ದಕ್ಷತೆಯಿಂದ ಸೇವೆ ಸಲ್ಲಿಸಲು ಸಲಹೆ

Team Udayavani, Nov 5, 2017, 11:17 AM IST

vishvanath-shetty.jpg

ಬೆಂಗಳೂರು: ಸಮಾಜ ಮತ್ತು ಜನರ ನಿರೀಕ್ಷೆಗೆ ತಕ್ಕಂತೆ ದಕ್ಷತೆಯಿಂದ ಕೆಲಸ ಮಾಡುವಂತೆ ರಾಜ್ಯದ ಲೋಕಾಯುಕ್ತ ಪೊಲೀಸರಿಗೆ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ಸಲಹೆ ನೀಡಿದರು.

ನಗರದ ಬಹುಮಹಡಿ ಕಟ್ಟಡದಲ್ಲಿರುವ ಲೋಕಾಯುಕ್ತ ಕಚೇರಿಯ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಲೋಕಾಯುಕ್ತ ಪೊಲೀಸರ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಒಳಗಿನ ಸನ್ನಿವೇಶ, ಬದಲಾವಣೆ, ಜನರ ಮೇಲಾಗುತ್ತಿರುವ ದೌರ್ಜನ್ಯ ಇತ್ಯಾದಿ ವಿಷಯದ ಬಗ್ಗೆ ಪೊಲೀಸರಿಗೆ ನಿಗಾ ಇರಬೇಕು. ಲೋಕಾಯುಕ್ತ ಪೊಲೀಸರು ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಜನಸಾಮಾನ್ಯರಿಗೆ ಗುಣಮಟ್ಟದ ಸೇವೆ ನೀಡಬೇಕು ಎಂದು ಕಿವಿಮಾತು ಹೇಳಿದರು.

ದೇಶದ ಬಾಹ್ಯ ಮತ್ತು ಆಂತರಿಕ ಭದ್ರತೆಗೆ ಪೊಲೀಸ್‌ ಹಾಗೂ ಸೈನ್ಯ ಬಹಳ ಅಗತ್ಯವಾಗಿದೆ. ಸೈನಿಕರು ಗಡಿಯಲ್ಲಿದ್ದು, ದೇಶದ ರಕ್ಷಣೆ ಮಾಡುತ್ತಾರೆ. ದೇಶಕ್ಕೆ ಎದುರಾಗುವ ಬಾಹ್ಯ ಸಮಸ್ಯೆಯ ವಿರುದ್ಧ ಸೈನಿಕರು ಹೋರಾಟ ಮಾಡುತ್ತಾರೆ. ಪೊಲೀಸರು ಜನರ ಮಧ್ಯೆ ಇದ್ದು, ಅವರಿಗೆ ಆಗುತ್ತಿರುವ ಶೋಷಣೆ, ದೌರ್ಜನ್ಯ ಹಾಗೂ ಲಂಚಾವತಾರದ ವಿರುದ್ಧ ರಕ್ಷಣೆ ನೀಡುವ ಕೆಲಸ ಮಾಡಬೇಕು ಎಂದು ತಿಳಿಸಿದರು.

ಲೋಕಾಯುಕ್ತ ಪೊಲೀಸರು ಜ್ಞಾನದ ಅಪ್‌ಗೆಡ್‌ ಮಾಡಿಕೊಳ್ಳುತ್ತಿರಬೇಕು. ಸಮಗ್ರತೆಯ ದೃಷ್ಟಿಕೋನದಲ್ಲಿ ಸೇವೆ ಸಲ್ಲಿಸಬೇಕು. ಸಂಕುಚಿತ ಮನೋಭಾವ ಬೆಳೆಸಿಕೊಳ್ಳಬಾರದು. ಸ್ವತಂತ್ರವಾಗಿ ಸೇವೆ ಸಲ್ಲಿಸುವ ಬದ್ಧತೆಯೂ ಇರಬೇಕು. ಲೋಕಾಯುಕ್ತ ಪೊಲೀಸರ ಮೇಲೆ ಸಮಾಜದ ನಿರೀಕ್ಷೆ ಹೆಚ್ಚಿದ್ದು, ಅದಕ್ಕೆ ತಕ್ಕಂತೆ ಸೇವೆ ಸಲ್ಲಿಸಿ ಎಂದರು.

ಲೋಕಾಯುಕ್ತ ಎಡಿಜಿಪಿ ಸಂಜಯ್‌ ಸಹಾಯ್‌ ಮಾತನಾಡಿ, ಭ್ರಷ್ಟಾಚಾರ ವಿರೋಧಿಸಿ, ಜನಲೋಕ್‌ಪಾಲ್‌ ಮಸೂದೆ ಜಾರಿಗಾಗಿ ಅಣ್ಣಾ ಹಜಾರೆ ದೊಡ್ಡ ಮಟ್ಟದ ಹೋರಾಟ ಮಾಡಿದರೂ, ನಿರೀಕ್ಷಿತ ಮಟ್ಟದಲ್ಲಿ ಸಫ‌ಲತೆ ಕಂಡಿಲ್ಲ. ನಮ್ಮ ಸಮಾಜ ಮತ್ತು ಜನರ ಡಿಎನ್‌ಎನಲ್ಲೇ ಭ್ರಷ್ಟಾಚಾರ ಹಾಸುಹೊಕ್ಕಿದೆ. ಹೀಗಾಗಿ ಪೊಲೀಸರಾದ ನಾವು ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಲೇ ಇರಬೇಕು. ಭ್ರಷ್ಟಾಚಾರದ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ನಮ್ಮ ಸೇವೆ ಸಾಗಬೇಕು ಎಂದು ಹೇಳಿದರು.

ಸಮಾಜದ ಉನ್ನತಿಗಾಗಿ ಬದಲಾವಣೆ ತರಲು ಮುಂದಾಗಬೇಕು. ನಮ್ಮ ಬದ್ಧತೆ, ಸಮಗ್ರತೆ ಹಾಗೂ ವರ್ತನೆ ಸಮಾಜ ಮುಖೀಯಾಗಿದ್ದು, ದೇಶಕ್ಕಾಗಿ ಬದುಕುವ ಮಾನಸಿಕತೆ ಹೊಂದಿರಬೇಕು ಎಂಬ ಸಲಹೆ ನೀಡಿದರು. ನಿವೃತ್ತ ನ್ಯಾ.ವಿ ಜಗನ್ನಾಥ್‌, ಉಪಲೋಕಾಯುಕ್ತರಾದ ನ್ಯಾ. ಸುಭಾಷ್‌ ಬಿ.ಅಡಿ, ಎನ್‌.ಆನಂದ್‌, ಲೋಕಾಯುಕ್ತ ರಿಜಿಸ್ಟ್ರಾರ್‌ ನಂಜುಂಡಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

10

Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್‌ ಸ್ಟಾರ್

BGT 2024-25: Virat Kohli returns to form in Aussies

BGT 2024-25: ಆಸೀಸ್‌ ನಲ್ಲಿ ಲಯಕ್ಕೆ ಮರಳಿದ ವಿರಾಟ್‌ ಕೊಹ್ಲಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ

2

Mangaluru: ಹೆದ್ದಾರಿ ಬದಿ ನಿಲ್ಲುವ ವಾಹನ; ಅಪಾಯಕ್ಕೆ ಆಹ್ವಾನ

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

1

Puttur: ಕಲ್ಪವೃಕ್ಷಕ್ಕೆ ಮರುಜೀವವಿತ್ತ ಎಂಜಿನಿಯರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.