ಕಮಲ್ ಹಾಸನ್ ಮಾತಿಗೆ ಪ್ರಕಾಶ್ ರೈ ಒಗ್ಗರಣೆ
Team Udayavani, Nov 4, 2017, 7:41 AM IST
ನವದೆಹಲಿ: ಬಹುಭಾಷಾ ನಟ ಕಮಲ್ ಹಾಸನ್ ಬಳಿಕ ಇದೀಗ ಮತ್ತೂಬ್ಬ ನಟ ಪ್ರಕಾಶ್ ರೈ ಗರಂ ಆಗಿದ್ದಾರೆ. ತಮ್ಮ ಎಂದಿನ ಧಾಟಿಯಲ್ಲೇ ಕೇಂದ್ರ ಸರ್ಕಾರ, ಬಿಜೆಪಿ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯ ಸರ್ಕಾರಗಳ ವಿರುದ್ಧ ಟ್ವೀಟ್ ಮಾಡುವ ಮೂಲಕ ಪರೋಕ್ಷ ದಾಳಿ ನಡೆಸಿದ್ದಾರೆ. “ಧರ್ಮ, ಸಂಸ್ಕೃತಿ ಹಾಗೂ ನೈತಿಕತೆಯ ಹೆಸರು ಹೇಳಿಕೊಂಡು ಜನತೆಯಲ್ಲಿ ಭಯವನ್ನು ಹುಟ್ಟಿಸುವುದು ಭಯೋತ್ಪಾದನೆ ಅಲ್ಲ ಎಂದಾದರೆ, ಅದೇನು’ ಎಂದು ಪ್ರಶ್ನಿಸಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಪ್ರಕಾಶ್ ರೈ ಅವರು, “ಧರ್ಮ, ಸಂಸ್ಕೃತಿ ಹಾಗೂ ನೈತಿಕತೆಯ ಹೆಸರು ಹೇಳಿಕೊಂಡು ಯುವ ಜೋಡಿಗಳ ಮೇಲೆ ಹಲ್ಲೆ ನಡೆಸುವುದು, ಗೋಹತ್ಯೆ ನೆಪದಲ್ಲಿ ಹಲ್ಲೆ ನಡೆಸಿ ಕಾನೂನು ಕೈಗೆತ್ತಿಕೊಳ್ಳುವುದು ಭಯೋತ್ಪಾದನೆಯೇ ಅಲ್ಲವೇ? ಪ್ರತಿರೋಧ ವ್ಯಕ್ತಪಡಿಸಿದರೆ ಅವರನ್ನೇ ಬೆದರಿಸುವುದು, ಟ್ರೋಲ್ ಮಾಡುವುದು… ಭಯೋತ್ಪಾದನೆ ಅಲ್ಲ ಎಂದಾದರೆ, ಭಯೋತ್ಪಾದನೆ ಎಂದರೆ ಮತ್ತೇನು’ ಎಂದು ಪ್ರಶ್ನಿಸಿದ್ದಾರೆ.
ಕಮಲ್ ವಿರುದ್ಧ ಪ್ರಕರಣ ದಾಖಲು
ಬಲಪಂಥೀಯರಲ್ಲೂ ಭಯೋತ್ಪಾದಕರಿದ್ದಾರೆ. ಹಿಂದೂ ಬಲಪಂಥೀಯ ಸಂಘಟನೆಗಳಲ್ಲಿ ಭಯೋತ್ಪಾದಕರು ಇಲ್ಲ ಎಂದು ಇನ್ನು ವಾದಿಸುವಂತಿಲ್ಲ’ ಎಂದು ಪತ್ರಿಕೆಯೊಂದಕ್ಕೆ ಲೇಖನ ಬರೆದು ತೀವ್ರ ಟೀಕೆಗೆ ಗುರಿಯಾಗಿರುವ ನಟ ಕಮಲ್ ಹಾಸನ್ ವಿರುದ್ಧ ವಾರಾಣಸಿ ಯಲ್ಲಿ ಪ್ರಕರಣ ದಾಖಲಾಗಿದೆ. ಮಾನನಷ್ಟ ಮೊಕದ್ದಮೆ, ಧಾರ್ಮಿಕ ಭಾವನೆಗಳಿಗೆ ಧಕ್ಕೆ, ಧರ್ಮಗಳ ನಡುವಿನ ಸಂಘರ್ಷಕ್ಕೆ ಕಾರಣವಾಗಿದ್ದಾರೆಂದು ಆರೋಪಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಹಿಂದೂ ಸಂಘಟನೆಗಳ ಲ್ಲಿಯೂ ಉಗ್ರವಾದ ನುಸುಳಿಬಿಟ್ಟಿದೆ ಎಂದು ಹಾಸನ್ ಹೇಳಿದ್ದು, ಸಹಜವಾಗಿ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಈಪ್ರಕರಣಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ಶನಿವಾರ ನಡೆವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.