ಜಿಲ್ಲಾಡಳಿತ ನಿರ್ಧಾರಕ್ಕೆ ಮುಸ್ಲಿಂ ಮುಖಂಡರ ಆಕ್ರೋಶ
Team Udayavani, Nov 6, 2017, 11:56 AM IST
ಜೇವರ್ಗಿ: ಪಟ್ಟಣದ ಮಿನಿ ವಿಧಾನಸೌಧ ಕಚೇರಿಯ ಸಭಾಂಗಣದಲ್ಲಿ ನ.10 ರಂದು ಆಯೋಜಿಸಲಾಗಿರುವ ಟಿಪ್ಪು ಸುಲ್ತಾನ ಜಯಂತಿ ಅಂಗವಾಗಿ ತಹಶೀಲ್ದಾರ್ ಯಲ್ಲಪ್ಪ ಸುಬೇದಾರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು. ಸಹಾಯಕ ಆಯುಕ್ತ ರಾಜಪ್ಪ, ತಹಶೀಲ್ದಾರ್ ಯಲ್ಲಪ್ಪ ಸುಬೆದಾರ, ಲೋಕೋಪಯೋಗಿ ಇಲಾಖೆ ಎಇಇ ಪಲ್ಲಾ ಸತ್ಯಶೀಲರೆಡ್ಡಿ ಸೇರಿದಂತೆ ಅನೇಕ ಅಧಿಕಾರಿಗಳ ನೇತೃತ್ವದಲ್ಲಿ ಸಭೆ ಆಯೋಜಿಸಲಾಗಿತ್ತು.
ಸಭೆಯಲ್ಲಿ ಮಾತನಾಡಿದ ತಹಶೀಲ್ದಾರ್ ಯಲ್ಲಪ್ಪ ಸುಬೇದಾರ, ಬರುವ ನ.10 ರಂದು ತಾಲೂಕಾಡಳಿತದ ವತಿಯಿಂದ ಪಟ್ಟಣದಲ್ಲಿ ಟಿಪ್ಪು ಸುಲ್ತಾನ ಜಯಂತಿ ಆಯೋಜಿಸಲಾಗಿದ್ದು, ಬೆಳಗ್ಗೆ 9:00 ಗಂಟೆಗೆ ಟಿಪ್ಪು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಕಾರ್ಯಕ್ರಮ ನಡೆಸಲಾಗುವುದು. ಯಾವುದೇ ಮೆರವಣಿಗೆ ಹಾಗೂ ಜಯಂತಿಗೆ ಸಂಬಂಸಿದ ಫ್ಲೆಕ್ಸ್, ಬ್ಯಾನರ್ ಹಾಗೂ ಕಟೌಟ್‌ಗಳನ್ನು ಹಾಕದಂತೆ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ಅಲ್ಲದೇ ಅಂದು ಜಿಲ್ಲಾದ್ಯಂತ 144 ಕಲಂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಆದ್ದರಿಂದ ಟಿಪ್ಪು ಅಭಿಮಾನಿಗಳು ಹಾಗೂ ಮುಸ್ಲಿಂ ಬಾಂಧವರು ಸಹಕರಿಸಬೇಕು ಎಂದು ಮನವಿ ಮಾಡಿದರು.
ನಂತರ ಗದ್ದಲ ಎಬ್ಬಿಸಿದ ಮುಸ್ಲಿಂ ಮುಖಂಡರು ಕಾಟಾಚಾರಕ್ಕೆ ಟಿಪ್ಪು ಸುಲ್ತಾನ ಜಯಂತಿ ಆಚರಿಸುತ್ತಿದ್ದೀರಾ ? ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಮೈಸೂರು ಹುಲಿ ಟಿಪ್ಪು ಸುಲ್ತಾನ ಜಯಂತಿ ಆಚರಣೆ ಮಾಡುವುದಕ್ಕೆ ಅಡೆತಡೆ ಉಂಟು ಮಾಡುತ್ತಿರುವ ಜಿಲ್ಲಾಡಳಿತ ನಿರ್ಧಾರಕ್ಕೆ ಧಿಕ್ಕಾರ ಕೂಗಿದರು. ನ.10 ರಂದು ನಡೆಯುವ ಟಿಪ್ಪು ಸುಲ್ತಾನ ಜಯಂತಿ ಅದ್ಧೂರಿಯಿಂದ ಆಚರಣೆ ಮಾಡಬೇಕು. ಆಚರಣೆಗೆ ಯಾವುದೇ ನಿರ್ಬಂಧ ಹೇರಬಾರದು ಎಂದು ಆಗ್ರಹಿಸಿ ಸಭೆ ಬಹಿಷ್ಕರಿಸಿ ಹೊರನಡೆದರು.
ತಾಪಂ ಮಾಜಿ ಅಧ್ಯಕ್ಷ ಅಮೀರ ಹಮ್ಜಾ ಲಖಣಾಪುರ, ಮಹಿಬೂಬ ಪಾಶಾ ಕೋಬಾಳ, ಕಾಶಿಂ ಕೂಡಿ, ಮಹಿಬೂಬಸಾಬ ಕೆಂಭಾವಿ, ಮಹಿಬೂಬ ಮನಿಯಾರ ಮಳ್ಳಿ, ಬಸೀರ್ ಇನಾಮದಾರ, ಹಬೀಬ ಜಮಾದಾರ, ಗೌಸ್ ಮೈನೋದ್ದೀನ್ ಖಾದ್ರಿ ಗಂವ್ಹಾರ, ಬಾಬು ಪಾಟೀಲ ಮುತ್ತಕೋಡ, ಭಗವಂತ್ರಾಯ ಬೆಣ್ಣೂರ, ಇಬ್ರಾಹಿಂ ಪಟೇಲ ಹಾಗೂ ಸಮಾಜದ ಮುಖಂಡರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.