ಮುಡಾದಲ್ಲೊಬ್ಬರು ಕನ್ನಡ ಪ್ರೇಮಿ 


Team Udayavani, Nov 4, 2017, 11:45 AM IST

m4-midha.jpg

ಮೈಸೂರು: ಕನ್ನಡದ ಬಗ್ಗೆ ಅಪಾರ ಅಭಿಮಾನ ಹೊಂದಿರುವ ಸರ್ಕಾರಿ ಅಧಿಕಾರಿಯೊಬ್ಬರು ಆಡಳಿತದಲ್ಲಿ ಕನ್ನಡ ಭಾಷೆಯನ್ನು ಅಳವಡಿಸಿಕೊಳ್ಳುವ ಮೂಲಕ ಕನ್ನಡದ ಉಳಿವಿಗಾಗಿ ಎಲೆಮರೆ ಕಾಯಿಯಂತೆ ಸೇವೆ ಸಲ್ಲಿಸುತ್ತಿದ್ದಾರೆ.

ಕನ್ನಡ ನಾಡು-ನುಡಿ, ನೆಲ-ಜಲ, ಭಾಷೆಯ ಮೇಲಿನ ಅಭಿಮಾನ ಕೇವಲ ನವೆಂಬರ್‌ ತಿಂಗಳಿಗಷ್ಟೇ ಸೀಮಿತ ಎಂಬುದು ಅನೇಕರ ವಾದ. ಆದರೆ ಇದಕ್ಕೆ ತದ್ವಿರುದ್ಧ ಎಂಬಂತೆ ನಗರದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಗರ ಯೋಜನಾ ಸಹಾಯಕ ನಿರ್ದೇಶಕ ಪಾ.ನಟರಾಜ್‌ ಅವರು, ತಮ್ಮ ವೃತ್ತಿಯಲ್ಲೇ ಕನ್ನಡದ ಉಳಿವಿಗಾಗಿ ಶ್ರಮಿಸುತ್ತಿದ್ದಾರೆ. ದೈನಂದಿನ ಕಚೇರಿ ಕೆಲಸಗಳಲ್ಲಿ ಸಂಪೂರ್ಣ ಕನ್ನಡ ಬಳಕೆಗೆ ಆದ್ಯತೆ ನೀಡುತ್ತಿದ್ದಾರೆ.

ಬಾಲ್ಯದಲ್ಲೇ ಕನ್ನಡ ಪ್ರೀತಿ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಮೂಲದ ಪಾ.ನಟರಾಜ್‌, ಪಾಲಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದು, ಮೈಸೂರಿನ ಮರಿಮಲ್ಲಪ್ಪ ವಿದ್ಯಾಸಂಸ್ಥೆಯಲ್ಲಿ ಮಾಧ್ಯಮಿಕ ಶಿಕ್ಷಣ ಹಾಗೂ ಹಾಸನದ ಮಲಾ°ಡ್‌ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಬಿಇ(ಸಿವಿಲ್‌) ಪದವಿ ಪಡೆದಿದ್ದಾರೆ. 1985ರಲ್ಲಿ ಸರ್ಕಾರಿ ಸೇವೆ ಆರಂಭಿಸಿದ ಮೊದಲ ದಿನದಿಂದ ಇಂದಿನವರೆಗೂ ಕನ್ನಡದ ಮೇಲಿನ ಪ್ರೀತಿಯನ್ನು ಬಿಟ್ಟಿಲ್ಲ.

ವೃತ್ತಿಯಲ್ಲೂ ಕನ್ನಡಾಭಿಮಾನ: ನಟರಾಜ್‌ ಅವರಿಗೆ ಶಾಲಾ ದಿನಗಳಿಂದ ಆರಂYಗೊಂಡ ಕನ್ನಡ ಮೇಲಿನ ಪ್ರೀತಿ ಇಂದಿಗೂ ಜೀವಂತವಾಗಿದೆ. ಹೀಗಾಗಿ ಕಚೇರಿ ಕೆಲಸವನ್ನು ಸಂಪೂರ್ಣ ಕನ್ನಡದಲ್ಲೇ ನಿರ್ವಹಿಸುತ್ತಿದ್ದಾರೆ. ತಮ್ಮ ಕಚೇರಿಯಲ್ಲಿ ಬಳಕೆಯಾಗುವ ಗುತ್ತಿಗೆದಾರರ ಕಾಮಗಾರಿಗಳ ಅಂದಾಜು ವೆಚ್ಚ, ವರದಿಗಳು ಹೀಗೆ ಎಲ್ಲಾ ಬಗೆಯ ಪತ್ರ ವ್ಯವಹಾರಗಳಲ್ಲಿ ಕನ್ನಡ ಭಾಷೆ ಮತ್ತು ಕನ್ನಡ ಅಂಕಿಗಳನ್ನು ಕಡ್ಡಾಯವಾಗಿ ಬಳಸಿ ಗಮನ ಸೆಳೆದಿದ್ದಾರೆ.

ಇನ್ನೂ ರಾಜ್ಯದಲ್ಲೇ ಮೊದಲಿಗೆ ಕಾಮಗಾರಿಗಳಲ್ಲಿ ಬಳಸುವ ಅಳತೆ ಪುಸ್ತಕದಲ್ಲಿ ಕನ್ನಡ ಅಂಕಿ ಬಳಸಿರುವುದು, ತಮ್ಮ ಕಚೇರಿ(ಮುಡಾ)ಯಲ್ಲಿರುವ ಎಲ್ಲಾ ಗಣಕಯಂತ್ರಗಳಿಗೆ ಕನ್ನಡದಲ್ಲೇ ತಂತ್ರಾಂಶ ಅಳವಡಿಕೆ, ನಿವೇಶನಗಳ ಹಕ್ಕು ಪತ್ರಗಳಲ್ಲಿ ಕನ್ನಡ ಅಂಕಿಗಳನ್ನು ಬಳಸುವ ತಂತ್ರಾಂಶ ಸಿದ್ಧಪಡಿಸಿದ್ದಾರೆ. ಮುಡಾ ಅಧಿಕಾರಿಯ ಕನ್ನಡಾಭಿಮಾನವನ್ನು ಗಮನಿಸಿದ ಜಿಲ್ಲಾಡಳಿತ ಪಾ.ನಟರಾಜ್‌ ಅವರಿಗೆ ಆಡಳಿತದಲ್ಲಿ ಕನ್ನಡ ವಿಭಾಗದಿಂದ 2017-18ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.

ಕನ್ನಡದ ಪ್ರೀತಿ ಹೇಗೆ?: ಶಾಲಾ ವಿದ್ಯಾರ್ಥಿಯಾಗಿದ್ದ ವೇಳೆ ಒಮ್ಮೆ ಮೈಸೂರಿನ ದಸರಾ ವಸ್ತುಪ್ರದರ್ಶನಕ್ಕೆ ಭೇಟಿ ನೀಡಿದ್ದರು. ಈ ವೇಳೆ ಪ್ರಾಧ್ಯಾಪರೊಬ್ಬರು ಕನ್ನಡ ಅಂಕಿಗಳಿದ್ದ ಭಿತ್ತಿಪತ್ರ ಹಂಚುತ್ತಾ, ಕನ್ನಡ ಬಳಸುವಂತೆ ಮನವಿ ಮಾಡುತ್ತಿದ್ದರು.

ಅಂದಿನ ಈ ಘಟನೆಯೇ ತಮಗೆ ಕನ್ನಡದ ಮೇಲೆ ಹೆಚ್ಚಿನ ಆಸಕ್ತಿ ಮೂಡಿಸುವ ಜತೆಗೆ ಕನ್ನಡವನ್ನು ಉಳಿಸಿ-ಬೆಳೆಸಬೇಕೆಂಬ ಬಗ್ಗೆ ಅಭಿಮಾನ ಹೆಚ್ಚಾಗಲು ಕಾರಣವಾಯಿತು ಎಂದಿದ್ದಾರೆ.  ಕರ್ನಾಟಕದಲ್ಲಿರುವ ಅನ್ಯ ಭಾಷಿಕರು ತಮ್ಮ ಸಂಸ್ಕೃತಿ, ಭಾಷಾಭಿಮಾನವನ್ನು ಎಂದಿಗೂ ಬಿಟ್ಟುಕೊಡುವುದಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ಕನ್ನಡಿಗರೇ ಕನ್ನಡ ಭಾಷೆ, ಸಂಸ್ಕೃತಿಯನ್ನು ಉಳಿಸುತ್ತಿಲ್ಲ ಎಂದು ವಿಷಾದಿಸಿದ್ದಾರೆ.

ಇಂಗ್ಲಿಷ್‌ ಅರ್ಜಿ ತಿರಸ್ಕರಿಸಿ: ರಾಜ್ಯದ ಸಾಕಷ್ಟು ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಉಳಿವಿಗಾಗಿ ಅನೇಕರು ಶ್ರಮಿಸುತ್ತಿದ್ದಾರೆ. ಸರ್ಕಾರ ಇವರನ್ನು ಗುರುತಿಸಬೇಕು. ಜತೆಗೆ ಆಂಗ್ಲ ಭಾಷೆಯಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಸ್ವೀಕರಿಸದ ಅಧಿಕಾರ ನೀಡಿದರೆ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಭಾಷೆ ಬಳಕೆಗೆ ಆದ್ಯತೆ ಸಿಗಲಿದೆ ಎಂದು ಕನ್ನಡ ಅಭಿಮಾನಿ ಪಾ.ನಟರಾಜ್‌ ಅಭಿಪ್ರಾಯಪಟ್ಟಿದ್ದಾರೆ. 

* ಸಿ.ದಿನೇಶ್‌

ಟಾಪ್ ನ್ಯೂಸ್

arrested

Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರ ಬಂಧನ

2-ai

Artificial Intelligence: ಎಐ ಯುಗದಲ್ಲಿ ನಾವು ನೀವು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

1-bheesh

Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ

adani

Gautam Adani, ಸೋದರಳಿಯ ಸಾಗರ್ ವಿರುದ್ಧ ಲಂಚದ ಆರೋಪ ಇಲ್ಲ: ಅದಾನಿ ಗ್ರೂಪ್

1-bang

Bangladesh: ಚಿನ್ಮಯ್‌ ಕೃಷ್ಣದಾಸ್‌ ಬಂಧನ ಖಂಡಿಸಿ ಪ್ರತಿಭಟನೆ: ವಕೀಲನ ಹ*ತ್ಯೆ

Samantha Ruth Prabhu: ನನ್ನ ಸೆಕೆಂಡ್‌ ಹ್ಯಾಂಡ್‌ ಅಂದ್ರು!: ಸಮಂತಾ ದುಃಖದ ಮಾತು

Samantha Ruth Prabhu: ನನ್ನ ಸೆಕೆಂಡ್‌ ಹ್ಯಾಂಡ್‌ ಅಂದ್ರು!: ಸಮಂತಾ ದುಃಖದ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

arrested

Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರ ಬಂಧನ

3-aranthodu

Aranthodu: ವಾಹನ ಡಿಕ್ಕಿ ಹೊಡೆದು ಕಾಡು ಹಂದಿ ಸಾವು

2-ai

Artificial Intelligence: ಎಐ ಯುಗದಲ್ಲಿ ನಾವು ನೀವು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

1-bheesh

Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.