ಕಬ್ಬನ್ ಪಾರ್ಕಲ್ಲಿ ರಂಗೋಲಿ ರಂಗು
Team Udayavani, Nov 7, 2017, 1:26 PM IST
ಬೆಂಗಳೂರು: ಕನ್ನಡ ರಾಜ್ಯೋತ್ಸವ ಅಂಗವಾಗಿ ನ.12ರಂದು ಕಬ್ಬನ್‌ಪಾರ್ಕ್‌ನಲ್ಲಿ ಪರಿಸರ ಪೂರಕವಾದ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿದೆ. ಪರಿಸರ ಸ್ನೇಹಿ ರಂಗೋಲಿ ಪುಡಿ ಮತ್ತು ಬಣ್ಣಗಳನ್ನು ಸ್ಪರ್ಧೆಯಲ್ಲಿ ಪಾಲ್ಗೊಳ್ಳುವವರೇ ತರಬೇಕು.
ಆದರೆ, ಭಾಗವಹಿಸುವ ಎಲ್ಲರಿಗೂ ಪ್ರೋತ್ಸಾಹ ಬಹುಮಾನ, ಪ್ರಮಾಣ ಪತ್ರ ಮತ್ತು ಮಧ್ಯಾಹ್ನ ಊಟದ ವ್ಯವಸ್ಥೆ ಇದೆ. ವಿಜೇತರಿಗೆ ವಿಶೇಷ ಬಹುಮಾನ ನೀಡಲಾಗುವುದು. ಜನಪದ ಕಲೆಯಾದ ರಂಗೋಲಿಯನ್ನು ಪ್ರೋತ್ಸಾಹಿಸಿ, ಉತ್ತೇಜಿಸುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ ಎಂದು ಕಬ್ಬನ್‌ಪಾರ್ಕ್ ನಡಿಗೆದಾರರ ಸಂಘದ ಅಧ್ಯಕ್ಷ ಎಸ್.ಉಮೇಶ್ ತಿಳಿಸಿದ್ದಾರೆ.
ಹೊರ ಜಿಲ್ಲೆಗಳಿಂದ ಸ್ಪರ್ಧೆಗೆ ಆಗಮಿಸುವ ಸ್ಪರ್ಧಿಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಆಸಕ್ತರು ಹೆಸರುಗಳನ್ನು ಮುಂಚಿತವಾಗಿಯೇ ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿ ಮತ್ತು ನೋಂದಣಿಗೆ ಮೊಬೈಲ್: 9880356178, 8722167904 ಸಂಪರ್ಕಿಸುವಂತೆ ಕೋರಿದ್ದಾರೆ.
ಮಕ್ಕಳ ದಿನಾಚರಣೆ: ತೋಟಗಾರಿಕೆ ಇಲಾಖೆ, ಬಾಲಭವನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ನ.10ರಿಂದ 14ರವರೆಗೆ ಕಬ್ಬನ್‌ಉದ್ಯಾನದಲ್ಲಿ ಮಕ್ಕಳ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ವಿವಿಧ ಜನಪದ ಕಲಾ ತಂಡಗಳಿಂದ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ.
ಜತೆಗೆ ಪುಸ್ತಕ ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ತೋಟಗಾರಿಗೆ ಸಂಬಂಧಿಸಿದ ಮಹಡಿ ಉದ್ಯಾನ (ಟೆರೇಸ್ ಗಾರ್ಡನ್), ಕಿಚನ್ ಗಾರ್ಡನ್, ಹಳ್ಳಿಗಾಡಿನ ಪರಿಚಯ, ಕುಂಬಾರಿಕೆ ಇತ್ಯಾದಿ ಕಾರ್ಯಕ್ರಮಗಳು ನಡೆಯಲಿವೆ ಎಂದು ಬಾಲಭವನ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.