ರಾಜ್ಯಸಭೆಗೆ ರಘುರಾಮ ರಾಜನ್ ? ಆಪ್ ನಾಮಕರಣ ಸಾಧ್ಯತೆ
Team Udayavani, Nov 8, 2017, 3:47 PM IST
ಹೊಸದಿಲ್ಲಿ : ಮುಂದಿನ ವರ್ಷ ಜನವರಿಯಲ್ಲಿ ತೆರವಾಗುವ ದಿಲ್ಲಿಯ ಮೂರು ರಾಜ್ಯಸಭಾ ಸ್ಥಾನಗಳಿಗೆ ಆಮ್ ಆದ್ಮಿ ಪಕ್ಷ ಹೊರಗಿನ ಮಹತ್ವದ ವ್ಯಕ್ತಿಗಳನ್ನು ನಾಮಕರಣ ಮಾಡುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.
ಅಂತೆಯೇ ಈ ಮೂರರಲ್ಲಿ ಒಂದು ರಾಜ್ಯಸಭಾ ಸ್ಥಾನಕ್ಕೆ ಮಾಜಿ ಆರ್‌ಬಿಐ ಗವರ್ನರ್ ರಘುರಾಮ ರಾಜನ್ ಅವರ ಹೆಸರನ್ನು ಆಪ್ ಸೂಚಿಸುವ ಸಾಧ್ಯತೆ ಇದೆ.
ರಾಜನ್ ಅವರನ್ನು ರಾಜ್ಯಸಭಾ ಸ್ಥಾನಕ್ಕೆ ನಾಮಕರಣ ಮಾಡುವ ಕುರಿತು ಆಮ್ ಆದ್ಮಿ ಪಕ್ಷ ತನ್ನ ಸಭೆಯಲ್ಲಿ ಚರ್ಚಿಸಿದೆ. ಅಂತೆಯೇ ಅದು ರಾಜನ್ ಗೆ ಈ ಸಂಬಂಧ ಅಧಿಕೃತ ಇ-ಮೇಲ್ ರವಾನಿಸಿದೆ; ರಾಜನ್ ಇದಕ್ಕೆ ಇನ್ನೂ ಉತ್ತರಿಸಬೇಕಷ್ಟೇ.
ಆರ್‌ಬಿಐ ಗವರ್ನರ್ ಹುದ್ದೆಯಿಂದ ಇಳಿದ ಬಳಿಕ ರಾಜನ್ ಅವರ ಹೆಸರು ನೊಬೆಲ್ ಅರ್ಥಶಾಸ್ತ್ರ ಪಾರಿತೋಷಕಕ್ಕೆ ಸೂಚಿಸಲ್ಪಟ್ಟಿರುವುದಾಗಿ ವರದಿಯಾಗಿತ್ತು. ಅನಂತರ ರಾಜನ್ ಅವರ ಹೆಸರನ್ನು ಅಮೆರಿಕದ ಫೆಡರಲ್ ರಿಸರ್ವ್ ಬ್ಯಾಂಕ್ ಮುಖ್ಯಸ್ಥನ ಹುದ್ದೆಗೆ ಬ್ಯಾರನ್ ಸಂಸ್ಥೆ ಶಿಫಾರಸು ಮಾಡಿರುವುದಾಗಿ ವರದಿಯಾಗಿತ್ತು. ಹಾಗಾಗಿ ರಾಜನ್ ಹೆಸರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚುತ್ತಿತ್ತು.
ಇಂಟರ್‌ನ್ಯಾಶನಲ್ ಮಾನಿಟರಿ ಫಂಡ್ (ಐಎಂಎಫ್) ಇದರ ಮಾಜಿ ಮುಖ್ಯ ಅರ್ಥಶಾಸ್ತ್ರಜ್ಞರಾಗಿರುವ ರಾಜನ್, 1992ರ ಬಳಿಕದಲ್ಲಿ ಆರ್‌ಬಿಐ ಗವರ್ನರ್ ಆಗಿ ಐದು ವರ್ಷಗಳ ಅವಧಿ ಪೂರೈಸಿದ ಮೊದಲ ಗವರ್ನರ್ ಎನಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.