“ಹಿಂದ’ ಮಠಗಳಿಗೆ ಬೆಂಗ್ಳೂರಲ್ಲಿ ಜಮೀನು?
Team Udayavani, Nov 1, 2017, 8:52 AM IST
ಬೆಂಗಳೂರು: ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಲಿಂಗಾಯತ ಮಠಗಳಿಗೆ ದೇಣಿಗೆ ನೀಡಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದೇ ಹಾದಿಯಲ್ಲಿ ಮುಂದುವರಿದಿದ್ದು, ತಮ್ಮ ಅಹಿಂದ ಟ್ರಂಪ್ ಕಾರ್ಡ್ ಬಳಕೆಗೆ ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಹಿಂದುಳಿದ ಮತ್ತು ದಲಿತ ಮಠಗಳ ಮನ ಸೆಳೆಯಲು ಮುಂದಾಗಿರುವ ಸಿದ್ದರಾಮಯ್ಯ, ಸುಮಾರು 40ಕ್ಕೂ ಹೆಚ್ಚು “ಹಿಂದ’ ಮಠಗಳಿಗೆ ಬೆಂಗಳೂರಿನಲ್ಲಿ ಶೈಕ್ಷಣಿಕ ಮತ್ತು ಧಾರ್ಮಿಕ ಉದ್ದೇಶಗಳಿಗಾಗಿ ಸರ್ಕಾರದಿಂದ ಜಮೀನು ನೀಡಲು ಮುಂದಾಗಿದ್ದಾರೆ.
ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ನೇತೃತ್ವದಲ್ಲಿ ಮಂಗಳವಾರ ಉಪ್ಪಾರ, ಮಾದರ, ಹಡಪದ ಸೇರಿ ಸುಮಾರು 40ಕ್ಕೂ ಹೆಚ್ಚು ಹಿಂದುಳಿದ ಮತ್ತು ದಲಿತ ಸಮುದಾಯಗಳ ಸ್ವಾಮೀಜಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ, ಬೆಂಗಳೂರಿನಲ್ಲಿ ಶೈಕ್ಷಣಿಕ ಮತ್ತು ಧಾರ್ಮಿಕ ಕಾರ್ಯಗಳಿಗೆ ಜಮೀನು ನೀಡುವಂತೆ ಮನವಿ ಮಾಡಿಕೊಂಡರು. ಭೇಟಿ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಆಂಜನೇಯ, ಈ ಕುರಿತು ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅಲ್ಲದೆ, ಮುಂದಿನ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ ಎಂದರು.
ಉಪ್ಪಾರ ಸಮಾಜದ ಭಗೀರಥ ಮಠದ ಪುರುಷೋತ್ತಮಾನಂದ ಸ್ವಾಮೀಜಿ ಮಾತನಾಡಿ, ಹಿಂದುಳಿದ ಮತ್ತು ದಲಿತ ಸಮುದಾಯದ ಮಠಗಳ ಏಳಿಗೆಗೆ ಬೆಂಗಳೂರಿನಲ್ಲಿ ಅವಕಾಶ ಇಲ್ಲ. ಸರ್ಕಾರದಿಂದ ಎಲ್ಲ ಹಿಂದುಳಿದ ಮಠಗಳಿಗೂ ಜಮೀನು ನೀಡುವಂತೆ ಕೋರಿದ್ದೇವೆ. ಸಿಎಂ ಮುಂದಿನ ಸಂಪುಟದಲ್ಲಿ ಚರ್ಚಿಸಿ ತೀರ್ಮಾನಿಸುವುದಾಗಿ ಭರವಸೆ ನೀಡಿದ್ದಾರೆ ಎಂದರು.
ವಿಶೇಷ ಭೋಜನ: ಸ್ವಾಮೀಜಿಗಳಿಗೆ ಸಚಿವ ಆಂಜನೇಯ ಅವರ ಮನೆಯಲ್ಲಿ ಭೋಜನ ವ್ಯವಸ್ಥೆ ಕಲ್ಪಿಸಿದ್ದರು. ಸ್ವತಃ ಸಚಿವರು ಎಲ್ಲ ಸ್ವಾಮೀಜಿಗಳಿಗೂ “ಇದು ಸಿಎಂ ವಡೆ’ ಎಂದು ಚಟಾಕಿ ಹಾರಿಸಿದರು. ಸಿದ್ದರಾಮಯ್ಯ ಅವರೂ ವಿಶೇಷ ಭೋಜನದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ವಾಮೀಜಿಗಳ ಭೇಟಿಯಲ್ಲಿ ವಿಶೇಷತೆ ಏನಿಲ್ಲ. ಅವರು ಕೆಲವೊಂದು ಬೇಡಿಕೆ ಇಟ್ಟಿದ್ದಾರೆ. ಪರಿಶೀಲಿಸಿ ತೀರ್ಮಾನ ಮಾಡುತ್ತೇನೆ ಎಂದರು.
ಸಿಎಂ ಕಾರಿಗೆ ಘೇರಾವ್
ಬೆಂಗಳೂರು: ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸುವಂತೆ ದಲಿತ ಸಮುದಾಯದ ಎಡಗೈ ಪಂಗಡದ ಕಾರ್ಯ ಕರ್ತರು ಸಿದ್ದರಾಮಯ್ಯ ಅವರ ಕಾರಿಗೆ ಘೇರಾವ್ ಹಾಕಿದ ಪ್ರಸಂಗ ನಡೆಯಿತು. ಸಚಿವ ಎಚ್. ಆಂಜನೇಯ ನಿವಾಸದಲ್ಲಿ ಭೋಜನ ಕೂಟದಲ್ಲಿ ಪಾಲ್ಗೊಂಡ ನಂತರ ವಾಪಸ್ ತೆರಳುವಾಗ ಎಡಗೈ ಪಂಗಡಕ್ಕೆ ಸೇರಿದ ಕಾರ್ಯಕರ್ತರು ಸಿಎಂ ಕಾರಿಗೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದರು.
ಸಚಿವ ಎಚ್.ಆಂಜನೇಯ ನೇತೃತ್ವದಲ್ಲಿ ಮಂಗಳವಾರ 40ಕ್ಕೂ ಹೆಚ್ಚು ಹಿಂದುಳಿದ ಮತ್ತು ದಲಿತ ಸಮುದಾಯಗಳ ಸ್ವಾಮೀಜಿಗಳು ಸಿಎಂ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.