ಅಲೆಮಾರಿ ಜನಾಂಗಕ್ಕೆ 150 ಕೋಟಿ ಅನುದಾನ


Team Udayavani, Nov 4, 2017, 11:43 AM IST

h4-alemari.jpg

ಧಾರವಾಡ: ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ, ಅರೆ ಅಲೆಮಾರಿ ಜನಾಂಗಗಳ ಅಭಿವೃದ್ಧಿಗಾಗಿ ಸರ್ಕಾರ 150 ಕೋಟಿ ರೂ. ಮೀಸಲಿರಿಸಿದ್ದು,ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ, ಅಲೆಮಾರಿ, ಅರೆ ಅಲೆಮಾರಿ ಸೂಕ್ಷ್ಮ ಅತಿ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶ ಸ್ಥಾಪಿಸಿದೆ ಎಂದು ಅಭಿವೃದ್ಧಿ ಕೋಶದ ರಾಜ್ಯ ನೋಡಲ್‌ ಅಧಿಕಾರಿ ಡಾ| ಬಾಲಗುರುಮೂರ್ತಿ ಹೇಳಿದರು. 

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅವರು, ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಹಿಂದುಳಿದ ಸಮುದಾಯದ ಅಭಿವೃದ್ದಿಗಾಗಿ ಉಚಿತ ನಿವೇಶನ, ಮೂಲಸೌಕರ್ಯ ಪೂರೈಕೆ, ಭೂ ಒಡೆತನ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಸಮುದಾಯ ಭವನ, ಕೌಶಲಾಭಿವೃದ್ಧಿ ತರಬೇತಿ, ಮಹಿಳಾ ಸ್ವ-ಸಹಾಯ ಸಂಘಗಳಿಗೆ ಅನುದಾನ, 

ವ್ಯಾಪಾರ ಸೇವೆ ಮತ್ತು ಉತ್ಪಾದನಾ ಘಟಕಗಳಿಗೆ ಮತ್ತು ಸಮುದಾಯದ ಸಂಘ-ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.  ಸೂಕ್ಷ್ಮ-ಅತಿಸೂಕ್ಷ್ಮ ಸಮುದಾಯ ದಲ್ಲಿ ಶಾಲೆಯನ್ನು ಬಿಟ್ಟವರೆ ಹೆಚ್ಚಾಗಿರುತ್ತಾರೆ.

ಅವರಿಗೆ ಮರಳಿ ಶಾಲಾ ಪ್ರವೇಶ ಅಥವಾ ನೇರ ಪ್ರವೇಶ, ಪ್ರಮಾಣ ಪತ್ರ ಹಾಗೂ ಇತರೆ ಪ್ರಮಾಣ ಪತ್ರಗಳನ್ನು ನಿಗದಿಪಡಿಸಿದ ಅವಧಿಯಲ್ಲಿ ಪೂರೈಸಬೇಕು. ಅಲೆಮಾರಿ ಜನಾಂಗದವರು ಒಂದೇ ಕಡೆ ನೆಲೆಸದಿದ್ದುದರಿಂದ ದಾಖಲಾತಿಗಳು ಲಭ್ಯತೆ ಇರುವುದಿಲ್ಲ ಎಂದರು. 

ಜಿಲ್ಲೆಯಲ್ಲಿ ದಕ್ಕಲ, ಬಡಗ ಜಂಗಮ, ಸಿಳ್ಳಿಕ್ಯಾತರು, ಚೆನ್ನದಾಸರ, ಸುಡಗಾಡಸಿದ್ದರು, ಗಂಟುಚೋರರು ಹಾಗೆ 49 ಸಮುದಾಯಗಳು ಅಲೆಮಾರಿ-ಅರೆ ಅಲೆಮಾರಿ ಸೂಕ್ಷ್ಮ ಅತಿಸೂಕ್ಷ್ಮ ಸಮುದಾಯದಲ್ಲಿ ಸೇರಿವೆ. ಅವರೆಲ್ಲರ ಆರ್ಥಿಕ ಅಭಿವೃದ್ಧಿ, ಸಾಮಾಜಿಕ ಅಭಿವೃದ್ಧಿ ಆಗಬೇಕಾಗಿದ್ದು, ಪ್ರತಿ ತಾಲೂಕುಗಳಲ್ಲಿ ಕುಟುಂಬಸ್ಥರ ಹೆಸರು ಡಾಟಾ ಎಂಟ್ರಿ ಮಾಡಬೇಕು. ಅವರಿಗೆ ವಸತಿಗೆ ನಿವೇಶನಕ್ಕಾಗಿ ಭೂಮಿ ಆಯ್ಕೆ ಮಾಡಿಕೊಳ್ಳಬೇಕು.

ಡಾ| ಬಿ.ಆರ್‌. ಅಂಬೇಡ್ಕರ್‌ ನಿಗಮವು ಭೂಮಿ ಖರೀದಿಸಲಿದೆ. ಅಲ್ಲದೆ ಅಭಿವೃದ್ಧಿ ಕೋಶ ನಿವೇಶನ ಹಂಚಿಕೆ ಮಾಡಿ ಮನೆ ಕಟ್ಟಲು ಸಹಾಯಧನ ನೀಡಲಿದೆ ಎಂದರು. ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ನವೀನ ಸಿಂತ್ರೆ ಸ್ವಾಗತಿಸಿದರು. ಜಿಪಂ ಸಿಇಒ ಸ್ನೇಹಲ್‌ ರಾಯಮಾನೆ, ಹುಡಾ ಮಾಜಿ ಅಧ್ಯಕ್ಷ ದಾನಪ್ಪ ಕಬ್ಬೇರ ಸೇರಿದಂತೆ ಅಲೆಮಾರಿ ಜನಾಂಗದ ಹಿರಿಯರು ಭಾಗವಹಿಸಿದ್ದರು. 

ಟಾಪ್ ನ್ಯೂಸ್

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.