ಕಸ ಮಾಫಿಯಾ ಕಡಿವಾಣಕ್ಕೆ ಗ್ರಾಪಂಗಳಿಗೆ ಅಧಿಕಾರ
Team Udayavani, Nov 6, 2017, 8:13 AM IST
ಬೆಂಗಳೂರು: ಎಲ್ಲಿಂದಲೋ ಕಸ ತಂದು ಕದ್ದು ಮುಚ್ಚಿ ರಾತ್ರೋರಾತ್ರಿ ಹಳ್ಳಿಗಳ ಬದಿ ಹಾದು ಹೋಗುವ ಹೆದ್ದಾರಿಗಳಲ್ಲಿ ಸುರಿದು ಹೋಗುವ ಚಾಳಿಗೆ ಇನ್ನು ಮುಂದೆ ಕಡಿವಾಣ ಬೀಳಲಿದೆ. ಈ ರೀತಿ ಹಳ್ಳಿಗಳಲ್ಲಿ ಕಸ ತಂದು ಸುರಿಯುವವರಿಗೆ ಲಗಾಮು ಹಾಕಲು ಗ್ರಾಮ ಪಂಚಾಯಿತಿಗಳಿಗೆ “ಕಾನೂನು ಅಧಿಕಾರ’ ನೀಡಲು ಸರ್ಕಾರ ನಿರ್ಧರಿಸಿದೆ.
ಹಳ್ಳಿಗಳ ನೈರ್ಮಲ್ಯ ಹಾಳು ಮಾಡುತ್ತಿರುವ “ಹೊರಗಿನ ಕಸ ಮಾಫಿಯಾ’ ವಿರುದ್ಧ ಕಾನೂನು ಕ್ರಮ ಜರುಗಿಸುವ ಅಧಿಕಾರ ನೀಡುವ ಸಂಬಂಧ “ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ ಅಧಿನಿಯಮ-1993’ರ ಪ್ರಕರಣ 75ಕ್ಕೆ ತಿದ್ದುಪಡಿ ತರಲು ಗ್ರಾಮೀಣಾ ಭಿವೃದ್ಧಿ ಇಲಾಖೆ ಪ್ರಸ್ತಾವನೆ ಸಿದ್ಧಪಡಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶಿಫಾರಸಿನ ಮೇರೆಗೆ ಈ ತಿದ್ದುಪಡಿ ತರಲಾಗುತ್ತಿದ್ದು, ಪ್ರಸ್ತಾವನೆಗೆ ಗ್ರಾಮೀಣಾಭಿವೃದ್ಧಿ ಸಚಿವರ ಅನುಮೋದನೆ ಸಿಕ್ಕಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ ಅಧಿನಿಯಮ-1993’ರ ಪ್ರಕರಣ 75ಲ್ಲಿ ಗ್ರಾಮದ ಅನೈರ್ಮಲ್ಯಕ್ಕೆ ಕಾರಣವಾಗುವ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಸಾರ್ವಜನಿಕರ ವಿರುದ್ಧ ಮಾತ್ರ ಕ್ರಮ ಕೈಗೊಳ್ಳಲು ಗ್ರಾ.ಪಂ.ಗೆ ಅವಕಾಶವಿತ್ತು. ಆದರೆ, ಈಗ ತಿದ್ದುಪಡಿ ನಿಯಮ ಜಾರಿಗೆ ಬಂದರೆ ಹೊರಗಿನಿಂದ ಕಸ ತಂದು ಹಳ್ಳಿಗಳಲ್ಲಿ ಸುರಿದವರ ಮೇಲೆ ದಂಡ ವಿಧಿಸುವ ಹಾಗೂ ತಪ್ಪಿತಸ್ಥರ ವಿರುದ್ಧ ಪೊಲೀಸ್ ದೂರು ದಾಖಲಿಸುವ ಕಾನೂನು ಅಧಿಕಾರ ನೇರವಾಗಿ ಗ್ರಾಮ ಪಂಚಾಯಿತಿಗಳಿಗೆ ಸಿಗಲಿದೆ.
ಅಸಹಾಯಕವಾಗಿದ್ದವು: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಬೇರೆ ಗ್ರಾಮ, ಜಿಲ್ಲೆ ಮತ್ತು ರಾಜ್ಯಗಳಿಂದ ರಾತ್ರಿ ವೇಳೆ ವಾಹನಗಳಲ್ಲಿ ಕಸ ತಂದು ಸುರಿಯುವ ಸಮಸ್ಯೆ ದಿನೇದಿನೆ ಹೆಚ್ಚಾಗುತ್ತಿದೆ. ಇದರಿಂದಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೈರ್ಮಲ್ಯ ಕಾಪಾಡುವುದು ಸವಾಲಾಗುತ್ತಿದೆ. ಜೊತೆಗೆ ದೊಡ್ಡ ನಗರಗಳಿಗೆ ಹೊಂದಿಕೊಂಡಿರುವ ಮತ್ತು ಪಟ್ಟಣ ಪ್ರದೇಶದ ಗುಣಲಕ್ಷಣಗಳನ್ನು ಹೊಂದಿರುವ ಗ್ರಾಪಂಗಳ ವ್ಯಾಪ್ತಿಯಲ್ಲಿ ಈ ಸಮಸ್ಯೆ ಹೆಚ್ಚಾಗಿದೆ. ಆದರೆ, ಕಣ್ಣ ಮುಂದೆ ಎಲ್ಲ ನಡೆಯುತ್ತಿದ್ದರೂ ಕ್ರಮ ಕೈಗೊಳ್ಳಲು ಗ್ರಾಪಂಗಳಿಗೆ ಅವಕಾಶವಿರ ಲಿಲ್ಲ. ಅದಕ್ಕಾಗಿ ತಿದ್ದುಪಡಿ ತರಲಾಗುತ್ತಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.
ಗ್ರಾಮಕ್ಕೆ ನಿಯಮಾವಳಿ ಇರಲಿಲ್ಲ: ಸ್ವಚ್ಛ ಭಾರತ
ಅಭಿಯಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ “ಘನತಾಜ್ಯ ವಿಲೇವಾರಿ ನಿಯಮಾವಳಿ-2016’ರಲ್ಲಿ ಗ್ರಾಮೀಣ ಪ್ರದೇಶಕ್ಕೆ ಅನ್ವಯವಾಗುವಂತೆ ನಿಯಮಾವಳಿಗಳು ಇರಲಿಲ್ಲ. ಇದರ ನೆರವು ಪಡೆದುಕೊಂಡ ಕೆಲವರು ಬೇರೆ ಕಡೆಯಿಂದ ವಾಹನಗಳಲ್ಲಿ ಕಸ ತಂದು ಗ್ರಾ.ಪಂ. ವ್ಯಾಪ್ತಿಗೆ ಬರುವ ಹೆದ್ದಾರಿಗಳಲ್ಲಿ ಸುರಿದು ಹೋಗುತ್ತಿದ್ದರು. ಹಾಗಾಗಿ, ಕೇಂದ್ರ ಸರ್ಕಾರದ ಘನ ತ್ಯಾಜ್ಯ ನಿಯಾಮವಳಿಗಳು ಗ್ರಾಮೀಣ ಪ್ರದೇಶಕ್ಕೆ ಅನ್ವಯವಾಗುವಂತೆ ಮತ್ತು ಬೇರೆ ಕಡೆಗಳಿಂದ ಕಸ ತಂದು ಗ್ರಾ.ಪಂ. ಬಳಿ ಹಾದು
ಹೋಗುವ ಹೆದ್ದಾರಿಗಳಲ್ಲಿ ಸುರಿದವರ ಮೇಲೆ ದಂಡ ವಿಧಿಸಿ, ತಪ್ಪಿತಸ್ಥರ ವಿರುದ್ಧ ಪೊಲೀಸ್ ದೂರು ದಾಖಲು ಮಾಡುವ ಅಧಿಕಾರವನ್ನು ಸಂಬಂಧಪಟ್ಟ ಗ್ರಾ.ಪಂ.ಗೆ ಕೊಡಲು ಅನುಕೂಲವಾಗುವಂತೆ ಸೂಕ್ತ ತಿದ್ದುಪಡಿ ತರಲು ಕೋರಲಾಗಿತ್ತು. ಅದರಂತೆ ಗ್ರಾಮೀಣಾಭಿವೃದ್ಧಿ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.
ರಫಿಕ್ ಅಹ್ಮದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru: ದೆಹಲಿಯ ನೇಲ್ ಆರ್ಟಿಸ್ಟ್ ನೇಣಿಗೆ
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ
Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್ ಸಾಧ್ಯತೆ
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.