿಜೆಪಿ ವತಿಯಿಂದ ಚುನಾವಣೆಗೆ ಸ್ಪರ್ಧೆ ಮಾಡುತ್ತಿಲ್ಲ ಎಂಬ ಮಾತುಗಳನ್ನು ಪ್ರಸಕ್ತ ಸಾಲಿನ ಗುಜರಾತ್‌ ಚುನಾವಣೆ ಸುಳ್ಳಾಗಿಸಿದೆ. 2011ರಲ್ಲಿ ಪ್ರಧಾನಿ ಮೋದಿ ಮುಖ್ಯಮಂತ್ರಿ ಯಾಗಿದ್ದಾಗ ಆಯೋಜಿಸಿದ್ದ “ಸದ್ಭಾವನಾ ಮಿಷನ್‌’ ಅಲ್ಪಸಂಖ್ಯಾತರನ್ನು ಬಿಜೆಪಿಯತ್ತ ಆಕರ್ಷಿಸುವ ಉದ್ದೇಶವನ್ನೇ ಹೊಂದಿತ್ತು. ಇದಾದ ಬಳಿಕ 2012ರಲ್ಲಿ ನಡೆದಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ನಾಯಕರಿಗೆ ಟಿಕೆಟ್‌ ನೀಡಲಾಗಿತ್ತು. ಅದರಲ್ಲಿ ಪ್ರಮುಖರು ಜಯಸಾಧಿಸಿದ್ದರು ಕೂಡ. ಇದೀಗ ಸದ್ಯದಲ್ಲೇ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಸಮುದಾಯದ ನಾಯಕರು ಸ್ಪರ್ಧಿಸಲು ಮುಂದೆ ಬರುತ್ತಿದ್ದಾರೆ. 

ಇತ್ತೀಚೆಗೆ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಕೂಡ ಸಮುದಾಯದ ನಾಯಕರಿಗೆ ಟಿಕೆಟ್‌ ನೀಡಬೇಕು ಎಂದು ಒತ್ತಾಯಿ ಸಲಾಗಿದೆ. ಜಮಲಾಪುರ್‌- ಖಾಡಿಯಾ, ವೇಜಾಲ್ಪುರ್‌, ವಗ್ರ, ವಾನ್ಕನೇರ್‌, ಭುಜ್‌ ಮತ್ತು ಅಬ್ದಾಸಾ ಕ್ಷೇತ್ರಗಳಲ್ಲಿ ಸಮು ದಾಯದವರು ಹೆಚ್ಚಿನ ಪ್ರಮಾಣದಲ್ಲಿದ್ದಾರೆ.

ರಾಹುಲ್‌ ಭೇಟಿ ಇಲ್ಲ: ಬಿಜೆಪಿಯ ಮೇಲೆ ನಿಯಂತ್ರಣ ಹೇರುವ ನಿಟ್ಟಿನಲ್ಲಿ ಯುವ ನಾಯಕರಾದ ಜಿಗ್ನೇಶ್‌ ಮೇವಾನಿ, ಹಾರ್ದಿಕ್‌ ಪಟೇಲ್‌ ಮತ್ತು ಅಲ್ಪೇಶ್‌ ಠಾಕೂರ್‌ರನ್ನು ಕಾಂಗ್ರೆಸ್‌ ಆಹ್ವಾನಿಸಿತ್ತು. ಈ ಪೈಕಿ ದಲಿತ ಹೋರಾಟಗಾರ ಜಿಗ್ನೇಶ್‌ ಮೇವಾನಿ ಮಂಗಳವಾರ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಭೇಟಿಯಾಗುವುದಾಗಿ ವದಂತಿ ಇತ್ತು. ಆದರೆ ಅದನ್ನು ಮೇವಾನಿ ನಿರಾಕರಿಸಿದ್ದಾರೆ. 

ಪ್ರಗತಿ ಕಾಣದ ಮಾತುಕತೆ: ಪಟೇಲರಿಗೆ ಮೀಸಲು ನೀಡುವ ಹೋರಾಟ ಸಮಿತಿ ಮುಖ್ಯಸ್ಥ ಹಾರ್ದಿಕ್‌ ಪಟೇಲ್‌ ಮತ್ತು ಗುಜರಾತ್‌ ಪ್ರದೇಶ ಕಾಂಗ್ರೆಸ್‌ ಸಮಿತಿ ನಾಯಕರ ನಡುವಿನ ಮಾತುಕತೆ ಯಾವುದೇ ಪ್ರಗತಿ ಕಂಡಿಲ್ಲ. ಪಟೇಲ್‌ ಸಮುದಾಯಕ್ಕೆ ಶೇ.20ರಷ್ಟು ಮೀಸಲು ನೀಡುವ ಬಗ್ಗೆ ಪ್ರಸ್ತಾಪ ಇರಿಸಲಾಗಿತ್ತು. ಈ ಬಗ್ಗೆ ನ.7ರಂದು ಮುಂದಿನ ಮಾತುಕತೆ ನಡೆಯಲಿದೆ. ಇದೇ ವೇಳೆ ನ.1-ನ.3ರ ವರೆಗೆ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಪ್ರಚಾರ ನಡೆಸಲಿದ್ದಾರೆ.

ಟಾಪ್ ನ್ಯೂಸ್

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!

Panth–Iyer

IPL Auction: 27 ಕೋ. ರೂ. ಒಡೆಯ ರಿಷಭ್‌ ಪಂತ್‌ಗೆ ಸಿಗುವುದು 18.90 ಕೋಟಿ ಮಾತ್ರ!

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Kiran-rejiu

Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್‌ ರಿಜಿಜು

SERBIA

Jaipur: ಬರೋಬ್ಬರಿ 3,676 ಕಿ.ಮೀ. ಹಾರಿದ ಕೊಕ್ಕರೆ: ದಾಖಲೆ

sambit-patra

EVM Issue: ಇವಿಎಂಗೂ ಮುನ್ನ ರಾಹುಲ್‌ರನ್ನು ಬದಲಿಸಿ ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್‌

MVA-maha

Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್‌!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

1

Udupi: ಪೊಲೀಸ್‌ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.