ಕಮಲ್‌ಗೆ ಪಿಣರಾಯಿ ಬೆಂಬಲ
Team Udayavani, Nov 6, 2017, 6:00 AM IST
ನವದೆಹಲಿ: “ಹಿಂದೂ ಭಯೋತ್ಪಾದನೆ’ ಪದ ಬಳಕೆ ಮೂಲಕ ಕೆಲವು ಸಂಘಟನೆಗಳ ಆಕ್ರೋಶಕ್ಕೆ ಗುರಿಯಾಗಿರುವ ಬಹುಭಾಷಾ ನಟ ಕಮಲ್ ಹಾಸನ್ ಅವರ ಬೆಂಬಲಕ್ಕೆ ಕೇರಳ ಸಿಎಂ ಪಿಣರಾಯಿ ವಿಜಯನ್ ಹಾಗೂ ಕಾಂಗ್ರೆಸ್ ಸಂಸದ ಶಶಿ ತರೂರ್ ನಿಂತಿದ್ದಾರೆ.
ಕಮಲ್‌ರನ್ನು ಶೂಟ್ ಮಾಡಿ ಕೊಲ್ಲಬೇಕು ಎಂದು ಅಖೀಲ ಭಾರತ ಹಿಂದೂ ಮಹಾಸಭಾ ನೀಡಿದ ಹೇಳಿಕೆಯನ್ನು ಸಿಎಂ ವಿಜಯನ್ ಖಂಡಿಸಿದ್ದು, ಕಮಲ್‌ಗೆ ಕೊಲೆ ಬೆದರಿಕೆ ಹಾಕಿರುವವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಕುರಿತು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಪಿಣರಾಯಿ ಅವರು, “ಮಹಾತ್ಮಗಾಂಧಿ, ಪಾನ್ಸರೆ, ದಾಭೋಲ್ಕರ್, ಕಲಬುರ್ಗಿ, ಗೌರಿ ಲಂಕೇಶ್‌ಗೆ ಏನಾಯಿತು ಮತ್ತು ಯಾಕಾಯಿತು ಎಂಬುದು ಇಡೀ ದೇಶಕ್ಕೇ ಗೊತ್ತು. ಈ ಪಟ್ಟಿಗೆ ಇನ್ನಷ್ಟು ಹೆಸರು ಸೇರಿಸುವಂಥ ಕ್ರಮಕ್ಕೆ ಕೂಡಲೇ ಕಡಿವಾಣ ಹಾಕಬೇಕು. ಕಮಲ್‌ಗೆ ಕೊಲೆ ಬೆದರಿಕೆ ಹಾಕಿರುವವರನ್ನು ಬಂಧಿಸಬೇಕು’ ಎಂದು ಒತ್ತಾಯಿಸಿದ್ದಾರೆ. ಇದಕ್ಕೆ ಬೆಂಬಲ ಸೂಚಿಸಿರುವ ಸಂಸದ ಶಶಿ ತರೂರ್, “ಪಿಣರಾಯಿ ಅವರ ಆಗ್ರಹಕ್ಕೆ ನನ್ನ ಸಹಮತವಿದೆ’ ಎಂದಿದ್ದಾರೆ.
25 ಸಾವಿರ ಬಹುಮಾನ: ಇನ್ನೊಂದೆಡೆ, ಕಮಲ್ ಮುಖಕ್ಕೆ ಮಸಿ ಬಳಿದವರಿಗೆ 25 ಸಾವಿರ ರೂ. ಬಹುಮಾನ ನೀಡುತ್ತೇನೆ ಎಂದು ಅಲಿಗಡದ ಮುಸ್ಲಿಂ ಯುವಕನೊಬ್ಬ ಘೋಷಿಸಿದ್ದಾನೆ. ಕಮಲ್ ಅವರು ದೇಶದ್ರೋಹಿಯಾಗಿದ್ದು, ತಮ್ಮ ಹೇಳಿಕೆಯ ಮೂಲಕ ಹಿಂದೂ-ಮುಸ್ಲಿಮರ ನಡುವೆ ಕಂದಕ ಸೃಷ್ಟಿಸುತ್ತಿದ್ದಾರೆ ಎಂದು ಆತ ಆರೋಪಿಸಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ
Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು
Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
R Ashwin: ಅಶ್ವಿನ್‌ಗೆ ಖೇಲ್ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ
Virat Kohli: ಬಾಕ್ಸಿಂಗ್ ಡೇ ಟೆಸ್ಟ್‌ಗೂ ಮುನ್ನ ವಿರಾಟ್ ನೂತನ ಕೇಶ ವಿನ್ಯಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.