ಅಕ್ರಮ ಅದಿರು ರಫ್ತು ಕುರಿತುಎಸ್‌ಐಟಿ ತನಿಖೆ: ವರದಿ ಸಲ್ಲಿಕೆ


Team Udayavani, Nov 8, 2017, 7:35 AM IST

08-5.jpg

ಬೆಂಗಳೂರು: ರಾಜ್ಯದ ಬೇಲೆಕೇರಿ ಮತ್ತು ನವ ಮಂಗಳೂರು ಬಂದರಿನಿಂದ ಅಕ್ರಮವಾಗಿ ಅದಿರು ರಫ್ತು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಕೈಬಿಟ್ಟಿರುವ ತನಿಖೆಯನ್ನು ಎಸ್‌ಐಟಿಗೆ ವಹಿಸುವಂತೆ ಸಚಿವ ಎಚ್‌.ಕೆ.ಪಾಟೀಲ್‌ ನೇತೃತ್ವದ ಸಂಪುಟ ಉಪಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ.

ಅದಿರು ರಫ್ತು ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸುವುದರ ಜತೆಗೆ ಅಕ್ರಮ ಗಣಿಗಾರಿಕೆ ಮತ್ತು ಅದಿರು ರಫ್ತು ಮೂಲಕ ರಾಜ್ಯದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿರುವ 44 ಕಂಪೆನಿಗಳಿಂದ ಆ ಮೊತ್ತ ವಸೂಲಿ ಮಾಡಬೇಕು. ಅದಕ್ಕಾಗಿ ಅಗತ್ಯ ಬಿದ್ದರೆ ಅವುಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆ ಆರಂಭಿಸಬೇಕು ಎಂದೂ ಶಿಫಾರಸು ಮಾಡಲಾಗಿದೆ. ಸಂಪುಟ ಉಪಸಮಿತಿ ಅಧ್ಯಕ್ಷ ಎಚ್‌. ಕೆ.ಪಾಟೀಲ್‌ ಅವರು ಮಂಗಳವಾರ ಸಮಿತಿಯ ವರದಿಯನ್ನು ಮುಖ್ಯಮಂತ್ರಿಗಳಿಗೆ ನೀಡಿದ್ದು, ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ವರದಿ ಕುರಿತು ಚರ್ಚಿಸಿ ಸರ್ಕಾರ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ರಾಜ್ಯದಿಂದ 50 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಅದಿರು ಅಕ್ರಮವಾಗಿ ರಫ್ತಾಗಿರುವ ಕುರಿತ ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ, ನವಮಂಗಳೂರು ಮತ್ತು ಬೇಲೆಕೇರಿ ಬಂದರುಗಳಿಂದ ಅಕ್ರಮವಾಗಿ ಅದಿರು ರಫ್ತಾಗಿದೆ. ಆದರೆ, ಈ ಕುರಿತು ದಾಖಲೆಗಳನ್ನು ಸಂಗ್ರಹಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿ ತನಿಖೆ ಕೈಬಿಟ್ಟಿತ್ತು. ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣದ ಕುರಿತು ಪರಿಶೀಲನೆ ನಡೆಸಿರುವ ಸಂಪುಟ ಉಪಸಮಿತಿ, ಅಕ್ರಮ ನಡೆದಿರುವುದು ಸಿಬಿಐ ತನಿಖೆಯಲ್ಲೇ ಗೊತ್ತಾಗಿದೆ. ಹೀಗಾಗಿ ಈ ಕುರಿತು ದಾಖಲೆಗಳನ್ನು ಸಂಗ್ರಹಿಸಬೇಕಾಗಿ ರುವುದರಿಂದ ಪ್ರಕರಣವನ್ನು ಎಸ್‌ಐಟಿಗೆ ವಹಿಸಬೇಕು ಎಂದು ಶಿಫಾರಸು ಮಾಡಲು ತೀರ್ಮಾನಿಸಿತ್ತು. ಜತೆಗೆ ಈ ಅಕ್ರಮದಿಂದ ರಾಜ್ಯದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿರುವ ಕಂಪನಿಗಳಿಂದ ಆ ಮೊತ್ತವನ್ನು ಭರಿಸಬೇಕು ಎಂಬ ನಿರ್ಧಾರಕ್ಕೂ ಬಂದಿತ್ತು. ಅದರಂತೆ ವರದಿ ಅಂತಿಮಗೊಳಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ.

ಟಾಪ್ ನ್ಯೂಸ್

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

byndoor

Bantwal: ಅಪಘಾತ; ಗಾಯಾಳು ಸಾವು

POlice

Kumble: ಬುರ್ಖಾಧಾರಿ ಯುವಕ ವಶಕ್ಕೆ; ಕುಖ್ಯಾತ ಕಳವು ತಂಡದ ಸದಸ್ಯನೇ ಎಂಬ ಬಗ್ಗೆ ತನಿಖೆ

5

Mangaluru: ಎಎಸ್‌ಐಗೆ ಗಾಯ; ಡಿವೈಎಫ್ಐ ವಿರುದ್ಧ ಪ್ರಕರಣ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.