ಹೋಬಳಿಗಳ ಕಡೆ ಸಚಿವರ ಪ್ರವಾಸ 


Team Udayavani, Nov 5, 2017, 11:55 AM IST

m5-hobli.jpg

ತಿ.ನರಸೀಪುರ: ಸಾರ್ವತ್ರಿಕ ವಿಧಾನಸಭಾ ಚುನಾವಣೆ ಸಮೀಪವಾಗುತ್ತಿರುವ ಹಿನ್ನೆಲೆಯಲ್ಲಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅವರು ಜನರಿಗೆ ದರ್ಶನ ನೀಡಲು ಕಾರ್ಯಕರ್ತರು ಹಾಗೂ ಮುಖಂಡರಿಗಾಗಿ ಕ್ಷೇತ್ರ ಪ್ರವಾಸ ಭಾಗ್ಯ ಆರಂಭಿಸಿದ್ದಾರೆ.

ತಾಲೂಕಿನ ಸೋಸಲೆ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳು ಮತ್ತು ಹಳ್ಳಿಗಳಲ್ಲಿ  ಪ್ರವಾಸ ಕೈಗೊಂಡಿದ್ದ ಸಚಿವರು, ಅಂತಿಮ ಹಂತದ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಸಲ್ಲಿಸಿ ಚಾಲನೆ ಕೊಟ್ಟರು. ಅಪರೂಪಕ್ಕೆ 6-7 ತಿಂಗಳಿಗೊಮ್ಮೆ ಸುಳಿಯುತ್ತಿದ್ದವರು ಶನಿವಾರ ಮಿಂಚಿನ ಸಂಚಾರ ಕೈಗೊಂಡು ಜನತಾ ದರ್ಶನ ನಡೆಸಿದರು. ಅಲ್ಲದೆ, ಮುಖಂಡರನ್ನು ಗುರುತಿಸಿ ಮಾತನಾಡಿಸುವ ಮೂಲಕ ಚುನಾವಣೆ ಬರುತ್ತಿದೆ ನಾನ್ಯಾರನ್ನೂ ಮರೆತಿಲ್ಲವೆಂದು ಜನರ ಗಮನ ಸೆಳೆಯುವ ಕಸರತ್ತು ನಡೆಸಿದರು. 

ಗ್ರಾಮೀಣಾಭಿವೃದ್ಧಿಯಲ್ಲಿ ಬದ್ಧತೆ ಹೊಂದಿರುವ ಸಚಿವ ಮಹದೇವಪ್ಪ ಅವರು ಹಳ್ಳಿಗಳ ಆಂತರಿಕ ರಸ್ತೆಗಳ ಅಭಿವೃದ್ಧಿಗೆ ನೂರಾರು ಕೋಟಿ, ಹೆದ್ಧಾರಿ ಮಾದರಿಯಲ್ಲಿ ಮುಖ್ಯ ರಸ್ತೆ ಅಭಿವೃದ್ಧಿ, ನಾಲೆಗಳ ಆಧುನೀಕರಣಕ್ಕೆ ಸಾವಿರಾರು ಕೋಟಿ ಅನುದಾನ ನೀಡಿದ್ದಾರೆ. ಸಚಿವರು ಹೋಬಳಿವಾರು ಎರಡೆರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡು ಜನರಿಂದ ಸಲ್ಲಿಕೆಯಾದ ಅಹವಾಲುಗಳನ್ನು ಅಲ್ಪ ಅವಧಿಯಲ್ಲೇ ಈಡೇರಿಸಲು ಭರವಸೆ ನೀಡುತ್ತಿದ್ದಾರೆ.

 ಎಷ್ಟೆಷ್ಟು ಅನುದಾನ?: ಸೋಸಲೆ ಗ್ರಾಮದ ಗಾಣಿಗರ ಬೀದಿಯಲ್ಲಿ ಸಿಮೆಂಟ್‌ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ 50 ಲಕ್ಷ, ವ್ಯಾಸರಾಜಪುರ ಗ್ರಾಮದ ವಿಶ್ವಕರ್ಮ ಬೀದಿಯಲ್ಲಿ ರಸ್ತೆ-ಚರಂಡಿ ನಿರ್ಮಾಣಕ್ಕೆ 25 ಲಕ್ಷ, ಎಸ್‌.ಕೆಬ್ಬೇಹುಂಡಿ ಗ್ರಾಮದ ಕುರುಬರ ಬೀದಿಯಲ್ಲಿ ರಸ್ತೆ-ಚರಂಡಿ ನಿರ್ಮಾಣಕ್ಕೆ 20 ಲಕ್ಷ, ಬೆನಕನಹಳ್ಳಿ ಗ್ರಾಮದಲ್ಲಿ ರಸ್ತೆ-ಚರಂಡಿ ನಿರ್ಮಾಣ ಕಾಮಗಾರಿಗೆ 20 ಲಕ್ಷ,

ಎಸ್‌.ಮೇಗಡಹಳ್ಳಿ ಗ್ರಾಮದಲ್ಲಿ ಬೆನಕನಹಳ್ಳಿ – ದೊಡ್ಡೇಬಾಗಿಲು ರಸ್ತೆಯಿಂದ ಹಳೇ ಮೇಗಡಹಳ್ಳಿ ಸೇರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ 1.60 ಕೋಟಿ, ಹುಳಕನಹುಂಡಿ ಗ್ರಾಮದಲ್ಲಿ ರಸ್ತೆ-ಚರಂಡಿ ನಿರ್ಮಾಣ ಕಾಮಗಾರಿಗೆ 25 ಲಕ್ಷ, ಮುಸುವಿನಕೊಪ್ಪಲು ಕುರುಬರ ಬೀದಿಯಲ್ಲಿ ರಸ್ತೆ -ಚರಂಡಿ ನಿರ್ಮಾಣಕ್ಕೆ 50 ಲಕ್ಷ, ಎಂ.ಕೆಬ್ಬೇಹುಂಡಿ ಗ್ರಾಮದಲ್ಲಿ ರಸ್ತೆ-ಚರಂಡಿ ನಿರ್ಮಾಣಕ್ಕೆ 50 ಲಕ್ಷ,

ಕೈಯಂಬಳ್ಳಿ ಗ್ರಾಮದಲ್ಲಿ ರಸ್ತೆ-ಚರಂಡಿ ನಿರ್ಮಾಣಕ್ಕೆ 25 ಲಕ್ಷ ಹಾಗೂ ಕೃಷ್ಣಾಪುರ ಗ್ರಾಮದಲ್ಲಿ ರಸ್ತೆ-ಚರಂಡಿ ನಿರ್ಮಾಣ ಕಾಮಗಾರಿಗೆ 20 ಲಕ್ಷ ಅನುದಾನ ಮಂಜೂರು ಮಾಡಿದ್ದು ಭೂಮಿ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಅಲ್ಲದೆ ಸಿದ್ದನಹುಂಡಿ, ಗದ್ದೆಮೋಳೆ, ಕೆಂಡನಕೊಪ್ಪಲು, ಕೋಳಿಮಲ್ಲನಹುಂಡಿ ಹಾಗೂ ಚಿಕ್ಕಬೂವಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಗ್ರಾಮಸ್ಥರಿಂದ ಅಹವಾಲು ಆಲಿಸಿದರು.

 ಜಿಪಂ ಸದಸ್ಯರಾದ ಮಂಗಳಮ್ಮ, ಮಂಜುನಾಥನ್‌, ಎಸ್ಸಿ,ಎಸ್ಟಿ ಹಿತರಕ್ಷಣಾ ಸಮಿತಿ ಸದಸ್ಯ ಸೋಸಲೆ ಮಹದೇವಸ್ವಾಮಿ, ತಾಪಂ ಅಧ್ಯಕ್ಷ ಸಿ.ಚಾಮೇಗೌಡ, ಮಾಜಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನಸ್ವಾಮಿ, ಗ್ರಾಪಂ ಅಧ್ಯಕ್ಷೆ ಮಹದೇವಮ್ಮ, ಬಿ.ಎನ್‌.ಜಗದೀಶ್‌, ಉಪಾಧ್ಯಕ್ಷ ಆರ್‌.ರಾಮು, ತಾಪಂ ಇಒ ಬಿ.ಎಸ್‌.ರಾಜು, ಜಿಪಂ ಇಇ ರಂಗಯ್ಯ,  ಕಾಂಗ್ರೆಸ್‌ ಕಾರ್ಯಕರ್ತರು, ಮುಖಂಡರಿದ್ದರು.
 
ಗದ್ದೆಮೋಳೆಯಲ್ಲಿ ಮನೆ ಮನೆ ಕಾಂಗ್ರೆಸ್‌
ತಿ.ನರಸೀಪುರ ತಾಲೂಕಿನ ಗದ್ದೆಮೋಳೆ ಗ್ರಾಮದಲ್ಲಿ ರಾಜ್ಯ ಸರ್ಕಾರದ ಸಾಧನೆಗಳ ಕೈಪಿಡಿಯನ್ನು ಜನರಿಗೆ ವಿತರಿಸುವ ಮೂಲಕ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಮನೆ ಮನೆ ಕಾಂಗ್ರೆಸ್‌ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಹಿರಿಯ ರಂಗಭೂಮಿ ಕಲಾವಿದ ಹೊನ್ನನಾಯಕ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಸಚಿವರು, ಗ್ರಾಮದ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಸಿದರು. ನಂತರ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ರೈತಪರ ಮತ್ತು ಬಡವರ ಪರ ಯೋಜನೆಗಳನ್ನು ಜಾರಿಗೆ ತರುತ್ತಿದ್ದು ಮತ್ತೂಮ್ಮೆ ಬೆಂಬಲಿಸಬೇಕೆಂದರು.

ಟಾಪ್ ನ್ಯೂಸ್

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Hockey

Hockey: ಇಂದಿನಿಂದ ಜೂ. ಏಷ್ಯಾ ಕಪ್‌ ಹಾಕಿ; ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.