ರಾಜ್ಯದ ಎಲ್ಲ ಶಾಲೆಗಳಲ್ಲಿ ಮಕ್ಕಳು ಟಿಪ್ಪು ಜಯಂತಿ ಆಚರಿಸಲಿ
Team Udayavani, Nov 4, 2017, 11:43 AM IST
ಧಾರವಾಡ: ಟಿಪ್ಪು ಸುಲ್ತಾನ್ ಒಬ್ಬ ದೇಶಪ್ರೇಮಿಯಾಗಿದ್ದು, ಆತನ ಜಯಂತಿಯನ್ನು ಎಲ್ಲಾ ಶಾಲೆಗಳಲ್ಲಿ ಆಚರಿಸುವಂತೆ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ವೇದವ್ಯಾಸ ಕೌಲಗಿ ಹೇಳಿದರು. ಅಕಾಡೆಮಿ ಅಧ್ಯಕ್ಷರಾಗಿ ಒಂದು ವರ್ಷ ಅವಧಿ ಪೂರೈಸಿದ ಹಿನ್ನೆಲೆಯಲ್ಲಿ ಶುಕ್ರವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
1960ರ ದಶಕದಿಂದಲೂ ಟಿಪ್ಪು ಸುಲ್ತಾನ ಮೈಸೂರು ಹುಲಿ ಎಂದು ಎಲ್ಲಾ ಪಠ್ಯಕ್ರಮಗಳಲ್ಲೂ ಅಳವಡಿಸಲಾಗಿದೆ. ಆತನೊಬ್ಬ ಶೂರನಾಗಿದ್ದ ಅಷ್ಟೇಯಲ್ಲ, ಸರ್ವಧರ್ಮ ಸಮನ್ವಯಕಾರನಾಗಿದ್ದ. ಹೀಗಾಗಿ ಬಿಜೆಪಿಯವರು ಇದೀಗ ಟಿಪ್ಪು ಕುರಿತು ಮಾಡುತ್ತಿರುವ ಆರೋಪಗಳಲ್ಲಿ ಹುರುಳಿಲ್ಲ ಎಂದರು.
ಕಂಪ್ಯೂಟರ್ ತರಬೇತಿ: ಧಾರವಾಡ ಜಿಲ್ಲೆಯ ವ್ಯಾಪ್ತಿಯಲ್ಲಿರುವ 4 ಕುಗ್ರಾಮಗಳಲ್ಲಿನ ಮಕ್ಕಳಿಗೆ ಕಂಪ್ಯೂಟರ್ ತರಬೇತಿ ನೀಡಲು ಉದ್ದೇಶಿಸಲಾಗಿದೆ. ನ.7ಕ್ಕೆ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ರಾಜ್ಯದ 35 ಹಳ್ಳಿಗಳನ್ನು ಗುರುತಿಸಿ, ಅಲ್ಲಿನ ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಈ ತರಬೇತಿ ನೀಡಲಾಗುತ್ತಿದೆ.
ನಂತರ ಇದೇ ಯೋಜನೆಯನ್ನು ಇನ್ನಷ್ಟು ಜಿಲ್ಲೆಗಳಿಗೆ ವಿಸ್ತರಿಸಲಾಗುವುದು ಎಂದು ಕೌಲಗಿ ಹೇಳಿದರು. ಹುಬ್ಬಳ್ಳಿಯ ರಿಕ್ರಿಯೇಷನ್ ಕ್ಲಬ್ ಜಾಗೆಯನ್ನು ಮರಳಿ ಸರ್ಕಾರಕ್ಕೆ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅಲ್ಲದೇ ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಈ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.
ಹೀಗಾಗಿ ಜಗದೀಶ ಶೆಟ್ಟರ ಮತ್ತು ಸಂಸದ ಪ್ರಹ್ಲಾದ ಜೋಶಿ ಅವರು ಕೇವಲ ರಾಜಕಾರಣ ಮಾಡುವುದಕ್ಕಾಗಿಯೇ ಕೆಲವು ಕೋಮು ಸಂಬಂಧಿ ವಿಚಾರಗಳನ್ನು ಪ್ರಸ್ತಾಪಿಸುತ್ತಿದ್ದು, ಇದಕ್ಕೆ ಜನರು ತಕ್ಕಪಾಠ ಕಲಿಸುತ್ತಾರೆ ಎಂದರು. ಪೀರಪ್ಪ ನಡುವಿನಮನಿ, ಮಲ್ಲಮ್ಮ ಚಲುಮಿ, ಬಾಲವಿಕಾಸ ಅಕಾಡೆಮಿಯ ಆಡಳಿತಾಧಿಕಾರಿ ಮಲ್ಲಿಕಾರ್ಜುನ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.