ಮನೆ ಮನೆಗೆ ತೆರಳಿ ಮಹಿಳೆಯರಿಗೆ ಕುಂಕುಮ ನೀಡಿ: ಪರಂ
Team Udayavani, Nov 5, 2017, 11:54 AM IST
ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮಹಿಳಾ ಮತದಾರರನ್ನು ಸೆಳೆಯಲು ಪ್ರತಿ ಮನೆಗೂ ತೆರಳಿ ಮಹಿಳೆಯರಿಗೆ ಅರಿಶಿನ- ಕುಂಕುಮ ನೀಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಾ| ಜಿ. ಪರಮೇಶ್ವರ್ ಮಹಿಳಾ ಘಟಕಕ್ಕೆ ಸೂಚನೆ ನೀಡಿದ್ದಾರೆ.
ಬೆಂಗಳೂರು ಅರಮನೆ ಮೈದಾನದಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯ ಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ, 2018ರ ಎಪ್ರಿಲ್‌ನಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಮಹಿಳೆಯರು ಮಹಿಳಾ ಮತದಾರರ ಮನೆಗಳಿಗೆ ತೆರಳಿ ಅರಿಶಿನ-ಕುಂಕುಮ ನೀಡಿ. ಜಿಲ್ಲಾ ಮಟ್ಟದಲ್ಲಿ ಇಂದಿರಾ ನಮನ ಅಭಿ ಯಾನವೂ ನಡೆಯುತ್ತಿರುವುದರಿಂದ ಮನೆ ಮನೆಗೆ ಇಂದಿರಾ ದೀಪ (ಹಣತೆ) ತಲುಪಿಸಿ ಎಂದು ಹೇಳಿದರು.
ನ. 19ರಂದು ಇಂದಿರಾ ಗಾಂಧಿ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಮಹಿಳಾ ಕಾಂಗ್ರೆಸ್ ಗ್ರಾ.ಪಂ. ಮಟ್ಟ ದಲ್ಲಿ “ಇಂದಿರಾ ದೀಪ ನಮನ’ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಇಂದಿರಾ ಗಾಂಧಿ ದೇಶದ ಅಭಿವೃದ್ಧಿಗೆ ಶ್ರಮಿಸಿ, ಮಹಿಳೆಯರಿಗೆ ರಾಜಕೀಯ ಶಕ್ತಿ ನೀಡಿದ್ದರು. ಅವರ ಹೆಸರಿನಲ್ಲಿ ಮನೆ ಮನೆಗೆ ದೀಪ ಕೊಡುವ ಕೆಲಸ ಮಾಡಿ ಎಂದು ತಿಳಿಸಿದರು.
ಮಹಿಳೆಯರು ಕ್ಷೇತ್ರಗಳಲ್ಲಿ ಕೆಲಸ ಮಾಡಿ ಗೆಲ್ಲುವ ಸಾಮರ್ಥ್ಯ ಬೆಳೆಸಿ ಕೊಳ್ಳಬೇಕು. ಗೆಲ್ಲುವ ಸಾಮರ್ಥ್ಯವಿದ್ದರೆ ಶೇ. 33 ಮೀಸಲಾತಿಗಿಂತಲೂ ಹೆಚ್ಚಿನ ಸ್ಥಾನ ನೀಡಲು ಪಕ್ಷ ಸಿದ್ಧವಿದೆ. ಪಕ್ಷದಲ್ಲಿ ಪ್ರಥಮ ಬಾರಿಗೆ ಪದಾಧಿಕಾರಿಗಳು ಹಾಗೂ ನಿಗಮ-ಮಂಡಳಿ ಅಧ್ಯಕ್ಷರ ಸ್ಥಾನಗಳಲ್ಲಿ ಹೆಚ್ಚಿನ ಅವಕಾಶ ಕಲ್ಪಿಸಲಾಗಿದೆ. ಬೂತ್ ಮಟ್ಟದ ಕಮಿಟಿ ಯಲ್ಲಿಯೂ ಪ್ರತಿ ಬೂತ್‌ನಲ್ಲಿ ಮೂವರು ಮಹಿಳೆಯರು ಇರಲೇ ಬೇಕೆಂದು ಸೂಚಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.