ನೋಟು ನಿಷೇಧದ ಬಳಿಕ ದೇಶದಲ್ಲಿ ಶೇ.80ರಷ್ಟು ಡಿಜಿಟಲ್ ವಹಿವಾಟು
Team Udayavani, Nov 4, 2017, 12:26 PM IST
ನವದೆಹಲಿ:ದೇಶದಲ್ಲಿ 500, 1000 ರೂ. ಮುಖಬೆಲೆಯ ನೋಟು ಅಮಾನ್ಯೀಕರಣಗೊಂಡ ಬಳಿಕ 2017 18ನೇ ಸಾಲಿನಲ್ಲಿ ಡಿಜಿಟಲ್ ಪಾವತಿ (ವಹಿವಾಟು) ಶೇ.80ರಷ್ಟು ಹೆಚ್ಚಳವಾಗಿರುವುದಾಗಿ ಅಂಕಿ-ಅಂಶಗಳಿಂದ ದೃಢಪಟ್ಟಿದೆ. ಒಟ್ಟು ವಹಿವಾಟು ಸುಮಾರು 1,800 ಕೋಟಿ ರೂಪಾಯಿಯಷ್ಟು ದಾಟುವ ನಿರೀಕ್ಷೆ ಇದೆ ಎಂದು ವರದಿ ತಿಳಿಸಿದೆ.
ಪ್ರಸಕ್ತ ಸಾಲಿನ ಅಕ್ಟೋಬರ್ ವರೆಗೆ 1000 ಕೋಟಿ ರೂಪಾಯಿ ಡಿಜಿಟಲ್ ವಹಿವಾಟು ನಡೆದಿದೆ. ಇದು 2016 17 ಸಾಲಿನ ವಹಿವಾಟಿಗೆ ಸಮನಾಂತರವಾಗಿದೆ. ಈ ಬೆಳವಣಿಗೆ ಜೂನ್, ಜುಲೈ ಹಾಗೂ ಆಗಸ್ಟ್ ನಲ್ಲಿಯೂ ಮುಂದುವರಿದಿದ್ದು ಸುಮಾರು 136ರಿಂದ, 138 ಕೋಟಿ ಸರಾಸರಿ ವಹಿವಾಟು ನಡೆದಿರುವುದಾಗಿ ಮಾಹಿತಿ ತಂತ್ರಜ್ಞಾನ ಸಚಿವಾಲಯ ವಿವರಿಸಿದೆ.
ಕುತೂಹಲಕರ ಬೆಳವಣಿಗೆ ಎಂಬಂತೆ ಮಾರ್ಚ್ ಹಾಗೂ ಏಪ್ರಿಲ್ ತಿಂಗಳಲ್ಲಿ ಡಿಜಿಟಲ್ ವಹಿವಾಟು ಏರಿಕೆ ಕಂಡಿದ್ದು, ನೋಟು ನಿಷೇಧದಿಂದ ಉಂಟಾದ ನಗದು ಅಭಾವ ತಹಬದಿಗೆ ಬಂದ ನಂತರ ಡಿಜಿಟಲ್ ವಹಿವಾಟಿನ ಪ್ರಮಾಣ ಅಚ್ಚರಿಯ ರೀತಿಯಲ್ಲಿ ಏರಿಕೆ ಕಂಡಿದೆ ಎಂದು ಹೇಳಿದೆ.
ಸಂಸತ್ತಿನ ಆರ್ಥಿಕ ಸ್ಥಾಯಿ ಸಮಿತಿ ಈ ವರದಿಯನ್ನು ಹಂಚಿಕೊಂಡಿದ್ದು, ಎಲ್ಲಾ ವಲಯಗಳಲ್ಲಿಯೂ ದಿನದಿಂದ ದಿನಕ್ಕೆ ಆನ್ ಲೈನ್ ವಹಿವಾಟು ಹೆಚ್ಚಳವಾಗುತ್ತಿರುವುದು ಕಂಡು ಬಂದಿದೆ. ಕಳೆದ ವರ್ಷದ ನವೆಂಬರ್ ತಿಂಗಳಿನಿಂದ ಯುಪಿಐ, ಭೀಮ್, ಐಎಂಪಿಎಸ್, ಎಂ ವಾಲ್ಲೆಟ್ ಹಾಗೂ ಡೆಬಿಟ್ ಕಾರ್ಡ್ ಮೂಲಕ ವಹಿವಾಟು ನಡೆದಿರುವುದಾಗಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.