ಕವಿಸಂ ಚುನಾವಣೆಗೆ ನನ್ನ ತಂಡ ಸಜ್ಜು
Team Udayavani, Nov 6, 2017, 12:31 PM IST
ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘದ ಕಾರ್ಯಕಾರಿ ಮಂಡಳಿ ಚುನಾವಣೆ ಡಿ. 17ರಂದು ನಡೆಯಲಿದ್ದು, ನನ್ನ ನೇತೃತ್ವದಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ತಂಡ ರಚನೆ ಮಾಡಲಾಗಿದೆ ಎಂದು ನಾಡೋಜ ಡಾ| ಪಾಟೀಲ ಪುಟ್ಟಪ್ಪ ಹೇಳಿದರು. ನಗರದಲ್ಲಿ ರವಿವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.
ಸಂಘವು ಉತ್ತೋರತ್ತವಾಗಿ ಪ್ರತಿಷ್ಠೆ ಇರಿಸಿಕೊಂಡು ನಡೆಯಬೇಕೆನ್ನುವ ಉದ್ದೇಶದಿಂದ ಒಂದು ತಂಡ ರಚಿಸಲಾಗಿದೆ. ಈ ತಂಡವನ್ನು ಮತದಾರರು ಬೆಂಬಲಿಸಿ ಸಂಘದ ಏಳ್ಗೆಗೆ ಕೈ ಜೋಡಿಸಬೇಕು. ಇದಲ್ಲದೆ ಸಂಘದ ಸಲುವಾಗಿ 7 ಜನ ಸದಸ್ಯರನ್ನು ಒಳಗೊಂಡ ಸಲಹಾ ಸಮಿತಿಯನ್ನು ಮುಂದೆ ರಚಿಸುವ ಉದ್ದೇಶ ಹೊಂದಲಾಗಿದೆ ಎಂದರು.
ಅಧ್ಯಕ್ಷ ಸ್ಥಾನಕ್ಕೆ ಮರಳಿ ನಾನೇ ಸ್ಪರ್ಧೆ ಮಾಡುತ್ತಿದ್ದೇನೆ. ಉಳಿದಂತೆ ಉಪಾಧ್ಯಕ್ಷ ಸ್ಥಾನಕ್ಕೆ ಚಂದ್ರಶೇಖರ ಅಳಗುಂಡಗಿ, ಕಾರ್ಯಾಧ್ಯಕ್ಷ ಸ್ಥಾನಕ್ಕೆ ಶಿವಣ್ಣ ಬೆಲ್ಲದ, ಕೋಶಾಧ್ಯಕ್ಷ ಸ್ಥಾನಕ್ಕೆ ಕೃಷ್ಣಾ ಜೋಶಿ, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಪ್ರಕಾಶ ಉಡಿಕೇರಿ, ಸಹ ಕಾರ್ಯದರ್ಶಿ ಸ್ಥಾನಕ್ಕೆ ಸದಾನಂದ ಶಿವಳ್ಳಿ ಅವರು ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದರು.
ಇದಲ್ಲದೆ ಕಾರ್ಯಕಾರಿ ಸಮಿತಿ ಸದಸ್ಯರ ಸ್ಥಾನಕ್ಕೆ ಮೋಹನ ನಾಗಮ್ಮನವರ, ವಿಶ್ವೇಶ್ವರಿ ಹಿರೇಮಠ, ಸತೀಶ ತುರಮರಿ, ಮನೋಜ ಪಾಟೀಲ, ಶಂಕರ ಕುಂಬಿ, ಎಸ್.ಬಿ. ಗುತ್ತಲ. ಪೊ| ಕೆ.ಎಸ್, ಕೌಲಗಿ, ಮಹಿಳಾ ಮೀಸಲು ಸ್ಥಾನಕ್ಕೆ ಪ್ರಫುಲ್ಲಾ ನಾಯಕ ಹಾಗೂ ಪ.ಜಾ., ಪ.ಪ. ಮೀಸಲು ಸ್ಥಾನಕ್ಕೆ ಎಸ್.ಬಿ. ಗಾಮನಗಟ್ಟಿ ಸ್ಪರ್ಧಿಸಲಿದ್ದು, ಸಂಘದ ಆಜೀವ ಸದಸ್ಯರು ನಮ್ಮ ಈ ತಂಡವನ್ನು ಬೆಂಬಲಿಸುತ್ತಾರೆ ಎಂಬ ಅಪೇಕ್ಷೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.