ಎಚ್.ಡಿ.ಕೋಟೆ ಜೆಡಿಎಸ್ ಶಾಸಕ ಚಿಕ್ಕಮಾದು ವಿಧಿವಶ
Team Udayavani, Nov 1, 2017, 7:10 AM IST
ಮೈಸೂರು: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಜೆಡಿಎಸ್ ಶಾಸಕ ಚಿಕ್ಕಮಾದು(68) ಮಂಗಳವಾರ ತಡರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಯಕೃತ್ ಕಸಿ ಮಾಡಿಸಿಕೊಂಡಿದ್ದ ಅವರಿಗೆ ಸೋಂಕು ಕಾಣಿಸಿಕೊಂಡಿತ್ತು, ಇದರಿಂದ ಮೂತ್ರಪಿಂಡದಲ್ಲೂ ಅನಾರೋಗ್ಯ ಕಾಣಿಸಿಕೊಂಡಿದ್ದರಿಂದ ನಗರದ ಸಿಗ್ಮಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ನಂತರ ಸ್ವಲ್ಪ ಚೇತರಿಸಿಕೊಂಡಿದ್ದ ಅವರು ಆ್ಯಂಬುಲೆನ್ಸ್‌ನಲ್ಲೇ ವಿಧಾನಸೌಧ ವಜ್ರಮಹೋತ್ಸವ ಸಮಾರಂಭಕ್ಕೆ ಹೋಗಿ ಬಂದಿದ್ದರು ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಆ ನಂತರ ಅವರ ಆರೋಗ್ಯ ಸ್ಥಿತಿ ಉಲ್ಬಣಿಸಿದ್ದರಿಂದ ನಗರದ ಅರವಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ವೆಂಟಿಲೇಟರ್ ಮೂಲಕ ಕೃತಕ ಉಸಿರಾಟ ವ್ಯವಸ್ಥೆ ಅಳವಡಿಸಲಾಗಿತ್ತು.
ಮೈಸೂರು ಜಿಲ್ಲೆಯ ಕೆ.ಆರ್ ತಾಲೂಕಿನ ಹೊಸೂರು ಕಲ್ಲಹಳ್ಳಿಯಲ್ಲಿ ಜನಿಸದ ಚಿಕ್ಕಮಾದು ಅವರು 1978ರಲ್ಲಿ ರಾಜಕೀಯಕ್ಕೆ ಪ್ರವೇಶ ಪಡೆದವರು. 1991ರಲ್ಲಿ ಮೊದಲ ಬಾರಿ ಹುಣಸೂರು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು. 2007-08ರಲ್ಲಿ ಜೆಡಿಎಸ್‌ನಿಂದ ಎಂಎಲ್‌ಸಿಯಾಗಿ ಆಯ್ಕೆ, 2013ರಲ್ಲಿ ಎಚ್.ಡಿ.ಕೋಟೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.
ಚಿಕ್ಕಮಾದು ಅವರು ಹಿರಿಯ ಪತ್ನಿ ಜಯಮ್ಮ ಕಿರಿಯ ಪತ್ನಿ ನಾಗಮ್ಮ ಹಾಗೂ ನಾಲ್ವರು ಮಕ್ಕಳನ್ನು ಅಗಲಿದ್ದಾರೆ.
ಹುಣಸೂರು ತಾಲೂಕಿನ ಹೊಸರಾಮೇನಹಳ್ಳಿಯಲ್ಲಿ ಇಂದು ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ
Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್ ಸೇರಿ ನಾಲ್ವರು ಹೈಕೋರ್ಟ್‌ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.