ಘನ್ಸೋಲಿ:ಯಕ್ಷಗಾನ ಮತ್ತು ಸಮ್ಮಾನ ಕಾರ್ಯಕ್ರಮ
Team Udayavani, Nov 2, 2017, 2:49 PM IST
ನವಿ ಮುಂಬಯಿ: ಯಕ್ಷತುಳು ಪರ್ಬ ಸಮಿತಿ ಮಂಗಳೂರು ಇವರ ಆಶ್ರಯದಲ್ಲಿ ಉದ್ಯಮಿಗಳಾದ ಕೌಡೂರು ಕೋರೊªಟ್ಟು ಎಳಿಯಾಳ ಗುಣಕರ ಶೆಟ್ಟಿ ಮತ್ತು ಧನಂಜಯ ಕೋಟ್ಯಾನ್ ಅವರ ಪ್ರಾಯೋಜಕತ್ವದಲ್ಲಿ ಗೆಜ್ಜೆದ ಪೂಜೆ ಯಕ್ಷಗಾನ ಪ್ರದರ್ಶನ ಹಾಗೂ ಸಾಧಕ ಕಲಾವಿದರಿಗೆ ಸಮ್ಮಾನ ಕಾರ್ಯಕ್ರಮವು ಅ. 28ರಂದು ಸಂಜೆ ಶ್ರೀ ಕ್ಷೇತ್ರ ಘನ್ಸೋಲಿಯ ಶ್ರೀ ಮೂಕಾಂಬಿಕಾ ಮಂದಿರದ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ನೆರೂಲ್ ಶ್ರೀ ಶನೀಶ್ವರ ಮಂದಿರದ ಕಾರ್ಯಾಧ್ಯಕ್ಷ ಸಂತೋಷ್ ಡಿ. ಶೆಟ್ಟಿ ಅವರು, ಯಕ್ಷಗಾನವು ನಮ್ಮ ಸಂಸ್ಕೃತಿ, ಭಾಷೆ, ಸಂಸ್ಕಾರದ ಬೆಳವಣಿಗೆಗೆ ಸಹಕಾರಿಯಾಗಿದೆ. ಆದ್ದರಿಂದ ಈ ಕಲೆಯನ್ನು ಪ್ರೋತ್ಸಾಹಿಸುವುದಲ್ಲದೆ ಸಹಕರಿಸುವ ಜವಾಬ್ದಾರಿ ನಮ್ಮ ಮೇಲಿದೆ. ಘನ್ಸೋಲಿ ಮೂಕಾಂಬಿಕಾ ಕ್ಷೇತ್ರದಲ್ಲಿ ಸಭಾಗೃಹವೊಂದರ ಆವಶ್ಯಕತೆಯಿದ್ದು, ಇದರ ನಿರ್ಮಾಣದ ಯೋಜನೆಯು ಸಾಕಾರಗೊಳ್ಳಲು ಎಲ್ಲರ ಸಹಕಾರದ ಅಗತ್ಯವಿದೆ. ಇಂತಹ ಕಲೆಯ ಪ್ರದರ್ಶನಗಳಿಗೆ ಸಭಾಗೃಹದ ಅಗತ್ಯ ಬಹಳಷ್ಟಿದೆ. ಕಲೆ-ಕಲಾವಿದರನ್ನು ಪ್ರೋತ್ಸಾಹಿಸಿದಾಗ ಮಾತ್ರ ಕಲೆ ಉಳಿದು ಮುಂದಿನ ಪೀಳಿಗೆಯು ಅರಿಯಲು ಸಾಧ್ಯವಾಗುತ್ತದೆ ಎಂದರು.
ಇದೇ ಸಂದರ್ಭ ಪ್ರಸಂಗಕರ್ತ, ಕಲಾವಿದ ಡಿ. ಮನೋಹರ್ ಕುಮಾರ್ ಅವರನ್ನು ಗಣ್ಯರ ಸಮ್ಮುಖ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಲಾಯಿತು. ಅಲ್ಲದೆ ಸ್ತ್ರೀಪಾತ್ರಧಾರಿ ಅಕ್ಷಯ್ ಕುಮಾರ್ ಮಾರ್ನಾಡ್ ಹಾಗೂ ಯಕ್ಷಗಾನದ ಪ್ರಾಯೋಜಕರಾದ ಗುಣಕರ ಶೆಟ್ಟಿ ಕೌಡೂರು, ಧನಂಜಯ ಕೋಟ್ಯಾನ್, ಅನ್ನದಾನ ನೀಡಿ ಮನೋಹರ ಆರ್. ಕೆ. ಹಾಗೂ ನೃತ್ಯ ಪ್ರದರ್ಶನಗೈದ ದೀಪ್ ಭುಜಂಗ ಶೆಟ್ಟಿ, ದೀಪೇಶ್ ದಿನೇಶ್ ಶೆಟ್ಟಿ ಅವರನ್ನು ಗೌರವಿಸಲಾಯಿತು.
ಸಮ್ಮಾನ ಸ್ವೀಕರಿಸಿ ಮಾತನಾಡಿದ ಮನೋಹರ್ ಕುಮಾರ್, ಕಲಾಮಾತೆಯ ಅನುಗ್ರಹ, ಪ್ರೇಕ್ಷಕರ, ಕಲಾ
ಪೋಷಕರ ಬೆಂಬಲ ಪ್ರೋತ್ಸಾಹ ಸಿಕ್ಕಾಗ ಮಾತ್ರ ಕಲಾವಿದರು ರಂಗದಲ್ಲಿ ಉತ್ತಮ ಕಲಾವಿದರಾಗಿ ಬೆಳೆಯಲು ಸಾಧ್ಯ.
ದೇವಿಯ ಅನುಗ್ರಹದಿಂದ ಈ ಸಮ್ಮಾನ ಲಭಿಸಿದೆ. ನಿಮ್ಮೆಲ್ಲರ
ಪ್ರೀತಿ, ಅಭಿಮಾನ, ಗೌರವಕ್ಕೆ ಋಣಿಯಾಗಿದ್ದೇನೆ ಎಂದರು.
ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಅಧ್ಯಕ್ಷ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಅವರು ಮಾತನಾಡಿ, ಡಿ. ಮನೋಹರ್ ಕುಮಾರ್ ಅವರು ಕಲಾವಿದನಾಗಿ, ಪ್ರಸಂಗಕರ್ತನಾಗಿ ಕಲೆಯನ್ನು ಉಳಿಸಿ-ಬೆಳೆಸುವಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ. ಅವರಿಗೆ ದೇವಿಯ ಅನುಗ್ರಹ ಸದಾಯಿರಲಿ ಎಂದು ಹಾರೈಸಿದರು.
ನೆರೂಲ್ ಶ್ರೀ ಶನೀಶ್ವರ ಮಂದಿರದ ಅಧ್ಯಕ್ಷ, ಧರ್ಮದರ್ಶಿ ರಮೇಶ್ ಎಂ. ಪೂಜಾರಿ ಮಾತನಾಡಿ, ತುಳು
ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನಗೊಂಡಾಗ ಮಕ್ಕಳು
ಹೆಚ್ಚಿನ ಆಸಕ್ತಿ ತೋರಲು ಸಾಧ್ಯವಿದೆ. ಈ ದೇವಿಯ
ಅನುಗ್ರಹದಿಂದ ಇಲ್ಲಿ ಹೆಚ್ಚಿನಯಕ್ಷಗಾನ ಪ್ರದರ್ಶನಗೊಳ್ಳುತ್ತಿ
ರುವುದು ಸಂತೋಷದ ಸಂಗತಿಯಾಗಿದೆ ಎಂದರು.
ಬೋಂಬೆ ಬಂಟ್ಸ್ ಅಸೋಸಿಯೇಶನ್ ಮಾಜಿ ಅಧ್ಯಕ್ಷ ಶ್ಯಾಮ್ ಎನ್. ಶೆಟ್ಟಿ ಅವರು ಮಾತನಾಡಿ, ತುಳು ಪ್ರಸಂಗಕ್ಕೆ ಎಷ್ಟೊಂದು ಬೇಡಿಕೆ ಇದೆ ಎಂಬುದಕ್ಕೆ ಗೆಜ್ಜೆದ ಪೂಜೆ ಪ್ರಸಂಗವೇ ಸಾಕ್ಷಿಯಾಗಿದೆ. ಊರಿನಲ್ಲಿ ನಡೆಯುವ ಪ್ರದರ್ಶನಗಳಲ್ಲೂ ಇಷ್ಟೊಂದು ಸಂಖ್ಯೆಯಲ್ಲಿ ಪ್ರೇಕ್ಷಕರು ಕಾಣ ಸಿಗುವುದಿಲ್ಲ. ನಾವೆಲ್ಲರೂ ಯಕ್ಷಗಾನವನ್ನು ಉಳಿಸಿ-ಬೆಳೆಸುವ ಪಣ ತೊಡಬೇಕು ಎಂದು ನುಡಿದರು.
ಅತಿಥಿಗಳಾಗಿ ಪಾಲ್ಗೊಂಡ ಸಿಬಿಡಿ-ಬೇಲಾಪುರ ಉದ್ಯಮಿ, ಸಮಾಜ ಸೇವಕ ರಮೇಶ್ ಶೆಟ್ಟಿ, ಕಲಾವಿದ ಭೋಜ ಬಂಗೇರ, ನೆರೂಲ್ ಶ್ರೀ ಶನೀಶ್ವರ ಮಂದಿರದ ಉಪಾಧ್ಯಕ್ಷ ಗೋಪಾಲ್ ವೈ. ಶೆಟ್ಟಿ, ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಉಪಾಧ್ಯಕ್ಷ ನಂದಿಕೂರು ಜಗದೀಶ್ ಶೆಟ್ಟಿ ಅವರು ಮಾತನಾಡಿದರು.
ವೇದಿಕೆಯಲ್ಲಿ ಬಂಟರ ಸಂಘ ನವಿಮುಂಬಯಿ ಪ್ರಾದೇಶಿಕ ಸಮಿತಿಯ ಸಮನ್ವಯಕ ತಾಳಿಪಾಡಿಗುತ್ತು ಭಾಸ್ಕರ ಶೆಟ್ಟಿ, ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಜತೆ ಕೋಶಾಧಿಕಾರಿ ದೆಪ್ಪುಣಿಗುತ್ತು ಚಂದ್ರಹಾಸ ಶೆಟ್ಟಿ, ನೆರೂಲ್ ಹೊಟೇಲ್ ಉದ್ಯಮಿ ಸತೀಶ್ ಪೂಜಾರಿ, ಪೆರ್ಮುದೆ ಕೊಕ್ಕರಗುತ್ತು ಅರುಣ್ ಶೆಟ್ಟಿ, ಉದ್ಯಮಿ ವಿಶ್ವನಾಥ ಶೆಟ್ಟಿ, ಯಕ್ಷಗಾನ ಪ್ರಾಯೋಜಕರಾದ ಕೋರೊªಟ್ಟು ಎಳಿಯಾಳ ಕೌಡೂರು ಗುಣಕರ ಶೆಟ್ಟಿ, ಧನಂಜಯ ಕೋಟ್ಯಾನ್, ವಿಶ್ವನಾಥ ಶೆಟ್ಟಿ ಡೊಂಬಿವಲಿ, ಅನ್ನದಾನ ಪ್ರಾಯೋಜಕ ಮನೋಹರ್ ಆರ್. ಕೆ. ಮೊದಲಾದವರು ಉಪಸ್ಥಿತರಿದ್ದರು.
ಆದ್ಯಪಾಡಿ ಬಾಲಕೃಷ್ಣ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಸಂಘಟಕ ಪ್ರಕಾಶ್ ಎಂ. ಶೆಟ್ಟಿ ಸುರತ್ಕಲ್, ಪತ್ರಕರ್ತ ದೇವಿ ಪ್ರಸಾದ್ ರೈ ಸಹಕರಿಸಿದರು. ಪ್ರಾರಂಭದಲ್ಲಿ ಬಾಲಪ್ರತಿಭೆಗಳಾದ ರೀತ್ ಭುಜಂಗ ಶೆಟ್ಟಿ, ದೀಪೇಶ್ ದಿನೇಶ್ ಶೆಟ್ಟಿ ಇವರಿಂದ ನೃತ್ಯ ಕಾರ್ಯಕ್ರಮ ನಡೆಯಿತು. ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
MRPL ನಲ್ಲಿ ಉದ್ಯೋಗ ಆಮಿಷ: ಯುವಕನಿಗೆ 1 ಲಕ್ಷ ರೂ.ವಂಚನೆ
Karkala; ಕೋರ್ಟ್‌ಗೆ ಹಾಜರಾದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ
Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.