‘ನಾಯಕತ್ವ ಶಿಬಿರ ಅಗತ್ಯ’
Team Udayavani, Nov 8, 2017, 12:47 PM IST
ಮೂಲ್ಕಿ: ಬೆಳೆಯುವ ಯುವ ಶಕ್ತಿಯ ಪ್ರತಿಭೆಯನ್ನು ಹೊರತರಲು ನಾಯಕತ್ವದ ಬಗ್ಗೆ ನೀಡಲಾಗುವ ತರಬೇತಿ ಅತ್ಯಂತ ಪರಿಣಾಮಕಾರಿಯಾಗಿ ಯುವಕರನ್ನು ಜಾಗ್ರತಗೊಳಿಸಬಲ್ಲದು ಎಂದು ಮೂಲ್ಕಿ ನಾರಾಯಣ ಗುರು ಶಿಕ್ಷಣ ಸಂಸ್ಥೆಗಳ ಸಂಚಾಲಕ ಎಚ್. ವಿ.ಕೊಟ್ಯಾನ್ ಹೇಳಿದರು.
ಅವರು ಮೂಲ್ಕಿ ಯುವವಾಹಿನಿಯ ಘಟಕದ ಆಶ್ರಯದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಮೂಲಕ ಘಟಕದ ಪದಾಧಿಕಾರಿಗಳಿಗೆ ಹಮ್ಮಿಕೊಂಡ ಚೈತನ್ಯ-2017 ನಾಯಕತ್ವ ಶಿಬಿರವನ್ನು ಉದ್ಘಾಟಿಸಿದರು.
ಶಿಬಿರದ ಮುಖ್ಯ ಸಂಪನ್ಮೂಲ ವ್ಯಕ್ತಿ ರಾಜೇಂದ್ರ ಭಟ್ ಕಾರ್ಕಳ ಮಾತನಾಡಿ, ಯುವವಾಹಿನಿ ಎರಡೂವರೆ ದಶಕಗಳಿಂದ ಶ್ರೀ ನಾರಾಯಣ ಗುರುಗಳ ತತ್ವಗಳಡಿಯಲ್ಲಿ ಜಾತಿ, ಮತಗಳ ಅಂತರವಿಲ್ಲದೆ ಸಮಾಜ ಮುಖಿಯಾಗಿ ಮಾಡುತ್ತಿರುವ ಸೇವೆಗಾಗಿ ರಾಜ್ಯೋತ್ಸವ ಪ್ರಶಸ್ತಿಯ ಮೂಲಕ ಗೌರವ ಪಡೆದಿರುವುದು ಹೆಮ್ಮೆಯ ವಿಚಾರ ಎಂದರು.
ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ, ಮೂಲ್ಕಿ ಘಟಕದ ಅಧ್ಯಕ್ಷೆ ರಕ್ಷಿತಾ ಯೋಗೀಶ್ ಕೋಟ್ಯಾನ್ ಉಪಸ್ಥಿತರಿದ್ದರು. ರಾಜೇಶ್ ಸುವರ್ಣ, ನರೇಶ್ ಕುಮಾರ್, ರಘುನಾಥ್ ಮಾಬಿಯಾನ್, ಉದಯ ಅಮೀನ್ ಮಟ್ಟು, ಅರುಣಾ ಪ್ರಕಾಶ್ ಸುವರ್ಣ ವೇದಿಕೆಯಲ್ಲಿದ್ದರು. ವಿಜಯ ಕುಮಾರ್ ಕುಬೆವೂರು ನಿರ್ವಹಿಸಿದರು. ಕಾರ್ಯದರ್ಶಿ ಸತೀಶ್ ಕಿಲ್ಪಾಡಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur: ಅತ್ಯಾ*ಚಾರ ಪ್ರಕರಣ: ಆರೋಪಿಗೆ ಜಾಮೀನು
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.