ನ್ಯಾಯಮೂರ್ತಿಗಳ ಹುದ್ದೆ ಭರ್ತಿ ಅರ್ಜಿ ವರ್ಗಾವಣೆ
Team Udayavani, Nov 3, 2017, 12:43 PM IST
ಬೆಂಗಳೂರು: ರಾಜ್ಯ ಹೈಕೋರ್ಟ್ನಲ್ಲಿ ಖಾಲಿಯಿರುವ ನ್ಯಾಯಮೂರ್ತಿಗಳ ಹುದ್ದೆಗಳನ್ನು ಭರ್ತಿ ಮಾಡಲು ಆದೇಶಿಸುವ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್.ಜಿ.ರಮೇಶ್ ನೇತೃತ್ವದ ವಿಭಾಗೀಯ ಪೀಠ ಮತ್ತೂಂದು ನ್ಯಾಯಪೀಠಕ್ಕೆ ವರ್ಗಾಯಿಸಿದೆ.
ಅರ್ಜಿಯಲ್ಲಿ ಹೈಕೋರ್ಟ್ ಅನ್ನು ಪ್ರತಿವಾದಿಯನ್ನಾಗಿ ಮಾಡಿರುವ ಹಿನ್ನೆಲೆಯಲ್ಲಿ ಮುಖ್ಯ ನ್ಯಾಯಮೂರ್ತಿಗಳ ವಿಭಾಗೀಯ ಪೀಠದ ಬದಲು ಈ ಅರ್ಜಿಯ ವಿಚಾರಣೆ ಬೇರೊಂದು ಪೀಠ ನಡೆಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್.ಜಿ. ರಮೇಶ್, ಇನ್ನೊಂದು ಪೀಠದಲ್ಲಿ ಅರ್ಜಿ ವಿಚಾರಣೆ ನಿಗದಿಪಡಿಸಿ ಎಂದು ನ್ಯಾಯಾಲಯದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ರಾಜ್ಯ ಹೈಕೋರ್ಟ್ನಲ್ಲಿ 37 ನ್ಯಾಯಮೂರ್ತಿಗಳ ಹುದ್ದೆಗಳು ಖಾಲಿಯಿವೆ. ಅವನ್ನು ಶೀಘ್ರ ಭರ್ತಿ ಮಾಡುವಂತೆ ಕೇಂದ್ರ ಸರ್ಕಾರ, ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಎನ್. ವೇಣುಗೋಪಾಲಗೌಡ, ವಕೀಲರಾದ ಎಸ್.ಬಸವರಾಜು ಮತ್ತು ಬಿ.ಎಂ.ಅರುಣ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಗುರುವಾರ ಹಂಗಾಮಿ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.