ಕಂಬಳ ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ
Team Udayavani, Nov 10, 2017, 6:00 AM IST
ಬೆಂಗಳೂರು: ಕರಾವಳಿ ಭಾಗದ ಸಾಂಪ್ರದಾಯಿಕ ಕ್ರೀಡೆ ಕಂಬಳಕ್ಕೆ ಕಾನೂನಿನ ಮಾನ್ಯತೆ ನೀಡಲು ಬೆಳಗಾವಿ ಅಧಿವೇಶನದಲ್ಲಿ ಮಸೂದೆ ಮಂಡನೆ ಮಾಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಕಂಬಳ ಆಚರಣೆಯಿಂದ ಪ್ರಾಣಿಗಳಿಗೆ ಹಿಂಸೆಯಾಗುತ್ತದೆ ಎಂದು ಪ್ರಾಣಿ ದಯಾ ಸಂಘದವರು ಕೋರ್ಟ್ ಮೆಟ್ಟಿಲೇರಿದ್ದರಿಂದ ಸ್ಥಗಿತಗೊಂಡಿದ್ದ ಕಂಬಳ ಕ್ರೀಡೆಗೆ ಕಾನೂನು ಮಾನ್ಯತೆ ನೀಡಲು ರಾಜ್ಯ ಸರಕಾರ ಪ್ರಾಣಿ ಹಿಂಸೆ ತಡೆ ಕಾಯ್ದೆಗೆ ತಿದ್ದುಪಡಿ ತರಲು ಅಧ್ಯಾದೇಶ ಜಾರಿಗೊಳಿಸಿತ್ತು. ರಾಜ್ಯ ಸರಕಾರದ ಅಧ್ಯಾದೇಶಕ್ಕೆ ಇತ್ತೀಚೆಗೆ ರಾಷ್ಟ್ರಪತಿ ಒಪ್ಪಿಗೆ ಸೂಚಿಸಿದ್ದರು. ರಾಷ್ಟ್ರಪತಿಗಳ ಅಂಕಿತ ಪಡೆದುಕೊಂಡಿರುವ ಮಸೂದೆಯನ್ನು ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಮಂಡನೆ ಮಾಡಲಾಗುವುದು ಎಂದು ಕಾನೂನು ಸಚಿವ ಟಿ.ಬಿ. ಜಯಚಂದ್ರ ಹೇಳಿದ್ದಾರೆ.
ರಾಜ್ಯ ಸರಕಾರದ ಅಧ್ಯಾದೇಶಕ್ಕೆ ತಡೆಯಾಜ್ಞೆ ನೀಡುವಂತೆ ಪ್ರಾಣಿ ದಯಾ ಸಂಘ ಸುಪ್ರಿಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಸುಪ್ರೀಂ ಕೋರ್ಟ್ ಕಂಬಳ ಆಚರಣೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿ ಪ್ರಕರಣವನ್ನು ನವೆಂಬರ್ 13ಕ್ಕೆ ವಿಚಾರಣೆ ಮುಂದೂಡಿತ್ತು.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ರಾಣಿ ಅಬ್ಬಕ್ಕ ಭವನ ನಿರ್ಮಾಣ ಮಾಡಲು ಈಗಾಗಲೇ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, 8 ಕೋಟಿ ರೂಪಾಯಿ ಪರಿಷ್ಕೃತ ಮೊತ್ತಕ್ಕೆ ಗುರುವಾರ ನಡೆದ ಸಂಪುಟ ಸಭೆ ಅನುಮೋದನೆ ನೀಡಿದೆ. ಈಗಾಗಲೇ ರಾಜ್ಯ ಸರಕಾರ 2 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಭವನ ನಿರ್ಮಾಣದ ವೆಚ್ಚವನ್ನು ಪರಿಷ್ಕೃರಿಸುವಂತೆ ಮನವಿ ಬಂದ ಹಿನ್ನೆಲೆಯಲ್ಲಿ ಸಂಪುಟ ಪರಿಷ್ಕೃತ ಮೊತ್ತಕ್ಕೆ ಅನುಮೋದನೆ ನೀಡಿದೆ ಎಂದು ಜಯಚಂದ್ರ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Encounter: ನಕ್ಸಲ್ ವಿಕ್ರಂ ಗೌಡ ತಂಡದ ಬೇಟೆಗೆ ಎಎನ್ಎಫ್ ‘ಆಪರೇಷನ್ ಮಾರುವೇಷ’!
Naxal Activity: ರಾಜ್ಯದಲ್ಲಿ ನಕ್ಸಲ್ ಚಳವಳಿ ಅಂತ್ಯಗೊಂಡೀತೇ?
Debt Reduction: ನಬಾರ್ಡ್ ಸಾಲ ಕಡಿತ: ಪ್ರಧಾನಿ ಮೋದಿ, ಶಾ ಭೇಟಿಗೆ ರಾಜ್ಯ ಸರಕಾರದ ನಿರ್ಧಾರ
Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್ ಶಾಸಕರ ಪಟ್ಟು
Bengaluru: ಇವಿ ಬೈಕ್ ಶೋ ರೂಮ್ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.