ವಿಟ್ಲ ಪೇಟೆ ಟ್ರಾಫಿಕ್‌ ಜಂಜಾಟಕ್ಕೆ ಕ್ರಮ


Team Udayavani, Nov 4, 2017, 3:47 PM IST

4-Nov11.jpg

ವಿಟ್ಲ: ವಿಟ್ಲ-ಪುತ್ತೂರು ರಸ್ತೆಯ ಬಲಬದಿಯಲ್ಲಿ ಯಾವುದೇ ವಾಹನಗಳನ್ನು ನಿಲ್ಲಿಸಬಾರದು. ವಿಟ್ಲ ಸಾಲೆತ್ತೂರು ರಸ್ತೆಯ ಬೆನಕ ಕ್ಲಿನಿಕ್‌ ಆಸ್ಪತ್ರೆ ತನಕ ಯಾವುದೇ ವಾಹನ ನಿಲ್ಲಿಸಬಾರದು. ವಿಟ್ಲ ಮಂಗಳೂರು ರಸ್ತೆಯ ಪಂಚಲಿಂಗೇಶ್ವರ ದೇವಸ್ಥಾನದ ಹಿಂಬದಿಯವರೆಗೆ ಹಾಗೂ ಕಾಸರಗೋಡು ರಸ್ತೆಯ ವಿಜಯಲಕ್ಷ್ಮೀ ಟ್ರೇಡರ್ ಅಂಗಡಿ ವರೆಗೆ ವಾಹನ ನಿಲುಗಡೆಗೆ ಅವಕಾಶವಿಲ್ಲ ಎಂದು ತೀರ್ಮಾನಿಸಲಾಗಿದೆ.

ವಿಟ್ಲ ಪ.ಪಂ. ಸಭಾಭವನದಲ್ಲಿ ಪ.ಪಂ. ಆಡಳಿತ, ಪೊಲೀಸ್‌ ಠಾಣಾಧಿಕಾರಿಗಳ ಸಮ್ಮುಖದಲ್ಲಿ ರಿಕ್ಷಾ, ಕಾರು, ಬಸ್‌ಗೆ ಸಂಬಂಧಪಟ್ಟ ವಿವಿಧ ಸಂಘಟನೆಗಳನ್ನು ಕರೆದು ಟ್ರಾಫಿಕ್‌ ಜಂಜಾಟ ಸಮಸ್ಯೆ ಬಗೆಹರಿಸಲು ಮಹತ್ವಪೂರ್ಣ ನಿರ್ಧಾರಗಳನ್ನು ಪ್ರಕಟಿಸಲಾಯಿತು.

ಪ.ಪಂ. ಅಧ್ಯಕ್ಷ ಅರುಣ ಎಂ. ವಿಟ್ಲ ಅಧ್ಯಕ್ಷತೆ ವಹಿಸಿದ್ದರು. ವಿಟ್ಲ ಠಾಣಾಧಿಕಾರಿ ನಾಗರಾಜ್‌, ಪ.ಪಂ. ಸ್ಥಾಯೀ ಸಮಿತಿ ಅಧ್ಯಕ್ಷ ವಿ. ರಾಮದಾಸ ಶೆಣೈ, ಮುಖ್ಯಾಧಿಕಾರಿ ಮಾಲಿನಿ ಮತ್ತಿತರರು ಉಪಸ್ಥಿತರಿದ್ದರು.

ವಿಟ್ಲ ಪುತ್ತೂರು ರಸ್ತೆಯ ಹೊಸ ಬಸ್‌ ನಿಲ್ದಾಣದ ಬಳಿಯ ಎಡಬದಿಗೆ ಪಾರ್ಕಿಂಗ್‌  ಬೆಳ್ತಂಗಡಿ, ಬಂಟ್ವಾಳ ತಾಲೂಕು ಮಾಡುವುದು, ವಿಟ್ಲ ಸಾಲೆತ್ತೂರು ರಸ್ತೆಯ ಸಮಾಜ ಸೇವಾ ಬ್ಯಾಂಕ್‌ ಬಳಿ ಬಸ್‌ ಮತ್ತು ರಿಕ್ಷಾಗಳಿಗೆ ನಿಲ್ಲಲು ಮಾತ್ರ ಅವಕಾಶ, ವಿಟ್ಲ – ಮಂಗಳೂರು ರಸ್ತೆಯ ಲಯನ್ಸ್‌ ಬಸ್‌ ನಿಲ್ದಾಣದ ಬಳಿ ಬಸ್‌ಗಳನ್ನು ನಿಲ್ಲಿಸಬೇಕು. ಅಂತಾರಾಜ್ಯ ಹಾಗೂ ಖಾಸಗಿ ಬಸ್‌, ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಪುತ್ತೂರು ರಸ್ತೆಯ ಸ್ಟೈಲ್‌ ಪಾರ್ಕ್‌ ಬಳಿ ನಿಲ್ಲಲು ಅವಕಾಶ ಕಲ್ಪಿಸಲಾಗಿದೆ. ಹಳೆ ಬಸ್‌ ನಿಲ್ದಾಣದಲ್ಲಿ ಬಸ್‌ಗಳಿಗೆ ನಿಲ್ಲಲು 15 ನಿಮಿಷಗಳ ಕಾಲಾವಕಾಶ ನೀಡಲಾಗಿದೆ. ಹಳೆ ಬಸ್‌ ನಿಲ್ದಾಣದೊಳಗೆ 5 ಕಾರುಗಳಿಗೆ ಮಾತ್ರ ನಿಲ್ಲಿಸಲು ಅವಕಾಶ ನೀಡಲಾಗಿದೆ. ಹಳೆ ಬಸ್‌ ನಿಲ್ದಾಣದಲ್ಲಿ ರಿಕ್ಷಾಗಳಿಗೆ 2 ಸಾಲಿನಲ್ಲಿ ನಿಲ್ಲಲು ಅವಕಾಶ ನೀಡಲಾಗಿದೆ. ಏಕಮುಖ ರಸ್ತೆಯಾದ ಪಂಚಲಿಂಗೇಶ್ವರ ದೇವಸ್ಥಾನ ರಸ್ತೆಯಲ್ಲಿ 2 ರಿಕ್ಷಾಗಳಿಗೆ ನಿಲ್ಲಲು ತಾತ್ಕಾಲಿಕ ಅವಕಾಶ. ಪಂಚಲಿಂಗೇಶ್ವರ ದೇವಸ್ಥಾನದ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗುವ ಗೋಬಿ ಅಂಗಡಿ ಹಾಗೂ ಆಮ್ಲೆಟ್‌ ಅಂಗಡಿ ತೆರವುಗೊಳಿಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.

ಸಂಘಟನೆ ಪ್ರಮುಖರು, ವ್ಯಾಪಾರಿಗಳು ಭಾಗವಹಿಸಿ ವಿವಿಧ ಅಭಿಪ್ರಾಯ ವ್ಯಕ್ತಪಡಿಸಿದರು. ಅಧ್ಯಕ್ಷರು ಮಾತನಾಡಿ, ಈ ಹಿಂದೆ ಜಿಲ್ಲಾಧಿಕಾರಿಗಳು ಪ್ರಕಟಿಸಿದ ನಿಯಮ ಜಾರಿಗೊಳಿಸಲಾಗುವುದು. ಇದಕ್ಕೆ ಎಲ್ಲ ವಾಹನ ಚಾಲಕ-ಮಾಲಕರು , ಪೊಲೀಸರಿಗೂ ಸಹಕರಿಸಬೇಕು ಎಂದು ವಿನಂತಿಸಿದರು. ಠಾಣಾಧಿಕಾರಿ ಮಾತನಾಡಿ ಪದೇ ಪದೇ ತಪ್ಪು ಮಾಡಿದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು. ಮತ್ತೆ ವಿವಿಧ ಒತ್ತಡಗಳ ಮೂಲಕ ನಮಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ನಿಯಮ ಉಲ್ಲಂಸಿದರೆ ಕಾನೂನು ಕ್ರಮ
ಪೇಟೆಯ ಒಳಗಡೆ ಕರ್ಕಶ ಹಾರ್ನ್ ಬಳಸಬಾರದು. ಪುರಭವನದ ರಸ್ತೆ ಯಲ್ಲಿ ಸಂತೆ ದಿನ ಹೊರತುಪಡಿಸಿ ಉಳಿದ ದಿನ ಬಲಭಾಗದಲ್ಲಿ ಪಾರ್ಕಿಂಗ್‌ ಮಾಡುವುದು. ಈ ಎಲ್ಲ ಕಾನೂನು ನ.4ರಿಂದ 10 ದಿನಗಳೊಳಗೆ ಜಾರಿಗೆ ಬರಲಿವೆ.ಇದನ್ನು ಉಲ್ಲಂಸಿದರೆ ಕಾನೂನು ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ .
ನಾಗರಾಜ್‌, ವಿಟ್ಲ ಠಾಣಾಧಿಕಾರಿ

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.