ಎಎಸ್‌ಐ ಮತ್ತು ಮುಖ್ಯಪೇದೆ ಅಮಾನತು


Team Udayavani, Nov 6, 2017, 11:55 AM IST

police-suspend.jpg

ಬೆಂಗಳೂರು/ ಕೆ.ಆರ್‌.ಪುರಂ: ಜೂಜು ಅಡ್ಡೆಗಳ ಮೇಲೆ ದಾಳಿ ನಡೆಸಿ ಠಾಣೆಗೆ ಕರೆತಂದಿದ್ದ ಆರೋಪಿಗಳಿಗೆ ನೋಟಿಸ್‌ ಕೊಡದೆ ವಾಪಸ್‌ ಕಳುಹಿಸಿದ್ದನ್ನು ಪ್ರಶ್ನಿಸಿದ ಪಿಎಸ್‌ಐ ಅನ್ನು ನಿಂದಿಸಿದ್ದಲ್ಲದೆ, ಹಲ್ಲೆಗೆ ಯತ್ನಿಸಿದ ಮಹಾದೇವಪುರ ಠಾಣೆಯ ಎಎಸ್‌ಐ ಮತ್ತು ಮುಖ್ಯಪೇದೆಯನ್ನು ವೈಟ್‌ಫೀಲ್ಡ್‌ ಡಿಸಿಪಿ ಅಬ್ದುಲ್‌ ಅಹ್ಮದ್‌ ಅಮಾನತುಗೊಳಿಸಿ ತನಿಖೆಗೆ ಆದೇಶಿಸಿದ್ದಾರೆ.

ಎಎಸ್‌ಐ ಅಮೃತೇಶ್‌ ಮತ್ತು ಮುಖ್ಯಪೇದೆ ಜಯಕಿರಣ್‌ ಅವರನ್ನು ಕರ್ತವ್ಯ ಲೋಪ ಮತ್ತು ಅಶಿಸ್ತು ಆರೋಪದ ಮೇಲೆ ಅಮಾನತುಗೊಂಡವರು.  ಸಾರ್ವಜನಿಕರ ದೂರಿನನ್ವಯ ಶನಿವಾರ ಸಂಜೆ 7 ಗಂಟೆ ಸುಮಾರಿಗೆ ಮಹಾದೇವಪುರ ಠಾಣೆಯ ಎ.ನಾರಾಯಣಪುರದಲ್ಲಿರುವ ಪೆಟ್ರೋಲ್‌ ಬಂಕ್‌ವೊಂದರ ಬಳಿಯ ಜೂಜು ಅಡ್ಡೆ ಮೇಲೆ ಎಎಸ್‌ಐ ಅಮೃತೇಶ್‌

ಮತ್ತು ಪೇದೆ ಜಯಕಿರಣ್‌ ಜೂಜು ಅಡ್ಡೆ ಮೇಲೆ ದಾಳಿ ನಡೆಸಿ 10 ಮಂದಿಯನ್ನು ಠಾಣೆಗೆ ಕರೆತಂದಿದ್ದರು. ಇವರಿಂದ ಸುಮಾರು 42,500 ರು. ಜಪ್ತಿ ಮಾಡಲಾಗಿತ್ತು. ಆದರೆ, ವಿಚಾರಣೆ ನಡೆಸಬೇಕಾದ ಸಿಬ್ಬಂದಿ ಎನ್‌ಸಿಆರ್‌ (ಗಭೀರ ಸ್ವರೂಪವಲ್ಲದ ಪ್ರಕರಣ) ದಾಖಲಿಸಿಕೊಂಡು ಆರೋಪಿಗಳಿಗೆ ನೋಟಿಸ್‌ ಕೊಡದೆ ವಾಪಸ್‌ ಕಳುಹಿಸಿದ್ದರು. 

ಇದನ್ನು ಗಮನಿಸಿದ ಪಿಎಸ್‌ಐ ಅಶ್ವತ್ಥ್ ನೋಟಿಸ್‌ ಕೊಡದೆ ಕಳುಹಿಸಲು ಕಾರಣವೇನು ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಆಕ್ರೋಶಗೊಂಡು ಎಎಸ್‌ಐ ಅಮೃತೇಶ್‌ ಮತ್ತು ಮುಖ್ಯಪೇದೆ ಜಯಕಿರಣ್‌ ನೀನ್ಯಾರು ಪ್ರಶ್ನಿಸಲು, ಇನ್‌ಸ್ಪೆಕ್ಟರ್‌ ಅವರೇ ಪ್ರಶ್ನಿಸುವುದಿಲ್ಲ ಎಂದು ಏಕವಚನದಲ್ಲಿ ನಿಂದಿಸಿದ್ದಾರೆ. ಅಲ್ಲದೇ ಒಂದು ಹಂತದಲ್ಲಿ ಹಲ್ಲೆಗೂ ಯತ್ನಿಸಿದ್ದರು ಎನ್ನಲಾಗಿದೆ.ಈ ಸಂಬಂಧ ಪಿಎಸ್‌ಐ ಅಶ್ವತ್ಥ್ ಡಿಸಿಪಿ ಅಬ್ದುಲ್‌ ಅಹ್ಮದ್‌ ಅವರಿಗೆ ಸಿಬ್ಬಂದಿ ವರ್ತನೆ ಕುರಿತು ವರದಿ ನೀಡಿದ್ದರು. 

ವಿಷಯ ತಿಳಿದು ಠಾಣೆಗೆ ಧಾವಿಸಿದ ಡಿಸಿಪಿ ಅಬ್ದುಲ್‌ ಅಹ್ಮದ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣಾ ಸಿಬ್ಬಂದಿಯನ್ನು ವಿಚಾರಣೆ ನಡೆಸಿದ್ದರು. ಈ ವೇಳೆ ಎಎಸ್‌ಐ ಅಮೃತೇಶ್‌ ಮತ್ತು ಜಯಕಿರಣ್‌ ಕರ್ತವ್ಯ ಲೋಪ ಹಾಗೂ ಅಶಿಸ್ತು ತೋರಿರುವುದು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಎಎಸ್‌ಐ ಅಮೃತೇಶ್‌ ಮತ್ತು ಮುಖ್ಯಪೇದೆ ಜಯಕಿರಣ್‌ ಅವರನ್ನು ಅಮಾನತುಗೊಳಿಸಿದ್ದಾರೆ.

ಜತೆಗೆ ಮಾರತ್‌ಹಳ್ಳಿ ಎಸಿಪಿ ನೇತೃತ್ವದಲ್ಲಿ ತಂಡ ರಚಿಸಿ ತನಿಖೆಗೆ ಆದೇಶಿಸಿದ್ದಾರೆ. ಈ ಕುರಿತು “ಉದಯವಾಣಿ’ಗೆ ಪ್ರತಿಕ್ರಿಯೆ ನೀಡಿದ ಡಿಸಿಪಿ ಅಬ್ದುಲ್‌ ಅಹ್ಮದ್‌, ಪ್ರಾಥಮಿಕ ತನಿಖೆಯಲ್ಲಿ ಎಎಸ್‌ಐ ಮತ್ತು ಮುಖ್ಯಪೇದೆ ಕರ್ತವ್ಯಲೋಪ ಹಾಗೂ ಆಶಿಸ್ತು ತೋರಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಇಬ್ಬರನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

9-mng

Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Dense Smog: ಉತ್ತರಪ್ರದೇಶದಲ್ಲಿ ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

11

Actor Siddique: ಅತ್ಯಾಚಾರ ಆರೋಪ; ನಟ ಸಿದ್ದಿಕ್‌ಗೆ‌ ನಿರೀಕ್ಷಣಾ ಜಾಮೀನು ಮಂಜೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Accident: ಆರೋಪಿ ಸೆರೆಗೆ 200 ಕ್ಯಾಮೆರಾ ಪರಿಶೀಲನೆ

Bengaluru: ಅಪಘಾತದಲ್ಲಿ ಬೈಕ್‌ ಸವಾರ ಸಾವು; ಬಸ್‌ ಚಾಲಕನಿಗೆ 15 ತಿಂಗಳು ಜೈಲು

Bengaluru: ಅಪಘಾತದಲ್ಲಿ ಬೈಕ್‌ ಸವಾರ ಸಾವು; ಬಸ್‌ ಚಾಲಕನಿಗೆ 15 ತಿಂಗಳು ಜೈಲು

Bengaluru: ಪತಿಯಿಂದ ಭಾರೀ ಸಾಲ; ಪತ್ನಿ ಆತ್ಮಹತ್ಯೆ

Bengaluru: ಪತಿಯಿಂದ ಭಾರೀ ಸಾಲ; ಪತ್ನಿ ಆತ್ಮಹತ್ಯೆ

Tragic: ಕ್ರಿಕೆಟ್‌ ತಂಡಕ್ಕೆ ಆಯ್ಕೆ ಆಗದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

Tragic: ಕ್ರಿಕೆಟ್‌ ತಂಡಕ್ಕೆ ಆಯ್ಕೆ ಆಗದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

11-sagara

Sagara: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪರನ್ನು ತಕ್ಷಣ ಬಂಧಿಸಿ; ಕಾಂಗ್ರೆಸ್ ಆಗ್ರಹ

5

Ullal: ನ್ಯೂಪಡ್ಪುವಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಉದ್ಘಾಟನೆ

10-hosanagara

Hosanagara: ನಗರದ ಹೋಬಳಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಬಿಜೆಪಿ ಪ್ರತಿಭಟನೆ

4

Mangaluru: ಪಿಲಿಕುಳದಲ್ಲಿ ಚಿಟ್ಟೆಪಾರ್ಕ್‌; ಪ್ರವಾಸಿಗರಿಗೆ ಹೊಸ ಆಕರ್ಷಣೆ

9-mng

Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.