ಖಾಸಗಿ ವೈದ್ಯರ ಮುಷ್ಕರ: ರೋಗಿಗಳ ಪರದಾಟ
Team Udayavani, Nov 4, 2017, 11:45 AM IST
ಮೈಸೂರು: ರಾಜ್ಯ ಸರ್ಕಾರದ ಉದ್ದೇಶಿತ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ವಿಧೇಯಕ(ಕೆಪಿಎಂಇ) ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘ ಕರೆ ನೀಡಿದ್ದ ಒಂದು ದಿನದ ಮುಷ್ಕರಕ್ಕೆ ನಗರದಲ್ಲಿ ಉತ್ತಮ ಬೆಂಬಲ ವ್ಯಕ್ತವಾಯಿತು.
ಮೈಸೂರು ನಗರ ಖಾಸಗಿ ಆಸ್ಪತ್ರೆಗಳ ಸಂಘ, ಭಾರತೀಯ ವೈದ್ಯಕೀಯ ಸಂಘದ ಮೈಸೂರು ಶಾಖೆಯ ನೇತೃತ್ವದಲ್ಲಿ ನಗರದ ಜೆ.ಕೆ.ಮೈದಾನದಲ್ಲಿ ಜಮಾಯಿಸಿದ ನೂರಾರು ವೈದ್ಯರು, ಶುಶ್ರೂಷಕಿಯರು, ತಂತ್ರಜ್ಞರು ಸೇವೆ ಸ್ಥಗಿತಗೊಳಿಸಿ ಮುಷ್ಕರದಲ್ಲಿ ಪಾಲ್ಗೊಂಡಿದ್ದರು.
ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ಈ ಕಾಯ್ದೆ ಖಾಸಗಿ ಆಸ್ಪತ್ರೆ, ವೈದ್ಯರಿಗೆ ಮರಣ ಶಾಸನವಾಗಿದ್ದು, ಕಾಯ್ದೆ ಜಾರಿ ನಿರ್ಧಾರವನ್ನು ಸರ್ಕಾರ ಕೈಬಿಡಬೇಕಿದೆ. ಇಲ್ಲವಾದಲ್ಲಿ ಸಾವಿರಾರು ವೈದ್ಯರು ವೈದ್ಯಕೀಯ ವೃತ್ತಿಯನ್ನೇ ತ್ಯಜಿಸಿ ಬೇರೆ ವೃತ್ತಿ ಅವಲಂಬಿಸುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.
ಮೈಸೂರು ಖಾಸಗಿ ಆಸ್ಪತ್ರೆಗಳ ಸಂಘದ ಅಧ್ಯಕ್ಷ ಡಾ.ಮಹೇಶ್‌ಕುಮಾರ್, ನಿವೃತ್ತ ನ್ಯಾಯಮೂರ್ತಿ ವಿಕ್ರಂಜಿತ್ ಸೇನ್ ಅವರ ನೇತೃತ್ವದ ವರದಿಯನ್ನು ಮೂಲೆಗುಂಪು ಮಾಡಿ ಮತ್ತೂಂದು ವರದಿ ಪಡೆದುಕೊಂಡಿರುವ ಆರೋಗ್ಯ ಸಚಿವರು, ತಮಗೆ ಬೇಕಾದ ಅಂಶಗಳನ್ನು ಜಾರಿಗೆ ತರಲು ಹೊರಟಿದ್ದಾರೆಂದು ದೂರಿದರು.
ವೈದ್ಯರ ಮುಷ್ಕರದಿಂದಾಗಿ ನಗರದ ಪ್ರಮುಖ ಖಾಸಗಿ ಆಸ್ಪತ್ರೆಗಳಲ್ಲಿ ನೀರವಮೌನ ಆವರಿಸಿತ್ತು. ಆಸ್ಪತ್ರೆಯಲ್ಲಿ ವೈದ್ಯರ ಸೇವೆ ಇಲ್ಲದಿರುವ ಕಾರಣ ನೋಂದಣಿಕೌಂಟರ್, ಹೊರರೋಗಿಗಳ ತಪಾಸಣಾ ಕೇಂದ್ರಗಳು ಬಣಗುಡುತ್ತಿದ್ದವು. ಹೀಗಾಗಿ ವಿವಿಧ ಬಗೆಯ ಚಿಕಿತ್ಸೆಗಳಿಗಾಗಿ ಆಸ್ಪತ್ರೆಗೆ ಆಗಮಿಸಿದ್ದ ಬಹುತೇಕ ರೋಗಿಗಳು ಸರ್ಕಾರಿ ಆಸ್ಪತ್ರೆಗಳನ್ನು ಅವಲಂಬಿಸಬೇಕಾಯಿತು.
ಇದರಿಂದಾಗಿ ಕೆ.ಆರ್.ಆಸ್ಪತ್ರೆಯಲ್ಲಿ ಪ್ರತಿದಿನಕ್ಕಿಂತಲೂ ಹೆಚ್ಚಿನ ರೋಗಿಗಳು ಆಗಮಿಸಿ ಚಿಕಿತ್ಸೆ ಪಡೆದರು. ಸರ್ಕಾರ ವೈದ್ಯರ ರಜೆ ರದ್ದುಪಡಿಸುವ ಜತೆಗೆ, ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶಿಸಿದ್ದ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆ ವೈದ್ಯರು ಎಂದಿನಂತೆ ಕಾರ್ಯ ನಿರ್ವಹಿಸಿದರು.
ಮುಷ್ಕರದ ಪರಿಣಾಮ ನಗರದ ಜೆಎಸ್‌ಎಸ್ ಆಸ್ಪತ್ರೆ, ಕೊಲಂಬಿಯಾ ಏಷಿಯಾ, ಬಿಜಿಎಸ್ ಅಪೋಲೋ, ಗೋಪಾಲಗೌಡ ಆಸ್ಪತ್ರೆ, ಕಾಮಾಕ್ಷಿ ಆಸ್ಪತ್ರೆ, ಸೆಂಟ್ ಜೋಸೆಫ್, ಮಿಷನ್ ಆಸ್ಪತ್ರೆ ಸೇರಿದಂತೆ ನಗರದ 120 ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್‌ಗಳು ಸೇರಿದಂತೆ ಹಲವು ಡಯಾಗ್ನೊàಸ್ಟಿಕ್ ಸೆಂಟರ್‌ಗಳು ಸೇವೆ ಸ್ಥಗಿತಗೊಳಿಸಿದ್ದವು. ಅಲ್ಲದೆ, ಮುಷ್ಕರ ಹಿನ್ನೆಲೆಯಲ್ಲಿ ಜೆ.ಕೆ.ಮೈದಾನ ಅಲ್ಯುಮಿನಿ ಅಸೋಸಿಯೇಷನ್ ಅಮೃತ ಮಹೋತ್ಸವ ಭವನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಮೈಸೂರು ಖಾಸಗಿ ಆಸ್ಪತ್ರೆಗಳ ಸಂಘದ ಅಧ್ಯಕ್ಷ ಡಾ.ಮಹೇಶ್‌ಕುಮಾರ್, ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ವಿಶ್ವೇಶ್ವರಯ್ಯ, ಕಾರ್ಯದರ್ಶಿ ಡಾ.ಸುಜಾತರಾವ್, ಡಾ.ಸಂಜಯ್, ಡಾ.ಸಂತೃಪ್ತ್, ವಿಜಯ್, ಡಾ.ಅಭಿಜಿತ್ ಮತ್ತಿತರರಿದ್ದರು.
ಸರ್ಕಾರ ಜಾರಿಗೊಳಿಸಲು ಹೊರಟಿರುವ ಕಾಯ್ದೆ ಜಾರಿಗೆ ಬಂದರೆ ಖಾಸಗಿ ಆಸ್ಪತ್ರೆ, ವೈದ್ಯರು, ವೈದ್ಯ ಸಿಬ್ಬಂದಿ ಮೇಲೆ ಪರಿಣಾಮ ಬೀರಲಿದೆ. ಈಗಾಗಲೇ ಗ್ರಾಹಕರ ನ್ಯಾಯಾಲಯ ಮತ್ತು ವೈದ್ಯಕೀಯ ಪರಿಷತ್ತುಗಳು ರೋಗಿಗಳಿಗೆ ನ್ಯಾಯ ಒದಗಿಸುತ್ತಿದ್ದು, ಹೀಗಿದ್ದರೂ ಜಿಲ್ಲಾಮಟ್ಟದಲ್ಲಿ ಮತ್ತೂಂದು ಕುಂದುಕೊರತೆ ಪರಿಹಾರ ಸಮಿತಿ ರಚನೆ ಅವಶ್ಯಕತೆ ಇದೆಯೇ? ವೈದ್ಯರು ಮಾನಸಿಕವಾಗಿ ಗುಣಮಟ್ಟದ ಸೇವೆ ನೀಡಲು ಸಾಧ್ಯವಾಗಲಿದೆಯೇ?.
-ಡಾ.ಮಹೇಶ್‌ಕುಮಾರ್, ಮೈಸೂರು ಖಾಸಗಿ ಆಸ್ಪತ್ರೆಗಳ ಸಂಘದ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ
MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.