ಸಮ್ಮೇಳನ ಅಚ್ಚುಕಟ್ಟಾಗಿ ನಡೆಯಲಿ
Team Udayavani, Nov 6, 2017, 12:32 PM IST
ಮೈಸೂರು: ನಗರದಲ್ಲಿ ನಡೆಯುವ 83ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಾವುದೇ ಅಡಚಣೆಗಳಿಲ್ಲದೆ, ಅಚ್ಚಕಟ್ಟಾಗಿ ನಡೆಸಲು ಕ್ರಮವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅಧಿಕಾರಿಗಳಿಗೆ ಸೂಚಿಸಿದರು. ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಭಾನುವಾರ ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ನಗರದಲ್ಲಿ ನ.24 ರಿಂದ 26ರವರೆಗೆ ನಡೆಯುವ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ಧೂರಿಯಾಗಿ ಆಚರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ. ಈ ಕಾರ್ಯಕ್ರಮಕ್ಕೆ 8 ಕೋಟಿ ರೂ. ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸುವ ಸಲುವಾಗಿ ಎಲ್ಲಾ ಸಮಿತಿಗಳ ಮುಖ್ಯಸ್ಥರು ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಿಕೊಂಡು ಅನುದಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಬೇಕಿದೆ ಎಂದರು.
ಸಮ್ಮೇಳನದಲ್ಲಿ ವಸತಿ, ಸಾರಿಗೆ, ಆಹಾರ ಸಮಿತಿ ಜವಾಬ್ದಾರಿ ಹೆಚ್ಚಾಗಿದ್ದು, ಸಮ್ಮೇಳನಕ್ಕೆ ಆಗಮಿಸುವ ಪ್ರತಿನಿಧಿಗಳು ಹಾಗೂ ಸಾಹಿತಿಗಳು ವಾಸ್ತವ್ಯದ ಬಗ್ಗೆ ತಿಳಿದಿಕೊಳ್ಳಲು ಬಸ್ ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ಮಾಹಿತಿ ಕೇಂದ್ರ ಹಾಗೂ ಸಹಾಯವಾಣಿ ತೆರೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಅಲ್ಲದೆ ವಾಸ್ತವ್ಯಕ್ಕೆ ಸಂಬಂಧಿಸಿದಂತೆ ಖಾಸಗಿ ಶಾಲಾ ಕಾಲೇಜುಗಳ ಮುಖ್ಯಸ್ಥರೊಂದಿಗೆ, ಹೋಟೆಲ್ ಮಾಲಿಕರೊಂದಿಗೆ ಸಭೆ ನಡೆಸಿ ತೀರ್ಮಾನಗಳನ್ನು ಕೈಗೊಳ್ಳಬೇಕಿದೆ. ಜತೆಗೆ ವಾಸ್ತವ್ಯದ ಸ್ಥಳದಿಂದ ವೇದಿಕೆಗೆ ಆಗಮಿಸಲು ಬೇಕಿರುವ ಸಾರಿಗೆ ವ್ಯವಸ್ಥೆಯನ್ನೂ ಅಚ್ಚುಕಟ್ಟಾಗಿ ಕಲ್ಪಿಸಿ ಹಿರಿಯ ಸಾಹಿತಿಗಳು ಹಾಗೂ ಗಣ್ಯರಿಗೆ ಸಮನ್ವಯ ಅಧಿಕಾರಿ ನಿಯೋಜಿಸುವಂತೆ ತಿಳಿಸಿದರು. ಅಲ್ಲದೆ, ರೂಪುರೇಷೆ ಹಾಗೂ ವಿವಿಧ ಸಮಿತಿಗಳ ಸಿದ್ಧತೆ ಬಗ್ಗೆ ಚರ್ಚಿಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಚೆನ್ನಪ್ಪ, ಮೆರವಣಿಗೆ ಸಮಿತಿಯಿಂದ ಸಮ್ಮೇಳನದ ಅಧ್ಯಕ್ಷರನ್ನು ಮಲ್ಲಿಗೆ ಹೂವಿನಿಂದ ಅಲಂಕರಿಸಿದ ರಥದಲ್ಲಿ ಕರೆ ತರಲು ಚಿಂತಿಸಲಾಗಿದೆ. ಇದರಲ್ಲಿ 600 ಕಲಾವಿದರು ಭಾಗವಹಿಸಲಿದ್ದು, 300 ಸ್ಥಳೀಯ ಕಲಾವಿದರಿಗೆ ಹಾಗೂ 300 ಹೊರ ಜಿಲ್ಲೆಯ ಕಲಾವಿದರಿಗೆ ಅವಕಾಶ ನೀಡಲಾಗುವುದು. ಹೀಗಾಗಿ ಈ ಎಲ್ಲಾ ಕಲಾವಿದರಿಗೆ ಸಂಭಾವನೆ ನಿಗದಿಪಡಿಸಬೇಕಿದೆ.
ಇನ್ನೂ ಮೆರವಣಿಗೆಯಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಪಿನಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಗುವುದು. ಇನ್ನೂ ಸಂಜೆ 6-9 ರವರೆಗೆ ಎಲ್ಲಾ ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ದಸರಾ ವೇಳೆ ಅವಕಾಶ ದೊರೆಯದ ಕಲಾವಿದರಿಗೆ ಹೆಚ್ಚು ಅವಕಾಶ ನೀಡಲು ಚಿಂತಿಸಲಾಗಿದೆ ಎಂದರು.
ಆಹಾರ ಇಲಾಖೆ ಉಪನಿರ್ದೇಶಕ ಡಾ. ಕಾ.ರಾಮೇಶ್ವರಪ್ಪ, ನ.24 ರಿಂದ 26ರವರೆಗೆ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವವರಿಗೆ ರುಚಿ ರುಚಿಯಾದ ಊಟ ಉಣಬಡಿಸಲು ಯೋಜನೆ ಸಿದ್ಧಪಡಿಸಲಾಗಿದೆ. ಗಣ್ಯರಿಗೆ, ನೋಂದಣಿ ಮಾಡಿಕೊಂಡಿರುವವರಿಗೆ ಹಾಗೂ ಸಾರ್ವಜನಿಕರಿಗೆ ಪ್ರತ್ಯೇಕ ಸ್ಥಳಗಳಲ್ಲಿ ಊಟದ ವ್ಯವಸ್ಥೆ ಮಾಡಲಿದೆ ಎಂದು ಮಾಹಿತಿ ನೀಡಿದರು.
ಶಾಸಕ ವಾಸು, ಜಿಪಂ ಅಧ್ಯಕ್ಷೆ ನಯಿಮಾ ಸುಲ್ತಾನ, ಮೇಯರ್ ಎಂ.ಜೆ.ರವಿಕುಮಾರ್, ಮುಡಾ ಅಧ್ಯಕ್ಷ ಡಿ. ಧ್ರುವಕುಮಾರ್, ಮೈಲ್ಯಾಕ್ ಅಧ್ಯಕ್ಷ ಎಚ್.ಎ.ವೆಂಕಟೇಶ್, ಜಿಲ್ಲಾಧಿಕಾರಿ ಡಿ.ರಂದೀಪ್, ಅಪರ ಜಿಲ್ಲಾಧಿಕಾರಿ ಟಿ.ಯೋಗೇಶ್ ಇದ್ದರು.
ಫಲಾನುಭವಿಗಳನ್ನು ಗುರುತಿಸಿ: ರಾಜ್ಯದ ಎಲ್ಲಾ ಕುಟುಂಬಗಳಿಗೆ ಅನಿಲ ಸಂಪರ್ಕ ಒದಗಿಸಿ ಪರಿಸರ ಸ್ನೇಹಿ ರಾಜ್ಯವನ್ನಾಗಿಸಲು ಅರ್ಹ ಫಲಾನುಭವಿಗಳನ್ನು ಗುರುತಿಸಿ ಉಚಿತ ಅನಿಲ ಸಂಪರ್ಕ ನೀಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದರು.
ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ಯೋಜನೆ ಅನುಷ್ಠಾನದ ಬಗ್ಗೆ ನಡೆದ ಸಭೆಯಲ್ಲಿ ಮಾತನಾಡಿದರು. ಮೊದಲ ಹಂತದಲ್ಲಿ 6322 ಫಲಾನುಭವಿಗಳನ್ನು ಆಯ್ಕೆ ಮಾಡಬೇಕಿದೆ. ಮೊದಲ ಹಂತವನ್ನು ನವೆಂಬರ್ ಅಂತ್ಯದೊಳಗೆ ಹಾಗೂ ಎರಡನೇ ಹಂತದಲ್ಲಿ ನೀಡುವ ಗುರಿಯನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.