ನೃತ್ಯ ಶಾಲೆಗೆ ತೆರಳಿದ ಬಾಲಕಿ ಅನುಸ್ಪಾದ ಸಾವು


Team Udayavani, Nov 1, 2017, 10:59 AM IST

dance.jpg

ಬೆಂಗಳೂರು: ನೃತ್ಯ ಶಾಲೆಗೆ ತೆರಳಿದ ಬಾಲಕಿ ಹೇನಿನ ಔಷಧ ಸೇವಿಸಿ ನಿಗೂಡವಾಗಿ ಸಾವನ್ನಪ್ಪಿರುವ ಘಟನೆ ಯಲಹಂಕ ಉಪನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಯಲಹಂಕ ಉಪನಗರದ ನಿಟ್ಟೂರಿನ ನಿವಾಸಿ ಕುಮಾರ್‌ ದಂಪತಿ ಪುತ್ರಿ ಚಂದನಾ (12) ಮೃತಳು. ಈ ಸಂಬಂಧ ನತ್ಯ ಶಾಲೆಯ ಸತೀಶ್‌ ಎಂಬಾತನ ಮೇಲೆ ಬಾಲಕಿಯ ಪೋಷಕರು ಹಲ್ಲೆ ನಡೆಸಿದ್ದಾರೆ.

ವಿದ್ಯಾನಿಕೇತನ ಶಾಲೆಯಲ್ಲಿ 6ನೇ ತರಗತಿ ಓದುತ್ತಿರುವ ಚಂದನಾ ತಂದೆ ಕುಮಾರ್‌ ಬಾಡಿಗೆ ಆಟೋ ಓಡಿಸುತ್ತಿದ್ದಾರೆ. ನಿಟ್ಟೂರಿನ ನೃತ್ಯ ಶಾಲೆಯಲ್ಲಿ ಚಂದನಾ ಒಂದು ವರ್ಷದಿಂದ ನೃತ್ಯ ತರಬೇತಿ ಪಡೆಯುತ್ತಿದ್ದಳು. ಸೋಮವಾರ ಎಂದಿನಂತೆ ಸಂಜೆ 6 ಗಂಟೆಗೆ ಶಾಲೆಗೆ ಬಂದ ಬಾಲಕಿ ಇದಕ್ಕಿದ್ದಂತೆ ಕುಸಿದು ಬಿದ್ದಿದ್ದಾಳೆ.

ಕೂಡಲೇ ಆಸ್ಪತ್ರೆಗೆ ಕರೆದೊಉದ್ರೂ ಚಿಕಿತ್ಸೆ ಫ‌ಲಿಸದೆ ಮೃತಪಟ್ಟಿದ್ದಾಳೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚಂದನಾ ಸ್ನೇಹಿತೆ ರಕ್ಷಿತಾ ತನ್ನ ಮನೆಯಿಂದ ಹೇನಿನ ಔಷಧಿಯನ್ನು ಶಾಲೆಗೆ ತಂದಿದ್ದು, ಇದನ್ನು ಚಂದನಾಗೆ ತೋರಿಸಿ ಹೇನಿನ ಔಷಧಿ ಎಂದು ಹೇಳಿದ್ದರು.

ಈ ಮಧ್ಯೆ ಇತರೆ ವಿದ್ಯಾರ್ಥಿಗಳು ನೃತ್ಯ ತರಬೇತಿ ನಡೆಸುತ್ತಿರುವ ವೇಳೆಯಲ್ಲಿ ಚಂದನಾ ಯಾರಿಗೂ ತಿಳಿಯದ್ದಂತೆ ಔಷಧಿ ಬಾಟಲಿಯನ್ನು ಶೌಚಾಲಯದೊಳಗೆ ಕೊಂಡೊಯ್ದಿದ್ದಾಳೆ. ಇಲ್ಲಿಂದ ಹೊರಬಂದು ಮತ್ತೆ ನೃತ್ಯ ಮಾಡುವಾಗ ಏಕಾಏಕಿ ಕುಸಿದು ಬಿದ್ದಿದ್ದಾಳೆ. ಚಂದನಾ ಶೌಚಾಲಯಕ್ಕೆ ಹೋಗಿದ್ದನ್ನು ಇತರೆ ವಿದ್ಯಾರ್ಥಿಗಳು ಗಮನಿಸಿದ್ದಾರೆ.

ಆದರೆ, ಯಾವ ಕಾರಣಕ್ಕೆ ವಿಷ ಸೇವಿಸಿದ್ದಾರೆ ಎಂದು ತಿಳಿದಿಲ್ಲ. ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಅಂಬೇಡ್ಕರ್‌ ಆಸ್ಪತ್ರೆಗೆ ರವಾನಿಸಿದ್ದಾರೆ. ಪೊಲೀಸರು ತನಿಖೆ ನಡೆಸಿದಾಗ ನೃತ್ಯ ತರಬೇತಿಯ ಬಾತ್‌ರೂಂನಲ್ಲಿ ಆಕೆಯ ಗೆಳತಿ ರಕ್ಷಿತಾ ತೋರಿಸಿದ ಹೇನಿನ ಔಷದಿ ಬಾಟಲಿ ಪತ್ತೆಯಾಗಿತ್ತು.

ಅಷ್ಟೆ ಅಲ್ಲದೆ, ಬಾಟಲ್‌ನಲ್ಲಿದ್ದ ಅರ್ಧದಷ್ಟು ಔಷಧಿ ಖಾಲಿಯಾಗಿತ್ತು. ಈ ಹಿನ್ನೆಲೆಯಲ್ಲಿ ಈ ಔಷಧಿಯನ್ನು ಸೇವಿಸಿ ಚಂದನ ಮೃತಪಟ್ಟಿರುವ ಸಾಧ್ಯತೆಗಳಿವೆ ಎಂದು ಪೊಲೀಸರು ಶಂಕೆವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.