ಶೇ.75ರಷ್ಟು  ಹಾಜರಾತಿ ಇಲ್ಲದಿದ್ದರೆ “ಹಾಲ್‌ಟಿಕೆಟ್‌’ ಇಲ್ಲ

Team Udayavani, Nov 7, 2017, 6:15 AM IST

exam.jpg

ಬೆಂಗಳೂರು: ಕಾಲೇಜಿಗೆ ಬಂಕ್‌ ಮಾಡುವ ವಿದ್ಯಾರ್ಥಿಗಳಿಗೊಂದು ಎಚ್ಚರಿಕೆಯ ಕರೆಗಂಟೆ! ಪ್ರಸಕ್ತ ಶೈಕ್ಷಣಿಕ‌ ವರ್ಷದಲ್ಲಿ ಶೇ.75 ಹಾಜ ರಾತಿ ಇಲ್ಲದ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯ ಪ್ರವೇಶ ಪತ್ರ ವಿತರಿಸಬೇಡಿ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ತನ್ನ ವ್ಯಾಪ್ತಿಯ ಎಲ್ಲ ಶಿಕ್ಷಣ ಸಂಸ್ಥೆಗಳಿಗೂ ಖಡಕ್‌ ಸೂಚನೆ ನೀಡಿದೆ.

ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕನಿಷ್ಠ  ಶೇ.75 ಹಾಜರಾತಿ ಇರಬೇಕು. ವಿದ್ಯಾರ್ಥಿ ಪದೇ ಪದೇ ತರಗತಿಗೆ ಗೈರಾಗುತ್ತಿರುವುದು ಕಂಡು ಬಂದರೆ, ಹೆತ್ತವರ ಗಮನಕ್ಕೆ ತರುವ ಕೆಲಸವನ್ನು ಪ್ರಾಂಶುಪಾಲರು ಅಥವಾ ಉಪನ್ಯಾಸಕರು ಮಾಡಬೇಕು ಎಂದು ಸೂಚಿಸಲಾಗಿದೆ.

ಹಿಂದಿನ ವರ್ಷಗಳಲ್ಲಿ ವಿದ್ಯಾರ್ಥಿಗಳಿಂದ  ದಂಡ ಪಾವತಿಸಿಕೊಂಡು ಪರೀಕ್ಷೆಗೆ ಅನುವು ಮಾಡಿಕೊಡುತ್ತಿದ್ದರು. ಹಾಜರಾತಿ ಕೊರತೆ ಎದುರಿಸುತ್ತಿರುವ ವಿದ್ಯಾರ್ಥಿಗಳು ಈ ವರ್ಷ ದಂಡ ಪಾವತಿಸಿ ದರೂ  ಪರೀಕ್ಷೆ ಬರೆಯಲು ಸಾಧ್ಯವಿಲ್ಲ. ವಾರ್ಷಿಕ ಪರೀಕ್ಷೆ ಮಾತ್ರವಲ್ಲ ಪೂರಕ ಪರೀಕ್ಷೆ ಬರೆಯಲೂ ಅವಕಾಶ ನೀಡದಂತೆ ಆದೇಶ ಹೊರಡಿಸಿದೆ. ಜತೆಗೆ  ಶೇ.75ಕ್ಕಿಂತ ಕಡಿಮೆ ಹಾಜರಾತಿ ಇರುವ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಗೆ ಮರು ದಾಖಲಾತಿ ಪಡೆದೇ ಪಿಯುಸಿ ಪೂರೈಸಬೇಕು. ಸಂಸ್ಥೆಗಳಿಗೆ ಎಚ್ಚರಿಕೆ: ಹಾಜರಾತಿ ಕೊರತೆ ಇರುವ ವಿದ್ಯಾರ್ಥಿಗಳಿಗೆ ಹಾಗೂ ಅವರ ಪೋಷಕರಿಗೆ ಸಕಾಲದಲ್ಲಿ ಮಾಹಿತಿ ನೀಡಬೇಕು. ವರ್ಷಾಂತ್ಯದಲ್ಲಿ ಸಮಸ್ಯೆಗೆ ಪರಿಹಾರ ಕೋರಿ ಇಲಾಖೆಗೆ ಬರುವುದು ಸರಿಯಲ್ಲ. ಹಾಗೆಯೇ ಹಾಜರಾತಿನ ಕೊರತೆ ಎದುರಿಸುತ್ತಿರುವ ವಿದ್ಯಾರ್ಥಿಗಳಿಂದ ಕಾನೂನು ಬಾಹಿರವಾಗಿ ದಂಡ ವಸೂಲಿ ಮಾಡದಂತೆಯೂ ಎಚ್ಚರಿಕೆ ನೀಡಿದೆ. (ಕಾನೂನಿನಲ್ಲಿ ದಂಡ ಪಡೆಯಲು ಅವಕಾಶವೇ ಇಲ್ಲ.)

ಪೋಷಕರಿಂದ ದೃಢೀಕರಣ: ಕರ್ನಾಟಕ ಪದವಿ ಪೂರ್ವ ಶಿಕ್ಷಣ ನಿಯಮ 2006ರ ಉಪ ನಿಯಮ12(1)ರನ್ವಯ ವಿದ್ಯಾರ್ಥಿಯು ಪ್ರತಿ ವಿಷಯದಲ್ಲಿ ಶೇ.75ರಷ್ಟು ಹಾಜರಾತಿ ಕಡ್ಡಾಯವಾಗಿ ಹೊಂದಿರಬೇಕು. ಪ್ರಸಕ್ತ  ಶೈಕ್ಷಣಿಕ ಸಾಲಿನಲ್ಲಿ ಹಾಜರಾತಿ ಕೊರತೆ ಇರುವ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ನ.30, ಡಿ.31 ಹಾಗೂ 2018ರ ಜ.31ರಂದು ಪೋಷಕರ ಸಭೆ ಕೆರದು ಖುದ್ದಾಗಿ ತಿಳಿಸಿ, ಪೋಷಕರಿಂದಲೇ ದೃಢೀಕರಣ ಪಡೆಯುವಂತೆ ಸೂಚಿಸಿದೆ.

ಡಿ.31ರಂದು ಪ್ರಕಟಿಸುವ ಹಾಜರಾತಿ ಕೊರತೆಯ ಮಾಹಿತಿಯನ್ನು ವಿದ್ಯಾರ್ಥಿಗಳ ಪೋಷಕರಿಗೆ ಅಂಚೆ ಮೂಲಕ ಕಳುಹಿಸಿ ಸ್ವೀಕೃತಿ ಪಡೆಯಬೇಕು. ಹಾಜರಾತಿ ಕೊರತೆ ಇರುವ ವಿದ್ಯಾರ್ಥಿಗಳ ಪಟ್ಟಿಯನ್ನು ಜಿಲ್ಲಾ ಉಪನಿರ್ದೇಶಕರ ದೃಢೀಕರಣದೊಂದಿಗೆ 2018ರ ಜನವರಿ ಮೊದಲ ವಾರದೊಳಗೆ ಇಲಾಖೆಯ ಕೇಂದ್ರ ಕಚೇರಿಗೆ ಸಲ್ಲಿಸಬೇಕು ಎಂದು ಪ್ರಕಟನೆ ತಿಳಿಸಿದೆ.

*ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

I have not encroached on anyone’s jurisdiction: Modi

Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ

Trump imposes no taxes on India, only taxes on Canada and China!

US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್‌!

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

I have not encroached on anyone’s jurisdiction: Modi

Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ

Trump imposes no taxes on India, only taxes on Canada and China!

US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್‌!

ban

Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.