ವೇತನ ತಡೆಗೆ ವಿರೋಧ
Team Udayavani, Nov 3, 2017, 3:55 PM IST
ರಾಯಚೂರು: ಅನಗತ್ಯ ಕಾರಣವೊಡ್ಡಿ ನೌಕರರ ವೇತನ ತಡೆಹಿಡಿದ ಕ್ರಮ ಖಂಡಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದ ಸದಸ್ಯರು ಗುರುವಾರ ಜೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಈ ಕುರಿತು ಜೆಸ್ಕಾಂ ಇಇಗೆ ಮನವಿ ಸಲ್ಲಿಸಿ, ನಗರದ ವಿಭಾಗದಲ್ಲಿ ಸುಮಾರು 1971ರಿಂದ ಈವರೆಗೆ ಹುದ್ದೆ ನೇಮಕವಾಗಿಲ್ಲ. ಇರುವ ಸಿಬ್ಬಂದಿಯಲ್ಲೇ ಒತ್ತಡದ ಮಧ್ಯೆ ಕೆಲಸ ನಿರ್ವಹಿಸಲಾಗುತ್ತಿದೆ. ಕಾರ್ಯಭಾರಕ್ಕೆ ತಕ್ಕಂತೆ
ನಿರ್ವಹಣಾ ಸಿಬ್ಬಂದಿ, ಸಹಾಯಕ ಮಾರ್ಗದಾಳು, ಮಾರ್ಗದಾಳು, ಮೆಕ್ಯಾನಿಕ್, ಸೂಪರ್ ಮೆಕ್ಯಾನಿಕ್ ಹಾಗೂ ಆಪರೇಟರ್ ಸೇರಿದಂತೆ ವಿವಿಧ ಹುದ್ದೆಗಳ ಮಂಜೂರು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಹಲವು ವರ್ಷದಿಂದ ಬಡ್ತಿ ನೀಡಿಲ್ಲ. ನಿರಂತರ ಸೇವಾ ಕೇಂದ್ರದಲ್ಲಿ ಮೂಲ ಸೌಕರ್ಯ ಕಲ್ಪಿಸಬೇಕು. ಕೇಂದ್ರದಲ್ಲಿ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಕಳೆದ ಮೂರು ವರ್ಷದಿಂದಲೂ ಪಾಳೆಯ ಭತ್ಯೆ ನೀಡಿಲ್ಲ. ಕೂಡಲೇ ಮಂಜೂರು ಮಾಡಬೇಕು. ನಗರ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ನಿರ್ವಹಣಾ ಸಾಮಗ್ರಿ, ಸಮವಸ್ತ್ರ, ಸುರಕ್ಷಾ ಪರಿಕರಗಳನ್ನು, ಗುರುತಿನ ಚೀಟಿ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಎಲ್ಲ ನೌಕರರಿಗೆ ವೇತನ ಪಟ್ಟಿ ನೀಡಬೇಕು. ಕಂದಾಯ ಶಾಖೆ ಸಿಬ್ಬಂದಿಗೆ ಕೆಲಸದ ಒತ್ತಡವಿದ್ದು, ಹೆಚ್ಚುವರಿ ಸಿಬ್ಬಂದಿ
ನಿಯೋಜಿಸಬೇಕು. ಗಣಕಯಂತ್ರಗಳ ವ್ಯವಸ್ಥೆ ಮಾಡಬೇಕು. ನಗದು ಹಣ ಬ್ಯಾಂಕ್‌ಗೆ ಜಮಾ ಮಾಡಲು ವಾಹನದ
ವ್ಯವಸ್ಥೆ ಮಾಡಬೇಕು. ನಗರದ ಉಪ ವಿಭಾಗದ ಎರಡು ಮುಖ್ಯ ಕ್ಯಾಶ್ ಕೌಂಟರ್‌ಗೆ ಮೂಲ ಸೌಲಭ್ಯ ಒದಗಿಸಬೇಕು.
ಕ್ಯಾಶ್ ಕೌಂಟರ್‌ಗಳ ಕಾರ್ಯನಿರ್ವಹಣೆ ಮಾಡುತ್ತಿರುವ ಸಿಬ್ಬಂದಿಗೆ ಆಡಳಿತಾತ್ಮಕ ಮಂಜೂರಾತಿ ನೀಡಬೇಕು
ಎಂಬುದು ಸೇರಿ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ
Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ
Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ
MUST WATCH
ಹೊಸ ಸೇರ್ಪಡೆ
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.