ನಗರದಲ್ಲಿ ಇಂದಿರಾ ಸಾರಿಗೆ
Team Udayavani, Nov 4, 2017, 11:01 AM IST
ಬೆಂಗಳೂರು: ನಗರದಲ್ಲಿ ಈಗಾಗಲೇ ಜಾರಿಯಲ್ಲಿರುವ “ಅಟಲ್ ಸಾರಿಗೆ’ ಜತೆಗೆ “ಇಂದಿರಾ ಸಾರಿಗೆ’ ವ್ಯವಸ್ಥೆಯನ್ನು ಜಾರಿಗೆ ತರುವ ಕುರಿತಂತೆ ಚಿಂತನೆ ನಡೆದಿದೆ ಎಂದು ಸಾರಿಗೆ ಸಚಿವ ಎಚ್.ಎಂ. ರೇವಣ್ಣ ಹೇಳಿದರು.
ಕೆಪಿಸಿಸಿ ಕಚೇರಿಗೆ ಆಗಮಿಸಿ ಕಾರ್ಯಕರ್ತರ ಅಹವಾಲು ಸ್ವೀಕರಿಸಿ ನಂತರ ಸುದ್ದಿಗಾರರ ಜತೆ ಮಾತನಾಡಿ, ಮಹಿಳೆಯರು ಮತ್ತು ವಿದ್ಯಾರ್ಥಿಗಳಿಗೆ ರಿಯಾಯ್ತಿ ದರದಲ್ಲಿ ಆಯ್ದ ಪ್ರದೇಶಗಳಿಗೆ ಇಂದಿರಾ ಸಾರಿಗೆ ಬಸ್ಗಳನ್ನು ಓಡಿಸಲು ಯೋಜಿಸಲಾಗಿದ್ದು, ಈ ಯೋಜನೆಯ ಸಾಧಕ -ಬಾಧಕಗಳ ಕುರಿತು ಚರ್ಚೆ ನಡೆಯುತ್ತಿದೆ ಎಂದು ತಿಳಿಸಿದರು.
ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಎಷ್ಟು ಪ್ರಮಾಣದಲ್ಲಿ ರಿಯಾಯ್ತಿ ನೀಡಬೇಕು ಎನ್ನುವುದು ಇನ್ನೂ ತೀರ್ಮಾನವಾಗಿಲ್ಲ. ಶೀಘ್ರವೇ ಅಂತಿಮಗೊಳಿಸಿ ಇಂದಿರಾ ಸಾರಿಗೆ ಆರಂಭಿಸುತ್ತೇವೆ.
ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿಯೂ ನಗರ ಸಾರಿಗೆ ವ್ಯವಸ್ಥೆಯನ್ನು ಉತ್ತಮಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. 9 ಲಕ್ಷ ಕಿ. ಮೀ ಸಂಚರಿಸಿರುವ ಬಸ್ಗಳನ್ನು ಬದಲಾವಣೆ ಮಾಡಲು ತೀರ್ಮಾನಿಸಲಾಗಿದ್ದು, ರಸ್ತೆ ಸಾರಿಗೆ ವ್ಯವಸ್ಥೆಯನ್ನು ಖಾಸಗಿಕರಣ ಮಾಡುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.