ಸಿದ್ದು ಠೇವಣಿ ಕಳೆದು ಮನೆಗೆ ಕಳುಹಿಸಿ
Team Udayavani, Nov 8, 2017, 7:44 AM IST
ಮೈಸೂರು: 25 ವರ್ಷಗಳ ಕಾಲ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದಾಗ ಏನೂ ಮಾಡದೆ, ಈ ಚುನಾವಣೆಯಲ್ಲಿ ಗೆಲ್ಲಿಸಿ ಮಾದರಿ ಕ್ಷೇತ್ರ ಮಾಡುತ್ತೇನೆ ಎಂದು ಬರುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಠೇವಣಿಯನ್ನು ಕಳೆದು ಮನೆಗೆ ಕಳುಹಿಸಿ ಎಂದು ಶಾಸಕ ಜಿ.ಟಿ.ದೇವೇಗೌಡ ಮನವಿ ಮಾಡಿದರು.
ಲಿಂಗದೇವರು ಕೊಪ್ಪಲಿನಲ್ಲಿ ಮಂಗಳವಾರ ನಡೆದ ಕುಮಾರಪರ್ವ -2018, ಹೊಸ ಮನ್ವಂತರದ ಶುಭಾರಂಭ, ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು. 1983ರಲ್ಲಿ ಚುನಾವಣೆ ಹೇಗೆ ನಡೆಯಿತು ಎಂಬುದೇ ಸಿದ್ದರಾಮಯ್ಯಗೆ ಗೊತ್ತಿರಲಿಲ್ಲ. 25 ವರ್ಷದಿಂದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರಿಗಾಗಿ ದುಡಿದಿದ್ದೇನೆ. ಈಗ ಚಾಮುಂಡೇಶ್ವರಿ ಕ್ಷೇತ್ರದ ಮೇಲೆ ಕಣ್ಣು ಹಾಕಿರುವ ಸಿದ್ದರಾಮಯ್ಯ, ಚರಂಡಿ ಉದ್ಘಾಟನೆ, ಬೋರ್ವೆಲ್ ಉದ್ಘಾಟನೆಗೂ ಬರುತ್ತಾರೆ. ಈ ಕ್ಷೇತ್ರದಲ್ಲಿ ಸೋತಿರುವವರನ್ನೆಲ್ಲ ಕಳುಹಿಸಿ ಶಂಕು ಸ್ಥಾಪನೆ, ಉದ್ಘಾಟನೆ ಮಾಡಿಸುತ್ತಿದ್ದಾರೆ ಎಂದು ಹೇಳಿದರು.
ಚಾಮುಂಡೇಶ್ವರಿ ಕ್ಷೇತ್ರ ನನ್ನ ಕುಟುಂಬ ಇದ್ದಂತೆ, ಸಿದ್ದರಾಮಯ್ಯ ಅವರೇ ನಿಲ್ಲಲಿ, ಬೇರೆಯಾರನ್ನೇ ನಿಲ್ಲಿಸಲಿ. ಕ್ಷೇತ್ರದ ಜನ ಕಾಂಗ್ರೆಸ್ ಸೋಲಿಸಿ, ನನ್ನನ್ನು ಗೆಲ್ಲಿಸುತ್ತಾರೆ. ಆ ಮೂಲಕ ಕುಮಾರಸ್ವಾಮಿಯವರಿಗೆ ಮುಖ್ಯಮಂತ್ರಿ ಪಟ್ಟ ಕಟ್ಟುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
SPB: ಎಸ್ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.