ಸರ್ಕಾರ-ವೈದ್ಯರ ಪ್ರತಿಷ್ಠೆಗೆ ಜನ ಹೈರಾಣ


Team Udayavani, Nov 5, 2017, 11:18 AM IST

sarkaravydya.jpg

ಬೆಂಗಳೂರು: ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆ (ಕೆಪಿಎಂಇ) ತಿದ್ದುಪಡಿ ವಿಧೇಯಕದಲ್ಲಿ ಪ್ರಸ್ತಾಪಿತ ಕೆಲ ಅಂಶ ಕುರಿತಂತೆ ಖಾಸಗಿ ವೈದ್ಯರು ಹಾಗೂ ಸರ್ಕಾರದ ನಡುವೆ ಪ್ರತಿಷ್ಠೆಯೇ ಸಂಘರ್ಷಕ್ಕೆ ಕಾರಣವಾಗಿದೆ. ಜನಹಿತದ ಹೆಸರಿನಲ್ಲೇ ಸರ್ಕಾರ, ವೈದ್ಯರು ತಮ್ಮ ನಿಲುವಿನ ಪಟ್ಟು ಸಡಿಲಿಸದ ಕಾರಣ ಜನ ಹೈರಾಣಾಗುವಂತಾಗಿದೆ.

ಕೆಪಿಎಂಇ ಕಾಯ್ದೆ ತಿದ್ದುಪಡಿ ವಿಧೇಯಕದ ಪ್ರಸ್ತಾಪಿತ ಕೆಲ ಅಂಶಗಳ ಬಗ್ಗೆ ಖಾಸಗಿ ಆಸ್ಪತ್ರೆಗಳು, ವೈದ್ಯರಿಂದ ಆರಂಭದಿಂದಲೂ ವಿರೋಧವಿದೆ. ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳ ಶೋಷಣೆ ತಪ್ಪಿಸಲು ಕೆಲ ನಿಯಂತ್ರಣ ಕ್ರಮ ಅಗತ್ಯ ಎಂದು ಸರ್ಕಾರ ತನ್ನ ನಿಲುವನ್ನು ಸಮರ್ಥಿಸಿಕೊಂಡಿದೆ. 

ಆದರೆ, ಜಿಲ್ಲಾ ಮಟ್ಟದಲ್ಲಿ ಕುಂದುಕೊರತೆ ಸಮಿತಿ ರಚನೆ ಪ್ರಸ್ತಾಪ  ಅನಗತ್ಯ ಎಂಬುದು ಖಾಸಗಿ ಆಸ್ಪತ್ರೆಗಳ ವಾದ. ಈ ವ್ಯವಸ್ಥೆ ತಂದರೆ ವೈದ್ಯರು, ಆಸ್ಪತ್ರೆಗಳ ಮುಖ್ಯಸ್ಥರು ಆರೋಗ್ಯ ಸೇವೆ ನೀಡುವುದಕ್ಕಿಂತ ಸಮಿತಿಗಳಿಗೆ ಅಲೆದಾಡಬೇಕಾಗುತ್ತದೆ.

ಎರಡನೆಯದಾಗಿ, ಚಿಕಿತ್ಸೆ ವೈಫ‌ಲ್ಯ, ಆಸ್ಪತ್ರೆಗಳಲ್ಲಿ ಚಿಕಿತ್ಸಾ ವೆಚ್ಚದಲ್ಲಿ ಏರುಪೇರು ಕಾರಣಕ್ಕೆ ಜೈಲುಶಿಕ್ಷೆ, ದಂಡ ವಿಧಿಸುವ ಪ್ರಸ್ತಾವದ ಬಗ್ಗೆಯೂ ತೀವ್ರ ಆಕ್ಷೇಪವಿದ್ದು ಸದುದ್ದೇಶದಿಂದ ನೀಡಿದ ಚಿಕಿತ್ಸೆ ಫ‌ಲಕಾರಿಯಾಗದಿದ್ದರೆ ವೈದ್ಯರನ್ನು ಜೈಲುಶಿಕ್ಷೆಗೆ ಗುರಿಪಡಿಸುವುದು ಎಷ್ಟು ಸರಿ ಎಂಬುದು ವೈದ್ಯರ ಪ್ರಶ್ನೆ.

ಇನ್ನು ದರಕ್ಕೆ ಸಂಬಂಧಪಟ್ಟಂತೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರ ವಿವರ ಪ್ರಕಟಿಸಲು ಸಿದ್ಧವಿರುವುದಾಗಿ ಖಾಸಗಿ ಆಸ್ಪತ್ರೆಗಳು ಹೇಳಿವೆ. ಆದರೆ ಇಂತಿಷ್ಟೇ ದರ ನಿಗದಿಪಡಿಸಬೇಕು, ಪರಿಷ್ಕರಿಸಬೇಕು ಎಂದು ಆಸ್ಪತ್ರೆ ಹೊರಗಿನವರು ನಿರ್ಧರಿಸುವುದು ಎಷ್ಟು ಸರಿ ಎಂಬ ಪ್ರಶ್ನೆಯನ್ನು ಎತ್ತಿವೆ. ಈ ಮೂರು ಅಂಶಗಳು ಸರ್ಕಾರ- ಖಾಸಗಿ ಆಸ್ಪತ್ರೆಗಳ ನಡುವೆ ಸಂಘರ್ಷಕ್ಕೆ ಕಾರಣವಾಗಿವೆ.

ಪ್ರತಿಷ್ಠೆಯಿಂದ ಜನರಿಗೆ ಪರದಾಟ
ಈ ವಿಚಾರ ಕುರಿತಂತೆ ಆರಂಭದಿಂದಲೂ ಖಾಸಗಿ ಆಸ್ಪತ್ರೆಗಳು, ವೈದ್ಯರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಚರ್ಚೆ ನಡೆಸಿ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಅವಕಾಶವಿರಬಹುದು. ಆದರೆ ಸರ್ಕಾರ, ವೈದ್ಯರು ಪ್ರತಿಷ್ಠೆಯನ್ನು ಪಣಕ್ಕಿಟ್ಟಂತೆ ವರ್ತಿಸುತ್ತಿರುವುದರಿಂದ ಸಾಮಾನ್ಯ ಜನರ ಆರೋಗ್ಯ ಸೇವೆಯಲ್ಲಿ ಏರುಪೇರು ಉಂಟಾಗುತ್ತಿದೆ.

ಮುಂಚಿತವಾಗಿ ಮಾಹಿತಿ ನೀಡಿದರೂ ಸರ್ಕಾರ ಸೌಜನ್ಯಕ್ಕೂ ಮಾತುಕತೆಗೆ ಆಹ್ವಾನಿಸಿಲ್ಲ ಎಂದು ವೈದ್ಯರು ದೂರಿದರೆ, ಮುಷ್ಕರದ ಬಗ್ಗೆ ಮಾಹಿತಿಯೇ ಇಲ್ಲ ಎಂದು ಸಚಿವರು ಹೇಳುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ. ಖಾಸಗಿ ಆಸ್ಪತ್ರೆಗಳು, ವೈದ್ಯರು ಜೂನ್‌ನಲ್ಲೇ ಮುಷ್ಕರ ನಡೆಸಿ ಎಚ್ಚರಿಕೆ ನೀಡಿದ್ದರು.

ಕಳೆದ ವಾರವೂ ಭಾರತೀಯ ವೈದ್ಯ ಸಂಘದ ಕರ್ನಾಟಕ ಘಟಕ ಒಪಿಡಿ ಸ್ಥಗಿತಗೊಳಿಸಿ ಮುಷ್ಕರ ನಡೆಸುವುದಾಗಿ ಪ್ರಕಟಿಸಿತ್ತು. ಇಷ್ಟಾದರೂ ಮುಷ್ಕರದ ಬಗ್ಗೆ ಮಾಹಿತಿ ಇಲ್ಲ ಎಂದು ಆರೋಗ್ಯ ಸಚಿವ ಕೆ.ಆರ್‌.ರಮೇಶ್‌ ಕುಮಾರ್‌ ಹೇಳಿಕೆ ನೀಡಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ.

ಮಾಹಿತಿ ಇರಲಿಲ್ಲ ಎಂಬುದು ಎಷ್ಟು ಸರಿ?
ಜೂನ್‌ನಲ್ಲೇ ಮುಷ್ಕರ ನಡೆಸಿದಾಗ ಸರ್ಕಾರ ಸ್ಪಂದಿಸಲಿಲ್ಲ. ಇತ್ತೀಚೆಗೆ ಮುಷ್ಕರ ನಡೆಸುವ ವಿಚಾರವನ್ನು ಮುಂಚಿತವಾಗಿ ಪ್ರಚಾರಪಡಿಸಿದ್ದರೂ ಸಚಿವರು ತಮಗೆ ಮಾಹಿತಿ ಇರಲಿಲ್ಲ ಎಂದು ಹೇಳಿರುವುದು ಎಷ್ಟು ಸರಿ. ಪರಿಸ್ಥಿತಿ ನಿಭಾಯಿಸಲು ಎಲ್ಲ ಕ್ರಮ ಕೈಗೊಳ್ಳಲಾಗಿದೆ. ರಜೆಯಲ್ಲಿರುವ ವೈದ್ಯರು, ಸಿಬ್ಬಂದಿಯನ್ನು ಸೇವೆಗೆ ಕರೆಸಿಕೊಳ್ಳಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದು,

ಮಾಹಿತಿ ಇಲ್ಲದೆ ಇಷ್ಟೆಲ್ಲಾ ವ್ಯವಸ್ಥೆ ಮಾಡಿದೆಯೇ. ಸರ್ಕಾರದ ಗಮನ ಸೆಳೆಯಲು ಸಾಂಕೇತಿಕ ಪ್ರತಿಭಟನೆ ನಡೆಸಲಾಗಿದ್ದು, ಭಾನುವಾರ ಮುಂದಿನ ಹೋರಾಟದ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಫೆಡರೇಷನ್‌ ಆಫ್ ಹೆಲ್ತ್‌ಕೇರ್‌ ಅಸೋಸಿಯೇಷನ್‌ ಪ್ರಧಾನ ಸಂಚಾಲಕ ಡಾ.ನಾಗೇಂದ್ರಸ್ವಾಮಿ ತಿಳಿಸಿದ್ದಾರೆ.

ಸರ್ಕಾರ ಹೇಳುವುದೇನು?
“ತಿದ್ದುಪಡಿ ವಿಧೇಯಕದಲ್ಲಿ ರೋಗಿಗಳಿಗೆ ತಮ್ಮ ಹಕ್ಕುಬಾಧ್ಯತೆ ತಿಳಿದಿರಬೇಕು. ಜಿಲ್ಲಾ ಮಟ್ಟದಲ್ಲಿ ದೂರು ಪರಿಹಾರ ವ್ಯವಸ್ಥೆ ಇರಬೇಕು. ವಸ್ತುನಿಷ್ಠ ಬೆಲೆ ನಿಯಂತ್ರಣ ವ್ಯವಸ್ಥೆ ಜತೆಗೆ ಆಸ್ಪತ್ರೆಗಳ ನಡುವೆ ಶುಲ್ಕದಲ್ಲಿ ವ್ಯತ್ಯಾಸವಿರಬಾರದು ಎಂಬ ಅಂಶಗಳ ಪ್ರಸ್ತಾಪವಿದೆ.

ಸದನ ಆಯ್ಕೆ ಸಮಿತಿಯು ತಿದ್ದುಪಡಿ ವಿಧೇಯಕ ಕುರಿತಂತೆ ಏನೇನು ಬದಲಾವಣೆ ತರಬೇಕು ಎಂದು ಸಲಹೆ ನೀಡಿದೆ. ಆ ಸಮಿತಿಗೆ ವರದಿ ಸಲ್ಲಿಕೆಯಾಗಿದ್ದು, ಅಧಿವೇಶನದಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ. ತಿದ್ದುಪಡಿ ವಿಧೇಯಕದಲ್ಲಿ ತಜ್ಞರ ಸಮಿತಿ ರಚಿಸಬೇಕು ಎಂಬ ಅಂಶವಿದೆ. ಅದರಂತೆ ಚಿಕಿತ್ಸಾ ದರಕ್ಕೆ ಸಂಬಂಧಪಟ್ಟಂತೆ ತಜ್ಞರ ಸಮಿತಿ ರಚನೆಯಾಗಿ ಎಲ್ಲರನ್ನು ಸಂಪರ್ಕಿಸಿ ಮಾನದಂಡ ನಿಗದಿಪಡಿಸಲಿದೆ.

ಬಳಿಕ ಈ ಬಗ್ಗೆ ಕರಡು ದರ ವಿವರ ಪ್ರಕಟಿಸಿ, ಆಕ್ಷೇಪಣೆ ಸಲ್ಲಿಕೆಗೂ ಅವಕಾಶ ನೀಡಿ ಅಂತಿಮವಾಗಿ ದರ ನಿಗದಿಯಾಗಲಿದೆ. ಏಕಪಕ್ಷೀಯವಾಗಿ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ,’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಜಯ್‌ ಹೇಳಿದ್ದಾರೆ.

24 ಗಂಟೆ ಒಪಿಡಿ ಸ್ಥಗಿತಗೊಳಿಸಿ ಸಾಂಕೇತಿಕ ಹೋರಾಟ ನಡೆಸಲಾಯಿತು. ಇದಕ್ಕೆ ಸರ್ಕಾರದಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಸರ್ಕಾರ ಪೂರ್ವಾಗ್ರಹ ಚಿಂತನೆ ಬಿಟ್ಟು ಆಹ್ವಾನ ನೀಡಿದರೆ ಮಾತುಕತೆಗೆ ಸಿದ್ಧರಿದ್ದೇವೆ. ಭಾನುವಾರ ಖಾಸಗಿ ಆಸ್ಪತ್ರೆಗಳ ನಾನಾ ಸಂಘಟನೆಗಳೊಂದಿಗೆ ಸಂಘದ ಪದಾಧಿಕಾರಿಗಳ ಸಭೆಯಿದ್ದು, ಚರ್ಚಿಸಿ ಮುಂದಿನ ಹೋರಾಟದ ಬಗ್ಗೆ ನಿರ್ಧರಿಸಲಾಗುವುದು.
-ಎಚ್‌.ಎನ್‌.ರವೀಂದ್ರ, ಐಎಂಎ ಕರ್ನಾಟಕ ಘಟಕದ ಅಧ್ಯಕ್ಷ

ಟಾಪ್ ನ್ಯೂಸ್

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

4

Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್‌ ಪರಾರಿ!

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.