ಏಕತೆಯ ಪ್ರತಿಜ್ಞೆ ಬೋಧಿಸಿದ ಸಿಎಂ
Team Udayavani, Nov 1, 2017, 10:59 AM IST
ಬೆಂಗಳೂರು: ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನದ ಅಂಗವಾಗಿ ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಏಕತಾ ದಿವಸದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವಾಲಯದ ಅಧಿಕಾರಿ ಹಾಗೂ ನೌಕರರಿಗೆ ಏಕತೆಯ ಪ್ರತಿಜ್ಞಾ ವಿಧಿ ಬೋಧಿಸಿದರು.
“ರಾಷ್ಟ್ರದ ಐಕ್ಯತೆ, ಸಮಗ್ರತೆ ಮತ್ತು ಭದ್ರತೆ ಕಾಪಾಡಲು ನನ್ನನ್ನು ಅರ್ಪಿಸಿಕೊಳ್ಳುತ್ತೇನೆ. ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ದೂರದೃಷ್ಟಿ ಮತ್ತು ಕಾರ್ಯಕ್ಷಮತೆಯಿಂದ ಸಾಧಿಸಿದ ರಾಷ್ಟ್ರೀಯ ಏಕೀಕರಣದ ಸ್ಪೂರ್ತಿಯನ್ನು ಕಾಪಾಡುತ್ತೇನೆ.
ರಾಷ್ಟ್ರೀಯ ಆಂತರಿಕ ಭದ್ರತೆಯನ್ನು ಖಾತ್ರಿಪಡಿಸಲು ನಾನು ನನ್ನದೇ ಆದ ಕೊಡುಗೆ ನೀಡುತ್ತೇನೆ ಎಂದು ಒಮ್ಮನಸಿನಿಂದ ಪ್ರತಿಜ್ಞೆ ಮಾಡುತ್ತೇನೆ,’ ಎಂದು ಮುಖ್ಯಮಂತ್ರಿಗಳಿಂದ ಸಚಿವಾಲಯದ ಅಧಿಕಾರಿ ಮತ್ತು ನೌಕರರು ಪ್ರತಿಜ್ಞೆ ಸ್ವೀಕರಿಸಿದರು.
ಈ ವೇಳೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಕೆ. ರತ್ನಪ್ರಭ, ಟಿ.ಎಂ. ವಿಜಯಭಾಸ್ಕರ್ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಅತೀಖ್ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ಸಚಿವಾಲಯದ ನೌಕರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.